ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆಲ್ಲಲಿವೆ : ಶಾಸಕ ಗಣೇಶ್ ಭರವಸೆ
Team Udayavani, Dec 12, 2021, 5:00 PM IST
ಕುರುಗೋಡು: ಸ್ಥಳೀಯ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ ಎಂದು ಶಾಸಕ ಜೆ. ಎನ್. ಗಣೇಶ್ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ಕಾಂಗ್ರೆಸ್ ಸಂಘಟನೆ ಸಭೆ ಮತ್ತು ಬಿಜೆಪಿ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಆಡಳಿತದಿಂದಾಗಿ ಜನರು ಬೇಸತ್ತು ಹೋಗಿದ್ದಾರೆ. ರೈತರ ಸಮಸ್ಯೆಗಳಿಗೆ ಸ್ಪಂದನೆಯಿಲ್ಲ. ಅತಿವೃಷ್ಟಿಯಿಂದ ಹಾಳಾಗಿರುವ ರೈತರ ಬೆಳೆಗಳಿಗೆ ಇನ್ನೂ ಪರಿಹಾರ ಬಂದಿಲ್ಲ. ಹಳ್ಳಕೊಳ್ಳ ನದಿ ನೀರಿನ ಪ್ರವಾಹದಿಂದ ಅನೇಕ ಜನರ ಬದುಕು ಹಾಳಾಗಿದೆ. ಜನರ ಕಷ್ಟಗಳಿಗೆ ಸ್ಪಂದನೆ ಮಾಡಿಲ್ಲ. ಬಡವರ ಸಂಕಷ್ಟಗಳನ್ನು ಬಿಜೆಪಿ ನೋಡಲು ಆಗುತ್ತಿಲ್ಲ. ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದತ್ತ ಜನರ ಒಲವು ಹೆಚ್ಚುತ್ತಿದೆ. ಅದರಲ್ಲಿ ಪಟ್ಟಣದ ಬಿಜೆಪಿ ಮಂಡಲದ ಅಧ್ಯಕ್ಷ ಚಾನಾಳು ಆನಂದ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಮತ್ತಷ್ಟು ಪಕ್ಷಕ್ಕೆ ಬಲ ಬಂದಂತಾಗಿದೆ ಎಂದರು.
ಇನ್ನೂ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಸಾಧಿಸಲಿದ್ದಾರೆ ಎಂದು ಆಶಯ ವ್ಯಕ್ತಪಡಿಸಿದರು.
ನಂತರ ಎನ್. ನಾಗರಾಜ್ ಮಾತನಾಡಿ, ಮಾತನಾಡಿ, ಕಾಂಗ್ರೆಸ್ ಇದೀಗ ಬಲಿಷ್ಠವಾಗುತ್ತಿದೆ. ಬಿಜೆಪಿ ಆಡಳಿತದಿಂದಾಗಿ ಜನರು ಬೇಸರಪಡುತ್ತಿದ್ದಾರೆ. ಅನ್ಯ ಜನಾಂಗಕ್ಕೆ ಸರ್ಕಾರದ ಸೌಲಭ್ಯಗಳು ಸರಿಯಾಗಿ ಸಿಗುತ್ತಿಲ್ಲ ಎಂದರು.
ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಂಗಿ ಮಲ್ಲಯ್ಯ, ಕಾರ್ಮಿಕ ವಿಭಾಗದ ತಾಲೂಕು ಅಧ್ಯಕ್ಷ ಗಾಧಿಲಿಂಗಪ್ಪ, ಒಂಕಾರಪ್ಪ, ಚನ್ನಬಸಪ್ಪ, ಜೋಗಿ ಸುಂಕಪ್ಪ, ಚಾನಾಳು ಅಭಿ, ಚಕ್ರವರ್ತಿ, ಚಾನಾಳು ಅಂಬರೀಷ್, ಎಂ. ಮೊಹಮ್ಮದ್ ಭಾಷಾ, ಚನ್ನಪಟ್ಟಣ ಮಲ್ಲಿಕಾರ್ಜುನ, ರಾಮಚಂದ್ರ ಸೇರಿದಂತೆ ಇತರರು ಇದ್ದರು.
ಇದೆ ವೇಳೆ ಪಟ್ಟಣದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡಯಾದವರಿಗೆ ಹೂಮಾಲೆ ಹಾಗೂ ಕಾಂಗ್ರೆಸ್ ಪಕ್ಷದ ಶಾಲು ಹಾಕಿ ಸನ್ಮಾನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ
Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
Covid Scam: ಕೋವಿಡ್ ಅಕ್ರಮ ವರದಿಯಿಂದ ಏನೂ ಆಗದು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Mangalore University: ಪದವಿ ವಿದ್ಯಾರ್ಥಿಗಳಿಗೆ ಶುಲ್ಕ ಏರಿಕೆಯ ಹೊರೆ!
Corrupts Hunt: ಏಕಕಾಲಕ್ಕೆ 37 ಕಡೆ ಲೋಕಾಯುಕ್ತ ದಾಳಿ; 22 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ!
US ಅಧಿಕಾರಶಾಹಿ ಸ್ವಚ್ಛಗೊಳಿಸಲು ಮಸ್ಕ್, ವಿವೇಕ್ ರಾಮಸ್ವಾಮಿ ಆಯ್ಕೆ ಮಾಡಿದ ಟ್ರಂಪ್
Vote: ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಉಪಚುನಾವಣೆ: ಇಂದು ಮತದಾನ
Controversy: ಅಂಬೇಡ್ಕರ್ ಇಸ್ಲಾಂ ಸ್ವೀಕಾರ ವಿಚಾರ: ಖಾದ್ರಿ ಹೇಳಿಕೆಗೆ ಬಿಜೆಪಿ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.