ಬಳ್ಳಾರಿ ಮಹಾನಗರ ಪಾಲಿಕೆ ಟಿಕೆಟ್‌ಗಾಗಿ ಪೈಪೋಟಿ

ಕಾಂಗ್ರೆಸ್‌-ಬಿಜೆಪಿಯಲ್ಲಿ  ಹೆಚ್ಚಿದ ಆಕಾಂಕ್ಷಿ ಗಳು

Team Udayavani, Apr 6, 2021, 7:41 PM IST

jkh

ಬಳ್ಳಾರಿ: ಗಣಿನಗರಿ ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸುವ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಕಾಂಗ್ರೆಸ್‌-ಬಿಜೆಪಿ ಟಿಕೆಟ್‌ಗಾಗಿ ಎಲ್ಲ ವಾರ್ಡ್‌ಗಳಲ್ಲಿ ಪೈಪೋಟಿ ಏರ್ಪಟ್ಟಿದ್ದು, ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಆಯ್ಕೆ ಸಮಿತಿಗೆ ತಲೆನೋವಾಗಿ ಪರಿಗಣಿಸಿದ್ದು ಯಾರಿಗೆ ಟಿಕೆಟ್‌ ನೀಡಿದರೆ ಯಾರು ಬಂಡಾಯ ಏಳುತ್ತಾರೋ ಎಂಬ ಆತಂಕವೂ ಸಮಿತಿಯನ್ನು ಕಾಡುತ್ತಿದೆ.

ಬಳ್ಳಾರಿ ಮಹಾನಗರ ಪಾಲಿಕೆಗೆ ಏ. 27ರಂದು ಚುನಾವಣೆ ನಡೆಯಲಿದೆ. ಇದೇ ಏಪ್ರಿಲ್‌ 8ರಂದು ಅಧಿ ಸೂಚನೆ ಪ್ರಕಟವಾಗಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಚಾಲನೆ ಪಡೆದುಕೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌-ಬಿಜೆಪಿ ಎರಡೂ ಪಕ್ಷಗಳಲ್ಲಿ ಚುನಾವಣಾ ಪ್ರಕ್ರಿಯೆಗಳು ಚುರುಕು ಪಡೆದುಕೊಂಡಿವೆ.

ಬಿಜೆಪಿ ಪಕ್ಷದಲ್ಲಿ ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ಶಾಸಕ ಜಿ.ಸೋಮಶೇಖರ ರೆಡ್ಡಿ, ಮಾಜಿ ಸಂಸದರಾದ ಸಣ್ಣ ಪಕ್ಕೀರಪ್ಪ, ಜೆ. ಶಾಂತಾ ಸೇರಿ ಹಲವರು ಎಲ್ಲ ವಾರ್ಡ್‌ಗಳಿಗೆ ತಾವೇ ಖುದ್ದಾಗಿ ಆಕಾಂಕ್ಷಿಗಳಿಂದ ಅರ್ಜಿಗಳನ್ನು ಸ್ವೀಕರಿಸುತ್ತಿದ್ದಾರೆ. ಈ ವೇಳೆ ಪ್ರತಿ ವಾರ್ಡ್‌ಗಳಿಂದ ಕನಿಷ್ಠ 5ರಿಂದ 10 ಆಕಾಂಕ್ಷಿಗಳು ಸ್ಪ ರ್ಧಿಸಲು ಟಿಕೆಟ್‌ ಗಾಗಿ ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆ.

ಅದೇ ರೀತಿ ಕಾಂಗ್ರೆಸ್‌ನವರು ಆಕಾಂಕ್ಷಿಗಳಿಂದ ಆಯಾ ವಾಡ್‌ ìವಾರು ಮೀಸಲಾತಿ ಅನುಗುಣವಾಗಿ ಆಕಾಂಕ್ಷಿಗಳಿಂದ ಅರ್ಜಿಗಳನ್ನು ಸ್ವೀಕರಿಸಿದ್ದು ಇಲ್ಲೂ ಪ್ರತಿಯೊಂದು ವಾರ್ಡ್‌ಗಳಿಂದ 5ಕ್ಕೂ ಹೆಚ್ಚು ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ವಾರ್ಡ್‌ವಾರು ಸಲ್ಲಿಕೆಯಾಗಿರುವ ಆಕಾಂಕ್ಷಿಗಳ ಅರ್ಜಿಗಳ ಪೈಕಿ ಸಾಮಾನ್ಯ, ಹಿಂದುಳಿದ ವರ್ಗಗಳ ಮೀಸಲು ವಾರ್ಡ್‌ಗಳಲ್ಲಿ ಹೆಚ್ಚಿನ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಇನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವ ಕೆಲವೊಂದು ವಾರ್ಡ್‌ಗಳಲ್ಲಿ ಹೆಚ್ಚಿನ ಸಂಖ್ಯೆ ಆಕಾಂಕ್ಷಿಗಳಿಂದ ಅರ್ಜಿಗಳು ಸಲ್ಲಿಕೆಯಾಗಿವೆ.

ವಾರ್ಡ್‍ಗಳಲ್ಲಿ ಸ್ಪರ್ಧಾಕಾಂಕ್ಷಿಗಳ ಸಂಖ್ಯೆ ಎಷ್ಟೇ ಇದ್ದರೂ ಪಕ್ಷದಿಂದ ಒಬ್ಬರಿಗೆ ಮಾತ್ರ ಬಿ ಫಾರ್ಮ್ ನೀಡಿ ಕಣಕ್ಕಿಳಿಸಲು ಸಾಧ್ಯ. ಹೀಗಾಗಿ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಸಮಿತಿಗೆ ತಲೆನೋವಾಗಿರುವುದು ಒಂದು ಕಡೆಯಾದರೆ, ಅಭ್ಯರ್ಥಿಗಳ ಅಂತಿಮ ಪಟ್ಟಿ ಹೊರಬಿದ್ದ ಬಳಿಕ ಯಾರ್ಯಾರು ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿದು ಪಕ್ಷದ ಅಭ್ಯರ್ಥಿಗೆ ಕಂಠಕ ತರಲಿದ್ದಾರೆ ಎಂಬ ಆತಂಕವೂ ಸಮಿತಿಯನ್ನು ಕಾಡುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.