ತೈಲ ಬೆಲೆ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ

Team Udayavani, Jun 12, 2021, 11:41 AM IST

ತೈಲ ಬೆಲೆ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ

ಬಳ್ಳಾರಿ: ತೈಲ, ಅನಿಲ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ನಗರದ ವಿವಿಧೆಡೆ ಕಾಂಗ್ರೆಸ್‌ ಶುಕ್ರವಾರ ಪ್ರತಿಭಟನೆ ನಡೆಸಿತು.

ವಿಧಾನಪರಿಷತ್‌ ಸದಸ್ಯ ಕೆ.ಸಿ. ಕೊಂಡಯ್ಯ ನೇತೃತ್ವದಲ್ಲಿ ನಗರದ ಗಡಗಿ ಚನ್ನಪ್ಪ ವೃತ್ತದಲ್ಲಿರುವ ಕೇಶವರೆಡ್ಡಿ ಪೆಟ್ರೋಲ್‌ ಬಂಕ್‌ ಮುಂಭಾಗದಲ್ಲಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ, ರಾಜ್ಯಸಭೆ ಸದಸ್ಯ ಡಾ| ಸೈಯದ್‌ ನಾಸೀರ್‌ ಹುಸೇನ್‌ ನೇತೃತ್ವದಲ್ಲಿ ಕೌಲ್‌ಬಜಾರ್‌ನ ಮೊದಲನೇ ಗೇಟ್‌ ಬಳಿಯ ಪೆಟ್ರೋಲ್‌ ಬಂಕ್‌ ಮತ್ತು ನಗರದ ಗಡಗಿ ಚನ್ನಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ, ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಯನ್ನು ಖಂಡಿಸಿದರು.

ನೂರು ರೂ. ದಾಟಿರುವ ಲೀಟರ್‌ ಪೆಟ್ರೋಲ್‌ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಿಧಾನ ಪರಿಷತ್‌ ಸದಸ್ಯ ಕೆ.ಸಿ. ಕೊಂಡಯ್ಯ ಮಾತನಾಡಿ, ರಾಜ್ಯದಲ್ಲಿ ವಿದ್ಯುತ್‌, ದೇಶದಲ್ಲಿ ಪೆಟ್ರೋಲ್‌, ಡೀಸೆಲ್‌ ಹಾಗೂ ಅಡುಗೆ ಅನಿಲ ದರವನ್ನು ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಮನಸೋಯಿಚ್ಛೆ ಏರಿಸುವ ಮೂಲಕಕೊರೊನಾದಿಂದ ಸಂಕಷ್ಟದಲ್ಲಿರುವ ಜನರ ತಲೆ ಮೇಲೆ ಚಪ್ಪಡಿ ಎಳೆದಿವೆ. ವಿದ್ಯುತ್‌ ದರವನ್ನು ರಾಜ್ಯಸರ್ಕಾರ ಕಳೆದ ಒಂದು ವರ್ಷದಲ್ಲಿ ಶೇ. 30ರಷ್ಟು ಏರಿಸಿದೆ.

ಇದು ರಾಜ್ಯದ ಇತಿಹಾಸದಲ್ಲಿಯೇ ಮೊದಲು. ರಾಜ್ಯದಲ್ಲಿ ವಿದ್ಯುತ್‌ ಉತ್ಪಾದನೆ ಹೆಚ್ಚಾಗಿದ್ದರೂ ಸಹ ಕೇಂದ್ರ ಸರ್ಕಾರ ಮತ್ತು ಅದಾನಿ ಕಂಪನಿಯಿಂದ ಹೆಚ್ಚಿನ ದರಕ್ಕೆ ವಿದ್ಯುತ್‌ ಖರೀದಿ ಮಾಡಲಾಗುತ್ತಿದೆ. ಇದಕ್ಕೆ ರಾಜ್ಯ ಸರ್ಕಾರದ ಭ್ರಷ್ಟಾಚಾರ ಮತ್ತು ಅದಕ್ಷತೆ ಕಾರಣವಾಗಿದೆ ಎಂದು ಆರೋಪಿಸಿದರು.

ಮಾಜಿ ಪ್ರಧಾನಿ ಮನಮೋಹನಸಿಂಗ್‌ ಅವರು ಪೆಟ್ರೋಲ್‌ ಬೆಲೆ ಕೇವಲ ರೂ.1 ಏರಿಕೆ ಮಾಡಿದಾಗ ಅಂದು ಗುಜರಾತ್‌ ಮುಖ್ಯಮಂತ್ರಿಯಾಗಿದ್ದ ಇಂದಿನ ಪ್ರಧಾನಿ ಮೋದಿಯವರು ತೀವ್ರವಿರೋಧ ಮಾಡಿದ್ದರು. ಬಿಜೆಪಿ ದೇಶವ್ಯಾಪಿ ಪ್ರತಿಭಟನೆ ನಡೆಸಿತ್ತು. ಈಗ ನಿತ್ಯವೂ ದರಏರಿಕೆಯಾಗುತ್ತಲೇ ಇದೆ ಇದಕ್ಕೆ ಬಿಜೆಪಿ ನಾಯಕರಿಗೆನಾಚಿಕೆಯಾಗಲ್ವೇ. ಕೊರೊನಾದಿಂದ ಜನಸುಮ್ಮನಿರುತ್ತಾರೆ. ಲಾಕ್‌ಡೌನ್‌ ಇರುವ ಕಾರಣ ಹೊರಗೆ ಬಂದು ಪ್ರತಿಭಟನೆ ಮಾಡುವುದಿಲ್ಲ ಎಂದುಜನರ ತಲೆ ಮೇಲೆ ಚಪ್ಪಡಿ ಎಳೆಯುವ ಕೆಲಸವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಬಿಡಬೇಕು ಎಂದರು.

ನಂತರ ಎತ್ತಿನಗಾಡಿಯಲ್ಲಿ ಬಂದು ಪ್ರತಿಭಟನೆ ನಡೆಸಿದ ಗ್ರಾಮೀಣ ಶಾಸಕ ಬಿ. ನಾಗೇಂದ್ರ,ರಾಜ್ಯಸಭೆ ಸದಸ್ಯ ಡಾ| ಸೈಯದ್‌ ನಾಸೀರ್‌ಹುಸೇನ್‌ ಮಾತನಾಡಿ, ಪೆಟ್ರೋಲ್‌, ಡೀಸೆಲ್‌ ಮಾರಾಟದಮೇಲಿನ ಅಬಕಾರಿ ಸುಂಕ 2013-14ರಲ್ಲಿ 3.45ರೂ. ಹಾಗೂ 9.25 ರೂ. ಇತ್ತು. ಈಗ ಪೆಟ್ರೋಲ್‌ಮಾರಾಟದ ಮೇಲೆ 31.84 ರೂ. ಡೀಸೆಲ್‌ಮಾರಾಟದ ಮೇಲೆ, 32.98 ರೂ. ಹೆಚ್ಚಿಸಲಾಗಿದೆ. ರಾಜ್ಯ ಸರ್ಕಾರ ಪೆಟ್ರೋಲ್‌ ಮಾರಾಟದ ಮೇಲೆ ಶೇ. 35, ಡೀಸೆಲ್‌ ಮಾರಾಟದ ಮೇಲೆ ಶೇ. 24 ತೆರಿಗೆ ವಿಧಿಸುತ್ತಿದೆ. ಅಡುಗೆ ಅನಿಲದ ಸಿಲಿಂಡರ್‌ ಬೆಲೆ 414 ರೂ.ಗಳಿಂದ 850 ರೂ.ಗಳಿಗೆ ಏರಿಕೆಯಾಗಿದೆ. ಇದು ಲೂಟಿ ಅಲ್ಲದೇ ಮತ್ತೇನು. ಇದೇನಾ ಅಚ್ಛೇ ದಿನ್‌ ಎಂದು ಪ್ರಶ್ನಿಸಿದರು?

ತೈಲ ಬೆಲೆ, ವಿದ್ಯುತ್‌ ದರ ಹೆಚ್ಚಳದಿಂದ ಜನಸಾಮಾನ್ಯರ ಬದುಕಿಗೆ ಬೆಂಕಿ ಹಾಕಿದ್ದಾರೆಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರುಗಳಾದ ಅಸುಂಡಿ ನಾಗರಾಜಗೌಡ, ಎ. ಮಾನಯ್ಯ, ಮುಂಡರಗಿ ನಾಗರಾಜ್‌, ರಾಂಪ್ರಸಾದ್‌, ಪಾಲಿಕೆ ಸದಸ್ಯರುಗಳಾದ ವಿವೇಕ್‌, ಗಾದೆಪ್ಪ, ವೆಂಕಟೇಶ್‌ ಹೆಗಡೆ ಸೇರಿದಂತೆ ಹಲವಾರು ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.