ಸಮಕಾಲೀನ ಚರಿತ್ರೆ ಗಂಭೀರ ಅಧ್ಯಯನ ಅಗತ್ಯ


Team Udayavani, Jun 26, 2018, 11:01 AM IST

ballery-2.jpg

ಹೊಸಪೇಟೆ: ಸಮಾಜದ ಚಲನಶೀಲತೆ ಹೆಚ್ಚಿಸಲು ಚರಿತ್ರೆ ನೆರವಾಗುತ್ತಿದ್ದು, ಸಮಕಾಲೀನ ಚರಿತ್ರೆಯಲ್ಲಿ ಸಂಶೋಧನೆ ಕೈಗೊಳ್ಳಲು ವಿದ್ಯಾರ್ಥಿಗಳು ಗಂಭೀರವಾದ ಅಧ್ಯಯನದಲ್ಲಿ ತೊಡಗಬೇಕು ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯದ ನಿಕಟಪೂರ್ವ ಪ್ರಾಧ್ಯಾಪಕ ಪ್ರೊ| ಬಿ.ಸಿ. ಮಹಾಬಲೇಶ್ವರಪ್ಪ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಹಂಪಿಯ ಕನ್ನಡ ವಿಶ್ವವಿದ್ಯಾಲಯದಲ್ಲಿ ಸೋಮವಾರ ಆಯೋಜಿಸಿದ್ದ 2017-18ನೇ ಸಾಲಿನ ಸ್ನಾತಕೋತ್ತರ ಚರಿತ್ರೆ ಪ್ರಥಮ ಮತ್ತು ಅಂತಿಮ ವರ್ಷದ ಸಂಪರ್ಕ ತರಗತಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಐತಿಹಾಸಿಕ ಘಟನೆಗಳ ವಿಶ್ಲೇಷಣೆಯ ಸಂದರ್ಭದಲ್ಲಿ ಸ್ಥಳ ಮತ್ತು ಸಮಯಕ್ಕೆ ಪ್ರಾಮುಖ್ಯತೆ ಕೊಡದಿದ್ದರೆ ಅದು ಚರಿತ್ರೆಯಾಗುವುದಿಲ್ಲ. ಆಕರಗಳ ಸಂಗ್ರಹ ಮತ್ತು ವಿಶ್ಲೇಷಣೆ ಕುರಿತು ಸರಿಯಾದ ತಿಳುವಳಿಕೆ ಹೊಂದಿರಬೇಕು. ಅದಕ್ಕಾಗಿ ಚರಿತ್ರೆಯ ಸಂಶೋಧನೆಯ ವೈಜ್ಞಾನಿಕತೆಗಳನ್ನು ಮನನ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಶಿಸ್ತಿನ ಜೊತೆಗೆ ನೈತಿಕ ಮಟ್ಟ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಮಾಜ ವಿಜ್ಞಾನಗಳ ನಿಕಾಯದ ಡೀನ್‌ ಡಾ| ಮಂಜುನಾಥ ಬೇವಿನಕಟ್ಟಿ ಮಾತನಾಡಿ, ದೂರಶಿಕ್ಷಣದಲ್ಲಿ ಪಡೆದ ಪದವಿಗಳಿಗೆ ಮೌಲ್ಯ ಇಲ್ಲ ಎಂಬ ವದಂತಿಗಳಿಗೆ ಕಿವಿಗೊಡಬೇಡಿ. ಇಲ್ಲಿನ ಪದವಿಗಳಿಗೆ, ಕೋರ್ಸ್‌ಗಳಿಗೆ ಮಾನ್ಯತೆ ಪಡೆಯಲಾಗಿದ್ದು, ವಿದ್ಯಾರ್ಥಿಗಳ ಬೌದ್ಧಿಕ ಸಾಮರ್ಥ್ಯ ಹೆಚ್ಚಿಸಲು ವಿಶ್ವವಿದ್ಯಾಲಯ ಸಾಕಷ್ಟು ಅವಕಾಶಗಳನ್ನು ಕಲ್ಪಿಸಿದೆ. ಪಠ್ಯಕ್ರಮ ಬೇರೆ ದೂರಶಿಕ್ಷಣ ಸಂಸ್ಥೆಗಳಿಗಿಂತ 15 ವರ್ಷ ಮುಂದೆಯಿದೆ. ಆಧುನಿಕ ಸಮಗ್ರ ವಿಷಯಗಳನ್ನು ಒಳಗೊಂಡ ಸರಳವಾದ ಭಾಷೆಯಲ್ಲಿ ಪಠ್ಯಕ್ರಮ ರೂಪಿಸಿ ಕನ್ನಡ ವಿಶ್ವವಿದ್ಯಾಲಯ ದೂರಶಿಕ್ಷಣದ ವಿದ್ಯಾರ್ಥಿಗಳಿಗೆ ಕಲಿಕಾಸಾಮಗ್ರಿ ಒದಗಿಸಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಸಂಚಾಲಕ ಡಾ| ಮೋಹನಕೃಷ್ಣ ರೈ ಪ್ರಾಸ್ತಾವಿಕವಾಗಿ ಮಾತನಾಡಿ, ಶಿಕ್ಷಣಕ್ಕೆ ಹತ್ತಿರವಾಗಿಸುವ ಕ್ರಿಯೆಯೇ ದೂರಶಿಕ್ಷಣವಾಗಿದ್ದು, ಚರಿತ್ರೆಯನ್ನು ಸಮಕಾಲೀನವಾಗಿ, ವಿಶ್ಲೇಷಣಾತ್ಮಕವಾಗಿ, ಅಧ್ಯಯನ ಮಾಡಬೇಕಾದ ಕ್ರಮವಿದೆ. ಚರಿತ್ರೆ ಎಂದೂ ಅಂತಿಮವಲ್ಲ. ಅದು ಪುನಾರಚನೆ ಹಾಗೂ ಮರು ಓದಿಗೆ ಒಳಗಾಗುತ್ತಿರುತ್ತದೆ ಎಂದು ತಿಳಿಸಿದರು.

ದೂರಶಿಕ್ಷಣ ನಿರ್ದೆಶನಾಲಯದ ನಿರ್ದೇಶಕ ಡಾ| ವಾಸುದೇವ ಬಡಿಗೇರ ಸ್ವಾಗತಿಸಿದರು. ವಿದ್ಯಾರ್ಥಿನಿ ಪೂಜಾ ರೂಪಿಸಿದರು. ಸುಪ್ರಿತಾ ವಂದಿಸಿದರು. ರಾಜೇಶ್ವರಿ ಪ್ರಾರ್ಥಿಸಿದರು.

ದೂರಶಿಕ್ಷಣದಲ್ಲಿ ಪಡೆದ ಪದವಿಗಳಿಗೆ ಮೌಲ್ಯ ಇಲ್ಲ ಎಂಬ ವದಂತಿಗಳಿಗೆ ಕಿವಿಗೊಡಬೇಡಿ. ಇಲ್ಲಿನ ಪದವಿಗಳಿಗೆ, ಕೋರ್ಸ್‌ಗಳಿಗೆ ಮಾನ್ಯತೆ ಪಡೆಯಲಾಗಿದ್ದು, ವಿದ್ಯಾರ್ಥಿಗಳ ಬೌದ್ಧಿಕ ಸಾಮರ್ಥ್ಯ ಹೆಚ್ಚಿಸಲು ವಿಶ್ವವಿದ್ಯಾಲಯ ಸಾಕಷ್ಟು ಅವಕಾಶಗಳನ್ನು ಕಲ್ಪಿಸಿದೆ.
ಡಾ| ಮಂಜುನಾಥ ಬೇವಿನಕಟ್ಟಿ, ಸಮಾಜ ವಿಜ್ಞಾನಗಳ ನಿಕಾಯದ ಡೀನ್‌

ಟಾಪ್ ನ್ಯೂಸ್

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

Ballary-Suside

Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-devvvi

ಕಂದಹಾರ್‌ ಹೈಜಾಕ್‌ ವೇಳೆಯ ಪೈಲಟ್‌ ದೇವಿ ಶರಣ್‌ ನಿವೃತ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.