ಭೂಮಿ ಸಂತ್ರಸ್ತರಿಗೆ ಪರಿಹಾರ ನೀಡಿ
Team Udayavani, Feb 18, 2020, 12:16 PM IST
ಸಾಂದರ್ಭಿಕ ಚಿತ್ರ
ಹೂವಿನಹಡಗಲಿ: ತಾಲೂಕಿನ ಸಿಂಗಟಾಲೂರು ಏತ ನೀರಾವರಿ ಯೋಜನೆ ಕಾಲುವೆ ನಿರ್ಮಾಣಕ್ಕಾಗಿ ರೈತರು ಕಳೆದುಕೊಂಡಿರುವ ಭೂಮಿಗೆ ಇದುವರೆಗೂ ಪರಿಹಾರ ದೊರಕಿಲ್ಲ. ಈ ಕೂಡಲೇ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಮುಂಡರಗಿ ತಾಲೂಕಿನ ಮುಂಡವಾಡ, ಹಮ್ಮಿಗಿ ಗ್ರಾಮದ ರೈತರು ಹಡಗಲಿ ವಿಶೇಷ ಭೂಸ್ವಾಧೀನ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರೈತರು ನಮ್ಮದು ಇರುವ ಆಲ್ಪ ಸ್ವಲ್ಪ ಭೂಮಿ ಸಿಂಗಟಾಲೂರು ಯೋಜನೆ ಕಾಲುವೆ ನಿರ್ಮಾಣಕ್ಕೆ ಹೋಗಿದೆ. ಭೂಮಿ ಕಳೆದುಕೊಂಡು ಸುಮಾರು ವರ್ಷಗಳಾದರೂ ಯಾವುದೇ ಪರಿಹಾರ ದೊರಕಿಲ್ಲ. ಇತ್ತ ಸ್ವಾಧೀನ ಪ್ರಕ್ರಿಯೆಯಲ್ಲಿರುವುದರಿಂದಾಗಿ ಉಳಿದ ಭೂಮಿಯನ್ನು ಅಣ್ಣ ತಮ್ಮಂದಿರುವ ಪಾಲು ಮಾಡಿಕೊಳ್ಳುವ ಹಾಗಿಲ್ಲ. ಕಷ್ಟಕ್ಕೆ ಖರೀದಿ ಕೊಡಲು ಬರುತ್ತಿಲ್ಲ. ಭೂಮಿ ಮೇಲೆ ಸಾಲ ಸಹ ತೆಗೆದುಕೊಳ್ಳಲು ಬರುತ್ತಿಲ್ಲ. ಹೀಗಾದಲ್ಲಿ ನಮ್ಮ ಜೀವನ ನಿರ್ವಹಣೆ ಹೇಗೆ ಎಂದು ಭೂಮಿ ಕಳೆದುಕೊಂಡ ರೈತ ತಿರುಕಪ್ಪ ಹೇಳಿದರು.
ಇನ್ನೂ ದೋಣಿ ಗ್ರಾಮದ ರೈತ ಮಲ್ಲಪ್ಪ ಭೂಮಿ ಕಳೆದುಕೊಂಡು ಪರಿಹಾರಕ್ಕಾಗಿ ಕಚೇರಿಗೆ ಅಲೆದು ಅಲೆದು ಸಾಕಾಗಿದೆ. ಒಂದು ಭಾರಿ ಕಚೇರಿಗೆ ಬರಬೇಕಾದಲ್ಲಿ ಸುಮಾರು ನೂರಾರು ರೂಗಳು ಖರ್ಚಾಗುತ್ತವೆ. ಹಣ ಖರ್ಚು ಮಾಡಿಕೊಂಡು ಕಚೇರಿಗೆ ಬಂದಲ್ಲಿ ಇಲ್ಲಿ ನಮ್ಮ ಗೋಳು ಕೇಳ್ಳೋರು ಯಾರು ಇರುವುದಿಲ್ಲ ಎನ್ನುತ್ತಾರೆ. ಇನ್ನೂ ನಾವು ಪರಿಹಾರಕ್ಕಾಗಿ ಇಂದು ಕಚೇರಿಗೆ ಬಂದು ಪ್ರತಿಭಟನೆ ನಡೆಸುವುದಾಗಿ ಮೊದಲೇ ತಿಳಿಸಿದ್ದರೂ ಕಚೇರಿಯಲ್ಲಿ ಯಾರು ಇಲ್ಲ ನಮ್ಮ ಸಮಸ್ಯೆ ಕೇಳ್ಳೋರು ಯಾರು? ಎಂದು ರೈತರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದರು.
ಅಧಿಕಾರಿಗಳು ಬಂದು ನಮ್ಮ ಸಮಸ್ಯೆ ಬಗೆಹರಿಸುವವರೆಗೂ ನಾವು ಪ್ರತಿಭಟನೆ ಮುಂದುವರೆಸುತ್ತೇವೆ ಎಂದು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಎಂ.ಎಸ್. ಪಾಟೀಲ್, ಬಸಪ್ಪ, ಎಂ.ಸಿ. ಗದ್ದಿಕೇರಿ, ಎಚ್.ಎಂ. ಪಾಟೀಲ್, ಹನುಂತರಾವ್, ಪಕ್ಕೀರಪ್ಪ ನಾಗಪ್ಪ ಪತ್ತಾರ, ಬಸಪ್ಪ ವಡ್ಡಟ್ಟಿ ಶ್ರೀಕಾಂತಪ್ಪ, ಹನುಂತಪ್ಪ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.