ಕಂಪ್ಲಿ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ
200 ಕೋಟಿ ರೂ. ವೆಚ್ಚದಲ್ಲಿ 100 ಪೊಲೀಸ್ ಠಾಣೆಗಳ ನಿರ್ಮಾಣ: ಸಚಿವ ಆರಗ ಜ್ಞಾನೇಂದ್ರ
Team Udayavani, Apr 17, 2022, 4:36 PM IST
ಕಂಪ್ಲಿ: ಕಂಪ್ಲಿಯಲ್ಲಿ 2.70 ಕೋಟಿ ರೂ.ವೆಚ್ಚದಲ್ಲಿ ನೂತನ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶನಿವಾರ ಸಂಜೆ ಶಂಕುಸ್ಥಾಪನೆ ನೆರವೇರಿಸಿದರು.
ಬಳ್ಳಾರಿ ಜಿಲ್ಲೆಯಲ್ಲಿ ಕಂಪ್ಲಿ ಸೇರಿದಂತೆ ನಾಲ್ಕು ಕಡೆ ನೂತನ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಶಂಕುಸ್ಥಾಪನೆ ನೆರವೇರಿಸಿದ ನಂತರ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ರಾಜ್ಯದಲ್ಲಿ 200 ಕೋಟಿ ರೂ. ವೆಚ್ಚದಲ್ಲಿ 100 ನೂತನ ಪೊಲೀಸ್ ಠಾಣೆಗಳನ್ನು ನಿರ್ಮಿಸಲಾಗುತ್ತಿದೆ. ರಾಜ್ಯದಲ್ಲಿ ಪೊಲೀಸರಿಗೆ 2 ಬೆಡ್‌ರೂಂಗಳ 20 ಸಾವಿರ ಮನೆಗಳನ್ನು ನಿರ್ಮಿಸಲಾಗುತ್ತಿದೆ. ಈಗಾಗಲೇ 2 ಬೆಡ್‌ರೂಂಗಳ 10 ಸಾವಿರ ಮನೆಗಳನ್ನು ನಿರ್ಮಿಸಿ ಪೊಲೀಸರಿಗೆ ಹಂಚಿಕೆ ಮಾಡಲಾಗಿದೆ. ಉಳಿದ 10 ಸಾವಿರ ಮನೆಗಳ ನಿರ್ಮಾಣ ಕಾರ್ಯ ನಡೆದಿದೆ ಎಂದರು.
ಹುಬ್ಬಳ್ಳಿ ಮತ್ತು ಬಳ್ಳಾರಿಯಲ್ಲಿ ಈಗಾಗಲೇ ವಿಧಿ ವಿಜ್ಞಾನ ಪ್ರಯೋಗಾಲಯ ಆರಂಭಿಸಲಾಗಿದ್ದು, ಶಿವಮೊಗ್ಗದಲ್ಲಿಯೂ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ವಿವರಿಸಿದ ಅವರು ಆರೋಪಗಳ ದೃಢಪಡುವಿಕೆ ಶೇಕಡಾವಾರು (ಕನ್ವಿನ್ಷನ್ ರೇಟ್) ಪ್ರಮಾಣ ತೀರಾ ಕಡಿಮೆ ಇದೆ. ವಿಧಿ ವಿಜ್ಞಾನ ಪ್ರಯೋಗಾಲಯಗಳು ಬಲಪಡಿಸಿದರೆ ಪೊಲೀಸರ ಸಾಕ್ಷಾಧಾರಗಳು ಸ್ಟ್ರಾಂಗ್ ಆಗಲು ಸಾಧ್ಯ ಎಂದರು. ಸೈಬರ್ ವಿಭಾಗವನ್ನು ಬಲಪಡಿಸುವುದಕ್ಕೆ ಎಲ್ಲ ರೀತಿಯ ಯಂತ್ರಗಳನ್ನು ಪೊಲೀಸ್ ಇಲಾಖೆ ಖರೀದಿಸಿದೆ. ಪ್ರತಿ ಜಿಲ್ಲೆಯಲ್ಲಿ ಸೈಬರ್ ವಿಭಾಗಗಳನ್ನು ಆರಂಭಿಸಲಾಗಿದ್ದು, ಸಿಬ್ಬಂದಿಗೆ ವಿಶೇಷ ತರಬೇತಿ ಸಹ ನೀಡಲಾಗಿದೆ ಎಂದರು. ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮವಹಿಸಲಾಗುತ್ತಿದೆ ಎಂದು ವಿವರಿಸಿದ ಅವರು ಪೊಲೀಸ್ ಇಲಾಖೆ ಸದೃಢಗೊಳಿಸುವುದರ ಮೂಲಕ ನಮ್ಮ ಸರಕಾರ ಜನರ ರಕ್ಷಣೆಗೆ ಹಾಗೂ ಅವರು ನೆಮ್ಮದಿಯಿಂದ ಜೀವನ ನಡೆಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದರು.
ಇತ್ತೀಚೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಆಗಮಿಸಿದ ಸಂದರ್ಭದಲ್ಲಿ ಕರಾವಳಿ ಕಾವಲು ಪಡೆಗೆ 12 ಪಡೆಗಳ ಅಗತ್ಯವಿದೆ ಎಂದು ತಿಳಿಸಲಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯ ವಿಶ್ವವಿದ್ಯಾಲಯ ಸ್ಥಾಪಿಸುವಂತೆ ಕೇಳಿಕೊಂಡಿದ್ದು ಅವರು ಸಕಾರಾತ್ಮಕವಾಗಿ ಸ್ಪಂದಿಸಿ 50 ಎಕರೆ ಜಾಗ ಗುರುತಿಸಿ ಸಂಪುಟ ಸಭೆಯಲ್ಲಿ ಅನುಮೋದಿಸಿ ತನ್ನಿ ಎಂದಿದ್ದಾರೆ ಎಂದರು.
ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮವೆಸಗಿರುವುದಕ್ಕೆ ಸಂಬಂ ಧಿಸಿದಂತೆ ಕಲಬುರಗಿ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕ್ಷಿಪ್ರಗತಿಯಲ್ಲಿ ವಿಚಾರಣೆ ನಡೆಸುವಂತೆ ತಿಳಿಸಲಾಗಿದೆ. ಈಗಾಗಲೇ ಈ ಪ್ರಕರಣವನ್ನು ಸಿಒಡಿಗೆ ವಹಿಸಲಾಗಿದ್ದು, ತಪ್ಪಿತಸ್ಥರನ್ನು ಜೈಲಿಗೆ ಕಳುಹಿಸಲಾಗುವುದು. ಕಷ್ಟಪಟ್ಟು ಓದಿದವರಿಗೆ ನ್ಯಾಯ ಒದಗಿಸಿಕೊಡಲಾಗುವುದು ಎಂದರು. ಈ ಸಂದರ್ಭದಲ್ಲಿ ಕಂಪ್ಲಿ ಶಾಸಕ ಜೆ.ಎನ್. ಗಣೇಶ, ಜಿಲ್ಲಾಧಿ ಕಾರಿ ಪವನಕುಮಾರ್ ಮಾಲಪಾಟಿ, ಎಸ್ಪಿ ಸೈದುಲು ಅಡಾವತ್, ಜಿಪಂ ಸಿಇಒ ಜೆ. ಲಿಂಗಮೂರ್ತಿ, ವೈ.ಎಂ. ಸತೀಶ್, ಪುರಸಭೆ ಅಧ್ಯಕ್ಷೆ ಶಾಂತಲಾ ವಿದ್ಯಾಧರ, ಡಿವೈಎಸ್‌ಪಿ ಎಸ್.ಎಸ್. ಕಾಶೀಗೌಡ, ಪಿಐ ಸುರೇಶ್ ಎಚ್. ತಳವಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.