ಕೋವಿಡ್ ಜಾಗೃತಿ ಮೂಡಲಿ: ಮಾಡಾಳ್
Team Udayavani, May 2, 2020, 5:46 PM IST
ಚನ್ನಗಿರಿ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಆಹಾರ ಕಿಟ್ ವಿತರಿಸಿದರು
ಚನ್ನಗಿರಿ: ತಾಲೂಕಿನಾದ್ಯಂತ ಅಹಾರ ಧಾನ್ಯಗಳ ಕಿಟ್ ವಿತರಣೆ ಜೊತೆಗೆ ಕೋವಿಡ್ ಸೋಂಕಿನ ಬಗ್ಗೆ ಜಾಗೃತಿಯನ್ನೂ ಮೂಡಿಸಲಾಗುತ್ತಿದೆ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿದರು.
ಶುಕ್ರವಾರ ತಾಲೂಕಿನ ಕೋಗಲೂರು, ಬೆಳ್ಳಿಗನೂಡು, ತಣಿಗೆರೆ, ಮೇದಿಕೆರೆ ಗ್ರಾಪಂ ವ್ಯಾಪ್ತಿಯ ಬಡವರಿಗೆ ಹಮ್ಮಿಕೊಂಡಿದ್ದ ಅಹಾರ ಧಾನ್ಯ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಕೋವಿಡ್ ಸೋಂಕಿನ ಕುರಿತು ಜನರಲ್ಲಿ ಅರಿವು ಮೂಡಿಸುವ ಅಗತ್ಯವಿದೆ. ಕೆಲವರು ತಮ್ಮಲ್ಲಿ ಸೋಂಕಿನ ಲಕ್ಷಣಗಳಿದ್ದರೂ ಆಸ್ಪತ್ರೆಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಅವರ ಸಂಪರ್ಕದಲ್ಲಿರುವವರಿಗೂ ಸೋಂಕು ಹರಡುತ್ತದೆ ಎಂಬ ಸಾಮಾನ್ಯ ಜ್ಞಾನವೂ ಇಲ್ಲದಂತಾಗಿದೆ. ಸೋಂಕಿನ ಲಕ್ಷಣಗಳನ್ನು ಮುಚ್ಚಿಡದೆ ಆರೋಗ್ಯ ಕೇಂದ್ರಗಳಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದರು.
ತಾಲೂಕಿನಲ್ಲಿ ಬಡವರನ್ನು ಗುರುತಿಸಿ 25 ಸಾವಿರ ರೂ. ಗಿಂತಲೂ ಹೆಚ್ಚು ಆಹಾರ ಧಾನ್ಯಗಳ ಕಿಟ್ ಗಳನ್ನು ವಿತರಣೆ ಮಾಡುತ್ತಿದ್ದೇವೆ. ಮತ್ತಷ್ಟು ಆಹಾರ ಕಿಟ್‌ಗಳನ್ನು ವಿತರಿಸಲಾಗುವುದು
ಎಂದರು. ಜಿಪಂ ಸದಸ್ಯ ಪಿ. ವಾಗೀಶ್, ತಾಪಂ ಇಒ ಎಂ.ಆರ್. ಪ್ರಕಾಶ್, ತಹಶೀಲ್ದಾರ್ ಗಿರೀಶ್‌ಬಾಬು, ಸಿಪಿಐ ಆರ್.ಆರ್. ಪಾಟೀಲ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
MUST WATCH
ಹೊಸ ಸೇರ್ಪಡೆ
BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್ ಕಾರ್ಡ್ ಸ್ಪರ್ಧಿಗಳು
Bengaluru: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.