ಮಕ್ಕಳಲ್ಲಿ ಕಾನೂನು ಅರಿವು ಅಗತ್ಯ
Team Udayavani, Sep 23, 2018, 5:25 PM IST
ಸಿರುಗುಪ್ಪ: ಸ್ವಾಭಿಮಾನದಿಂದ ಕೂಡಿದ ಸ್ವಾವಲಂಬನೆ ಜೀವನ ಕಟ್ಟಿಕೊಳ್ಳುವುದು ವಿದ್ಯಾರ್ಥಿಗಳ ಜವಾಬ್ದಾರಿಯಾಗಿದೆ. ಇಂದಿನ ಮಕ್ಕಳೇ ದೇಶದ ಆಸ್ತಿಯಾಗಿದ್ದು, ನಿಮ್ಮ ಉತ್ತಮ ಜೀವನ ಹಾಗೂ ಭವ್ಯ ಭವಿಷ್ಯವನ್ನು ರೂಪಿಸಿಕೊಳ್ಳಲು ಕಾನೂನು ಸಾಕ್ಷರತೆಯ ಅರಿವು ಪಡೆದುಕೊಳ್ಳುವುದು ಇಂದಿನ ಜೀವನದಲ್ಲಿ ಅತ್ಯವಶ್ಯ ಎಂದು ಜೆಎಂಎಫ್‌ಸಿ ನ್ಯಾಯಾಧೀಶರಾದ ಧನೇಶ್ ಎಂ. ಶಿವಪ್ಪ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ನಗರದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ತಾಲೂಕು ಕಾನೂನು
ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ತಾಲೂಕಿನ ವಿವಿಧ ಇಲಾಖೆಗಳ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹೆಣ್ಣು ಮಕ್ಕಳಿಗೆ 18 ವರ್ಷ ತುಂಬುವುದರೊಳಗೆ ಪೋಷಕರು ಮದುವೆ ಮಾಡಲು ಮುಂದಾಗುತ್ತಿದ್ದು, ಬಾಲ್ಯ ವಿವಾಹ ಕಾನೂನು ಬಾಹಿರವಾಗಿದೆ. ಹೆಣ್ಣು ಮಕ್ಕಳು ಪೋಷಕರ ಮಾತು ಕೇಳದೆ ಬಾಲ್ಯವಿವಾಹ ಮಾಡಿಕೊಳ್ಳಬಾರದು.
ವಯಸ್ಸಾಗುವವರೆಗೆ ನಿಮ್ಮ ಉತ್ತಮ ಜೀವನ ರೂಪಿಸಿಕೊಳ್ಳಲು ಉನ್ನತ ಶಿಕ್ಷಣ ಪಡೆಯುವುದರ ಕಡೆ
ಹೆಚ್ಚಿನ ಗಮನಹರಿಸಬೇಕೆಂದು ವಿದ್ಯಾರ್ಥಿನಿಯರಿಗೆ ಸಲಹೆ ನೀಡಿದರು. ಜನಸಾಮಾನ್ಯರಿಗೂ ಕಾನೂನಿನ ನೆರವು
ದೊರೆಯಬೇಕೆನ್ನುವ ಉದ್ದೇಶದಿಂದ ಸರ್ವೋತ್ಛ ನ್ಯಾಯಾಲಯದ ಆದೇಶದಂತೆ ರಾಷ್ಟ್ರ ಮಟ್ಟದಿಂದ ತಾಲೂಕು ಮಟ್ಟದವರೆಗೆ ಕಾನೂನು ಸೇವಾ ಪ್ರಾಧಿಕಾರ ಸಮಿತಿ ಮೂಲಕ ಆರ್ಥಿಕ ದುರ್ಬಲರು, ಮಹಿಳೆಯರು ಕಾನೂನಿನ ನೆರವು ಪಡೆಯಬಹುದು ಎಂದು ತಿಳಿಸಿದರು.
ಗ್ರೇಡ್-2 ತಹಶೀಲ್ದಾರ್ ಬಿ.ಮಲ್ಲೇಶಪ್ಪ, ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಅಧ್ಯಕ್ಷ ಚನ್ನಪ್ಪ ಪಾಟೀಲ್, ದೈಹಿಕ ಶಿಕ್ಷಣ ಪರೀವಿಕ್ಷಕ ವಿಜಯರಂಗರೆಡ್ಡಿ, ವಕೀಲರ ಸಂಘದ ಅಧ್ಯಕ್ಷ ಕೆ.ಶ್ರೀನಿವಾಸ, ಕಾರ್ಯದರ್ಶಿ ಮಂಜುನಾಥಗೌಡ, ಹಿರಿಯ ವಕೀಲರಾದ ಎಚ್,ಕೆ,ಮಲ್ಲಿಕಾರ್ಜುನಸ್ವಾಮಿ ವೀರಣ್ಣ ಪತ್ತಾರ್, ಎ.ಶಿವರುದ್ರಗೌಡ, ಬಿ.ಜಿ.ಸುಧಾಕರರೆಡ್ಡಿ, ದೇಶನೂರು
ಮಂಜುನಾಥ್, ಕೆ.ವೀರೇಶಗೌಡ, ಮಲ್ಲಿಗೌಡ ಸೇರಿದಂತೆ ಇತರೆ ವಕೀಲರು, ವಸತಿ ನಿಲಯದ ವಿದ್ಯಾರ್ಥಿನಿಯರು
ಪಾಲ್ಗೊಂಡಿದ್ದರು.
ಹೆಣ್ಣು ಮಕ್ಕಳಿಗೆ 18 ವರ್ಷ ತುಂಬುವುದರೊಳಗೆ ಪೋಷಕರು ಮದುವೆ ಮಾಡಲು ಮುಂದಾಗುತ್ತಿದ್ದು, ಬಾಲ್ಯ ವಿವಾಹ ಕಾನೂನು ಬಾಹಿರವಾಗಿದೆ. ಹೆಣ್ಣು ಮಕ್ಕಳು ಪೋಷಕರ ಮಾತು ಕೇಳದೆ ಬಾಲ್ಯವಿವಾಹ ಮಾಡಿಕೊಳ್ಳಬಾರದು. ವಯಸ್ಸಾಗುವವರೆಗೆ ನಿಮ್ಮ ಉತ್ತಮ ಜೀವನ ರೂಪಿಸಿಕೊಳ್ಳಲು ಉನ್ನತ ಶಿಕ್ಷಣ ಪಡೆಯಲು ಹೆಚ್ಚಿನ ಗಮನಹರಿಸಬೇಕು.
ಧನೇಶ ಎಂ.ಶಿವಪ್ಪ, ಜೆಎಂಎಫ್‌ಸಿ ನ್ಯಾಯಾಧೀಶರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.