ವೇತನ ತಾರತಮ್ಯ ಖಂಡಿಸಿ ಗುತ್ತಿಗೆ ನೌಕರರ ಪ್ರತಿಭಟನೆ
Team Udayavani, Oct 7, 2019, 2:16 PM IST
ಬಳ್ಳಾರಿ: ವೇತನ ತಾರತಮ್ಯ ನೀತಿಯನ್ನು ಖಂಡಿಸಿ ಇಲ್ಲಿನ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೂರಾರು ಪೌರ ಕಾರ್ಮಿಕರು ಭಾನುವಾರ ಪ್ರತಿಭಟನೆ ನಡೆಸಿದ್ದಾರೆ.
ವಿಮ್ಸ್ ಆಸ್ಪತ್ರೆ ಆವರಣದಲ್ಲಿನ ವಿವಿಧ ಹಂತಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೊರಗುತ್ತಿಗೆ ನೌಕರರಿಗೆ ಸಮಾನ ವೇತನ ನೀಡದೇ, ಮನಸೋ ಇಚ್ಛೆಯಂತೆ ವೇತನ ಹೆಚ್ಚಳ ಮಾಡಿದ್ದಾರೆ. ಇದು ಗುತ್ತಿಗೆ ನೌಕರರನ್ನು ಕೆರಳಿಸಿದೆ. ಈ ಮೊದಲು ಸಮಾನ ಕೆಲಸಕ್ಕೆ ಸಮಾನ ವೇತನ ನಿಗದಿಪಡಿಸಿದ್ದ ವಿಮ್ಸ್ ಆಸ್ಪತ್ರೆಯ ಆಡಳಿತ ಮಂಡಳಿಯು ಇದೀಗ ತಾರತಮ್ಯ ನೀತಿಯನ್ನು ಅನುಸರಿಸುತ್ತಿದೆ.
ಆಸ್ಪತ್ರೆಯಲ್ಲಿನ ಶೌಚಾಲಯ ಸೇರಿದಂತೆ ಇನ್ನಿತರೆ ವಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ 13,807 ರೂ.ಗಳ ವೇತನ ನಿಗದಿಪಡಿಸಿದೆ. ವೈದ್ಯರ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಕೇವಲ 10,200 ರೂಗಳ ವೇತನ ನಿಗದಿಪಡಿಸಿದ್ದಾರೆ. ಹಾಗಾಗಿ, ಈ ವೇತನ ತಾರತಮ್ಯದಲ್ಲಾದ ಲೋಪದೋಷಗಳನ್ನು ಸರಿಪಡಿಸಬೇಕು ಎಂದು ಮಹಿಳಾ ಸಿಬ್ಬಂದಿ ಹೊರಗುತ್ತಿಗೆದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ನೂರಾರು ಗುತ್ತಿಗೆ ಪೌರ ಕಾರ್ಮಿಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress Politics: ಡಿಸಿಎಂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಭೇಟಿ: ಹೈಕಮಾಂಡ್ ಜತೆ ಚರ್ಚೆ
Andhra Pradesh: ಅದಾನಿ ಗ್ರೂಪ್ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?
By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ
Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ
EVM ರದ್ದು ಆಗ್ರಹಿಸಿ ಜೋಡೋ ಮಾದರಿ ಯಾತ್ರೆ: ಎಐಸಿಸಿ ಅಧ್ಯಕ್ಷ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.