ಹೊಸಪೇಟೆಯಿಂದ ಕಾಂಗ್ರೆಸ್ ಚುನಾವಣಾ ಪ್ರಚಾರ ಶುರು
Team Udayavani, Feb 5, 2018, 7:00 AM IST
ಹೊಸಪೇಟೆ: ಹೊಸಪೇಟೆಯಲ್ಲಿ ಫೆ.10ರಂದು ಆಯೋಜಿಸಿರುವ ಬೃಹತ್ ಕಾಂಗ್ರೆಸ್ ಸಮಾವೇಶದ ಮೂಲಕ ಕಾಂಗ್ರೆಸ್ ಚುನಾವಣಾ ಪ್ರಚಾರ ಕಾರ್ಯಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಚಾಲನೆ ನೀಡಲಿದ್ದಾರೆ ಎಂದು ಇಂಧನ ಸಚಿವ ಹಾಗೂ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ರಾಹುಲ್ ಗಾಂಧಿ ಪ್ರಥಮ ಬಾರಿಗೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಕನ್ನಡಿಗರ ಸ್ವಾಭಿಮಾನದ ಸಂಕೇತವಾದ, ಹಂಪಿ ವಿಜಯನಗರ ಸಾಮ್ರಾಜ್ಯದ ಹೆಬ್ಟಾಗಿಲು ಆಗಿರುವ ಹೊಸಪೇಟೆಯಿಂದಲೇ ಅವರು ತಮ್ಮ ಪ್ರಚಾರ ಕಾರ್ಯ ಆರಂಭಿಸಲಿದ್ದಾರೆ. ಇಲ್ಲಿಯ ಸಮಾವೇಶದ ನಂತರ ರಾಹುಲ್ ಗಾಂಧಿಯವರು, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅವರ ಪ್ರವಾಸದ ಪಟ್ಟಿಯನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದರು.
ಮಾಜಿ ಶಾಸಕ ಆನಂದ್ ಸಿಂಗ್, ಕೂಡ್ಲಿಗಿ ಶಾಸಕ ಬಿ.ನಾಗೇಂದ್ರ, ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ, ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ, ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕೆಂಬ ದೃಷ್ಟಿಯಿಂದ ನಮ್ಮ ಜೊತೆಗೆ ಬಂದಿದ್ದಾರೆ. ಯಾರೂ ಯಾವುದೇ ಷರತ್ತುಗಳನ್ನು ಹಾಕಿ ಪಕ್ಷಕ್ಕೆ ಸೇರ್ಪಡೆ ಆಗಿಲ್ಲ. ರಾಜ್ಯದಲ್ಲಿ ಇನ್ನೂ ಅನೇಕ ಹಾಲಿ ಹಾಗೂ ಮಾಜಿ ಶಾಸಕರು, ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆ ಆಗಲಿದ್ದಾರೆ ಎಂದರು. ಕಂಪ್ಲಿ ಶಾಸಕ ಸುರೇಶ ಬಾಬು ಆತ್ಮೀಯ ಸ್ನೇಹಿತ. ಇನ್ನು, ಮಾಜಿ ಶಾಸಕ ಗವಿಯಪ್ಪ ಆತುರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂಬ ವಿಶ್ವಾಸವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.