ಜೀವ ಬೆದರಿಕೆ: ಸಚಿವ ಆನಂದ ಸಿಂಗ್ ಸಹಿತ ನಾಲ್ವರ ವಿರುದ್ಧ ದೂರು
Team Udayavani, Sep 1, 2022, 10:16 PM IST
ಹೊಸಪೇಟೆ: ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಆನಂದ ಸಿಂಗ್ ಸಹಿತ ನಾಲ್ವರ ವಿರುದ್ಧ ನಗರದ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆನಂದ ಸಿಂಗ್ ಅವರು ನನ್ನ ಮನೆಯನ್ನು ಕುಟುಂಬ ಸದಸ್ಯರೊಂದಿಗೆ ಸುಟ್ಟು ಹಾಕುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ, ನಗರದ ಪೋಲಪ್ಪ ಎಂಬವರು ಕುಟುಂಬ ಸದಸ್ಯರೊಂದಿಗೆ ಎಸ್ಪಿ ಕಚೇರಿ ಎದುರು ಮಂಗಳವಾರ ಮೈ ಮೇಲೆ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದರು.
ಆರೋಪ ಸತ್ಯಕ್ಕೆ ದೂರ: ಸಿಂಗ್:
ಈ ಕುರಿತು ಪ್ರತಿಕ್ರಿಯಿಸಿರುವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ನನ್ನ ಮೇಲೆ ಕೇಳಿ ಬಂದಿರುವ ಆರೋಪ ಸತ್ಯಕ್ಕೆ ದೂರವಾಗಿದೆ. ನಾನು ಪೋಲಪ್ಪ ಕುಟುಂಬಕ್ಕೆ ಯಾವುದೇ ಬೆದರಿಕೆ ಹಾಕಿಲ್ಲ. ಅವರು ನೀಡಿದ ದೂರಿನ ಆಧಾರದಲ್ಲಿ ನನ್ನ ಮೇಲೆ ಪ್ರಕರಣ ದಾಖಲಾಗಿದೆ. ಈ ಕುರಿತು ಪೊಲೀಸ್ ತನಿಖೆ ನಡೆಯಲಿ. ನನ್ನ ತಪ್ಪಿದ್ದರೆ ಕಾನೂನು ಪ್ರಕಾರ ಶಿಕ್ಷೆಯಾಗಲಿ ಎಂದರು.
ಜಾಗದ ವಿಚಾರವಾಗಿ ದೌರ್ಜನ್ಯ: ಪೋಲಪ್ಪ:
ವಿಜಯನಗರ ಕ್ಷೇತ್ರದಲ್ಲಿ ಆನಂದ ಸಿಂಗ್ ವಿರುದ್ಧ ಧ್ವನಿ ಎತ್ತಿದವರನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ. ಜಾಗದ ವಿಚಾರವಾಗಿ ನಮ್ಮ ಮೇಲೆ ದೌರ್ಜನ್ಯ ಮಾಡಲಾಗುತ್ತಿದೆ. ಸಚಿವರ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ತಡೆಯೊಡ್ಡಿದ್ದಾರೆ. ನಮಗೆ ರಕ್ಷಣೆ ನೀಡಬೇಕು ಎಂದು ಪೋಲಪ್ಪ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.