Shettar ಬಿಜೆಪಿಗೆ ಹೋಗಿದ್ದರಿಂದ ಕಾಂಗ್ರೆಸ್‌ಗೆ ನಷ್ಟವಿಲ್ಲ; ನಾಗೇಂದ್ರ

Team Udayavani, Jan 26, 2024, 8:08 PM IST

Shettar ಬಿಜೆಪಿಗೆ ಹೋಗಿದ್ದರಿಂದ ಕಾಂಗ್ರೆಸ್‌ಗೆ ನಷ್ಟವಿಲ್ಲ; ನಾಗೇಂದ್ರ

ಬಳ್ಳಾರಿ: ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರು ಪುನಃ ಬಿಜೆಪಿ ಸೇರುವ ನಿರ್ಧಾರವನ್ನು ಏಕೆ ಕೈಗೊಂಡರೋ ಗೊತ್ತಿಲ್ಲ. ಅವರು ಬಿಜೆಪಿಗೆ ಹೋಗಿರುವುದು ವೈಯಕ್ತಿಕವಾಗಿ ಬೇಸರವಾಗಿದೆ ಎಂದು ಸಚಿವ ಬಿ.ನಾಗೇಂದ್ರ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೆಟ್ಟರ್‌ ಅವರ ನೇತೃತ್ವದಲ್ಲಿ ಮಾಜಿ ಸಚಿವ ಶಂಕರ ಮುನೇನಕೊಪ್ಪ ಸೇರಿ ಹಲವರು ಕಾಂಗ್ರೆಸ್‌ಗೆ ಬರುವವರಿದ್ದರು. ಈ ಕುರಿತು ಮುನೇನಕೊಪ್ಪ ಅವರೇ ಮಾಧ್ಯಮಗಳ ಮುಂದೆ ಸ್ಪಷ್ಟಪಡಿಸಿ, ಬೇಸರ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

ಕಳೆದ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್‌ಗೆ ಬಂದಿದ್ದ ಶೆಟ್ಟರ್‌ ಅವರನ್ನು ಪಕ್ಷ ಉತ್ತಮವಾಗಿಯೇ ನಡೆಸಿಕೊಂಡಿದೆ. ಕಳೆದ ಚುನಾವಣೆಯಲ್ಲಿ ಟಿಕೆಟ್‌ ನೀಡಿ ಕಣಕ್ಕಿಳಿಸಿತ್ತು. ಸೋತರೂ, ವಿಧಾನ ಪರಿಷತ್‌ ಸದಸ್ಯರನ್ನಾಗಿ ಮಾಡಿತು. ಆದರೂ, ಅವರು ಬಿಜೆಪಿಗೆ ಹೋಗುವ ನಿರ್ಧಾರವನ್ನು ಏಕೆ ಕೈಗೊಂಡಿದ್ದಾರೋ, ಏನೇನು ಒತ್ತಡಗಳಿವೆಯೋ ಗೊತ್ತಿಲ್ಲ ಎಂದ ನಾಗೇಂದ್ರ, ಕಾಂಗ್ರೆಸ್‌ ಪಕ್ಷ ಸಮುದ್ರ ಇದ್ದಂತೆ. ಇಲ್ಲಿ ಹಂತ-ಹಂತವಾಗಿ ಅ ಧಿಕಾರ ಸಿಗುತ್ತಿತ್ತು. ತಾಳ್ಮೆ ವಹಿಸಬೇಕಿತ್ತು ಎಂದರು.

ಹುಬ್ಬಳ್ಳಿ-ಧಾರವಾಡ ಭಾಗದಲ್ಲಿ ಪ್ರಭಾವಿಯಾಗಿರುವ ಶೆಟ್ಟರ್‌ ಬಿಜೆಪಿ ಸೇರ್ಪಡೆಯಿಂದ ಬಳ್ಳಾರಿ ಭಾಗದಲ್ಲಿ ಯಾವುದೇ ಪರಿಣಾಮ ಬೀರಲ್ಲ. ನಮ್ಮಲ್ಲೂ ಲಿಂಗಾಯತ ಸಮುದಾಯದ ಸಚಿವರಾದ ಈಶ್ವರಖಂಡ್ರೆ, ಎಸ್‌.ಎಸ್‌.ಮಲ್ಲಿಕಾರ್ಜುನ, ಎಂ.ಬಿ.ಪಾಟೀಲ್‌, ಶ್ಯಾಮನೂರು ಶಿವಶಂಕರಪ್ಪ ಸೇರಿ ಹಲವಾರು ಪ್ರಭಾವಿ ಮುಖಂಡರು ಇದ್ದಾರೆ ಎಂದ ಅವರು, ಲಕ್ಷ್ಮಣ ಸವದಿ ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಬಿಡಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದರು.

ಸಚಿವ ಕೆ.ಎನ್‌.ರಾಜಣ್ಣ ಅವರು ಹೈಕಮಾಂಡ್‌ಗೆ ವಿರೋ ಧಿಸಿಲ್ಲ. ಅವರು ಹಿರಿಯರಿದ್ದಾರೆ. ರಾಜ್ಯಕ್ಕೆ ಸಂಬಂಧಿಸಿದಂತೆ ತಮ್ಮದೇ ಆದ ವಿಚಾರಧಾರೆಗಳಿವೆ ಎಂದಿದ್ದಾರೆ. ಹಾಸನ ಜಿಲ್ಲೆಯ ಉಸ್ತುವಾರಿ ಅವರಿಗೆ ನೀಡಿದ್ದು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವುದಾಗಿ ಕಂಕಣ ತೊಟ್ಟಿದ್ದಾರೆ. ಅಲ್ಲದೇ, ನಿಗಮ-ಮಂಡಳಿಗಳಿಗೆ ಶಾಸಕರನ್ನು ನೇಮಿಸುತ್ತಿರುವುದು ಸಚಿವರಿಗೆ ಯಾವುದೇ ಅಸಮಾಧಾನವಿಲ್ಲ. ಪರಿಶಿಷ್ಟ ವರ್ಗಗಳ ನಿಗಮ-ಮಂಡಳಿಗೆ ಶಾಸಕ ಬಸವರಾಜ ದದ್ದಲ್‌ರನ್ನು ನೇಮಕ ಮಾಡಿರುವುದನ್ನು ಸ್ವಾಗತಿಸುತ್ತೇನೆ ಎಂದು ತಿಳಿಸಿದರು.

ನಗರ ಶಾಸಕ ನಾರಾ ಭರತ್‌ರೆಡ್ಡಿ, ಡಿಸಿ ಪ್ರಶಾಂತ್‌ ಕುಮಾರ್‌ ಮಿಶ್ರಾ, ಮೇಯರ್‌ ಬಿ.ಶ್ವೇತಾ, ಉಪಮೇಯರ್‌ ಬಿ.ಜಾನಕಮ್ಮ ಸೇರಿ ಹಲವರು ಇದ್ದರು.

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.