ಮಾದರಿ ತಾಲೂಕು ಮಾಡುವ ಗುರಿ
ಇಟ್ಟಿಗೆ ಗ್ರಾಮದಲ್ಲಿ 2.2 ಕೋಟಿ ರೂ. ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ
Team Udayavani, Feb 15, 2020, 3:40 PM IST
ಚನ್ನಗಿರಿ: ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಿಂದ ದೇಶದ ಪ್ರಗತಿ ಎನ್ನುವ ಚಿಂತನೆಯೊಂದಿಗೆ ಕ್ಷೇತ್ರಕ್ಕೆ ಕೋಟಿಗಟ್ಟಲೆ ಅನುದಾನ ತಂದು ಅಭಿವೃದ್ಧಿ ಕೈಗೊಳ್ಳಲಾಗುತ್ತಿದೆ. ಈ ಕಾರ್ಯಕ್ಕೆ ಪ್ರತಿಯೊಬ್ಬರ ಸಹಕಾರ ಬೇಕಿದೆ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿದರು.
ತಾಲೂಕಿನ ಇಟ್ಟಿಗೆ ಗ್ರಾಮದಲ್ಲಿ 2.20 ಕೋಟಿ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಚನ್ನಗಿರಿಯನ್ನು ರಾಜ್ಯದಲ್ಲಿಯೇ ಮಾದರಿ ತಾಲೂಕಾಗಿಸುವ ಗುರಿ ಇದ್ದು, ಹಲವಾರು ಅಭಿವೃದ್ಧಿ ಚಿಂತನೆಗಳಿವೆ. ಅವುಗಳ ಸಾಕಾರಕ್ಕೆ ಕ್ಷೇತ್ರದಲ್ಲಿ ಪ್ರತಿಯೊಬ್ಬರು ಪಕ್ಷಭೇದ ಮರೆತು ಕೈಜೋಡಿಸಿದರೆ ಇಡಿ ರಾಜ್ಯವೇ ನಮ್ಮ ತಾಲೂಕಿನತ್ತ ತಿರುಗಿ ನೋಡುವಂತಹ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮೂಲಭೂತ ಸೌಕರ್ಯವಿಲ್ಲದಂತಹ ಯಾವುದೇ ಹಳ್ಳಿಗಳು ಕಂಡುಬಂದರೆ ಆ ಕುರಿತು ಮಾಹಿತಿ ಒದಗಿಸಬೇಕು. ಈಗಾಗಲೇ ಕುಡಿಯುವ ನೀರು, ರಸ್ತೆ, ಚರಂಡಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು ಈ ಸೌಕರ್ಯಗಳಿದ ಹಳ್ಳಿ ತಿಳಿಸಿದರೆ ಅಭಿವೃದ್ಧಿಪಡಿಸಲಾಗುವುದು. ಶಾಸಕರು ಎನ್ನುವ ಹಿಂಜರಿಕೆ ಯಾರಿಗೂ ಬೇಡ. ಯಾರೇ ಬಂದರು ಸ್ಪಂದಿಸಲಾಗುವುದು. ಯಾವುದೇ ಕೆಲಸವಾಗಬೇಕಿದ್ದರೂ ನನ್ನನ್ನು ಸಂಪರ್ಕಿಸಿ ಎಂದು ಜನತೆಗೆ ತಿಳಿಸಿದರು.
ತಾಪಂ ಅಧ್ಯಕ್ಷೆ ಉಷಾ ಶಶಿಕುಮಾರ್ ಮಾತನಾಡಿ, ಕೇಂದ್ರ-ರಾಜ್ಯ ಸರ್ಕಾರದಿಂದ ಸಾಕಷ್ಟು ಅನುದಾನ ತಂದು ಕ್ಷೇತ್ರದ ಅಭಿವೃದ್ಧಿಗೆ ಶಾಸಕರು ಸಾಕಷ್ಟು ಶ್ರಮವಹಿಸುತ್ತಿದ್ದಾರೆ. ಅವರಿಗೆ ನಾವೆಲ್ಲರೂ ಶಕ್ತಿ ತುಂಬುವ ಕೆಲಸ ಮಾಡಿದರೆ ಯಾವುದೇ ಗ್ರಾಮದಲ್ಲಿ ಸಮಸ್ಯೆಗಳಿವೆ ಎನ್ನುವ ಮಾತುಗಳೇ ಕೇಳಿ ಬರುವುದಿಲ್ಲ. ಆದ್ದರಿಂದ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಬಿಜೆಪಿ ಮುಖಂಡ ಇಟ್ಟಿಗೆ ಹೇಮಂತ್, ಮಂಟರಘಟ್ಟ ಬಸವರಾಜ್, ಗ್ರಾಪಂ ಅಧ್ಯಕ್ಷೆ ರೇಣುಕ ಬಸವರಾಜ್, ಗ್ರಾಮಸ್ಥರು ಮತ್ತು ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.