ಕ್ಷಯ ರೋಗ ನಿರ್ಮೂಲನೆಗೆ ಸಹಕರಿಸಿ
Team Udayavani, Dec 2, 2020, 4:17 PM IST
ಬಳ್ಳಾರಿ: ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಆಂದೋಲನ ನಿಮಿತ್ತ ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರನ್ನು ಒಳಗೊಂಡ ತಂಡಗಳು ಮನೆ ಮನೆಗೆ ಬಂದಾಗ ಸಾರ್ವಜನಿಕರು ಸಂಪೂರ್ಣವಾಗಿ ಸಹಕರಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಚ್.ಎಲ್. ಜನಾರ್ಧನ್ ಹೇಳಿದರು.
ನಗರದ ಬಂಡಿಹಟ್ಟಿಯಲ್ಲಿನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಈಗಾಗಲೇ 1529 ಹೈರಿಸ್ಕ್ ಪ್ರದೇಶಗಳನ್ನು ಗುರುತಿಸಲಾಗಿದೆ. ಜಿಲ್ಲೆಯ ಒಟ್ಟು 14,04,672ಜನರನ್ನು ತಪಾಸಣೆಗೆ ಒಳಪಡಿಸಲು ಗುರಿ ಹೊಂದಲಾಗಿದೆ. 3,43,675 ಮನೆಗಳಿಗೆ ಭೇಟಿ ನೀಡಲು1017 ಮನೆ ಬೇಟಿ ತಂಡಗಳನ್ನು ರಚಿಸಲಾಗಿದೆ. 182 ಜನರು ಮೇಲ್ವಿಚಾರಕರು ಕಾರ್ಯನಿರ್ವಹಿಸಲಿದ್ದಾರೆ.ಡಿ.1ರಿಂದ 30ರವರೆಗೆ ಒಟ್ಟು 30 ದಿನಗಳ ಕಾಲ ಈ ಆಂದೋಲನ ಜರುಗಲಿದೆ ಎಂದರು.
ಕ್ಷಯರೋಗವು ಞ ಕ್ರೋ ಬ್ಯಾಕ್ಟಿರೀಯಂ ಟ್ಯೂಬರ್ ಕ್ಯುಲೋಸಿಸ್ ಎಂಬ ಸೂಕ್ಷ್ಮಣು ಜೀವಿಯಿಂದ ಬರುತ್ತದೆ. ಕ್ಷಯರೋಗವು ದೇಹದ ಯಾವುದೇ ಭಾಗಕ್ಕಾದರೂ ಬರಬಹುದು. ಕ್ಷಯರೋಗದಲ್ಲಿ ಶ್ವಾಸಕೋಶದ ಕ್ಷಯ ಮತ್ತು ಶ್ವಾಸಕೋಶೇತರ ಕ್ಷಯ ಎಂಬ ಎರಡು ವಿಧಗಳಿವೆ. ಕ್ಷಯರೋಗಿ ಕೆಮ್ಮಿದಾಗ, ಸೀನಿದಾಗ ಹೊರಬರುವ ತುಂತುರುಗಳಿಂದರೋಗಾಣುಗಳು ಆರೋಗ್ಯವಂತ ವ್ಯಕ್ತಿಯ ದೇಹ ಸೇರಿ ಕ್ಷಯರೋಗದ ಸೋಂಕು ಉಂಟುಮಾಡುತ್ತದೆ ಎಂದು ಅವರು ವಿವರಿಸಿದರು.
ಎರಡು ವಾರಗಳಿಗೂ ಮೇಲ್ಪಟ್ಟ ಕೆಮ್ಮು ಕ್ಷಯರೋಗದ ಸಾಮಾನ್ಯ ಲಕ್ಷಣವಾಗಿದೆ. ಸಂಜೆವೇಳೆ ಜ್ವರ ಬರುವುದು ರಾತ್ರಿ ವೇಳೆ ಬೆವರುವುದು. ಎದೆ ನೋವು ಕೆಲವೊಮ್ಮೆ ಕಫದ ಜೊತೆ ರಕ್ತ ಬೀಳುವುದು. ಹಸಿವಾಗದಿರುವುದುಮತ್ತು ತೂಕ ಕಡಿಮೆಯಾಗುವುದು. ಮಕ್ಕಳಲ್ಲಿ ಸತತವಾಗಿ ತೂಕ ಕಡಿಮೆಯಾಗುವುದು ಅಥವಾ ಹೆಚ್ಚದೇ ಇರುವುದು, ಚಿಕಿತ್ಸೆಗೆ ಬಗ್ಗದ ಅತಿಸಾರ ಬೇಧಿ, ಕುತ್ತಿಗೆಬಗುಲುಗಳಲ್ಲಿ ಗಡ್ಡೆ ಕ್ಷಯರೋಗದ ಲಕ್ಷಣಗಳಾಗಿವೆ. ಈರೀತಿಯ ಲಕ್ಷಣಗಳಿದ್ದರೆ ತಕ್ಷಣವೇ ಸಮೀಪದ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ 2 ಬಾರಿ ಕಫ ಪರೀಕ್ಷೆ ಮಾಡಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಎನ್.ಬಸರೆಡ್ಡಿ ಮಾತನಾಡಿ, ಕ್ಷಯರೋಗವನ್ನು ನೇರ ನಿಗಾವಣಾ ಅಲ್ಪಾವ ಚಿಕಿತ್ಸೆ (ಡಾಟ್ಸ್) ಯಿಂದ ಸಂಪೂರ್ಣವಾಗಿ ಗುಣಪಡಿಸಬಹುದು. 6-8 ತಿಂಗಳು ತಪ್ಪದೇ ಚಿಕಿತ್ಸೆಯನ್ನು ಪಡೆಯಬೇಕು ಎಂದರು. ಜಿಲ್ಲಾ ಕ್ಷಯರೋಗ ನಿರ್ಮೂಲನ ಅಧಿಕಾರಿ ಡಾ| ಇಂದ್ರಾಣಿ ಪ್ರಾಸ್ತಾವಿಕವಾಗಿ ಮಾತನಾಡಿ, ದೇಶದಲ್ಲಿ ಶೇ. 40ರಷ್ಟು ಯುವಜನಾಂಗವು ಕ್ಷಯರೋಗದ ಸೋಂಕಿತರಾಗಿದ್ದು ಜೀವಿತಾವಧಿಯಲ್ಲಿ ರೋಗಿಯಾಗಿ ಪರಿಣಮಿಸುವ ಸಾಧ್ಯತೆ ಇದೆ. ಪ್ರತಿದಿನ 6 ಸಾವಿರ ಜನ ಹೊಸ ಕ್ಷಯರೋಗಿಗಳಾಗುತ್ತಿದ್ದಾರೆ. ಪ್ರತಿ ಎರಡೂವರೆ ನಿಮಿಷಕ್ಕೆ ಒಬ್ಬರು (ಪ್ರತಿ ದಿನ 600) ಕ್ಷಯರೋಗದಿಂದ ಸಾವನ್ನಪ್ಪುತ್ತಿದ್ದಾರೆ ಎಂದು ಅವರು ವಿವರಿಸಿದರು.
ಟಿ.ಬಿಯನ್ನು ಸೋಲಿಸಿ-ದೇಶವನ್ನು ಗೆಲ್ಲಿಸಿ, ಕ್ಷಯರೋಗವನ್ನು ಶತ್ರುವನ್ನಾಗಿಸಿ-ರೋಗಿಯನ್ನು ನಿಮ್ಮ ಮಿತ್ರನಂತೆ ಕಾಣಿರಿ, ಕ್ಷಯರೋಗ ಸಂಪೂರ್ಣ ಗುಣಮುಖ ವಾಗುವಂತ ರೋಗ, ಕ್ಷಯರೋಗಿಯನ್ನು ಮುಟ್ಟುವುದರಿಂದ ಕೈಕುಲುಕುವುದರಿಂದ ಕ್ಷಯರೋಗ ಹರಡುವುದಿಲ್ಲ. ರೋಗವನ್ನು ದೂರವಿಡಿ, ರೋಗಿಯನ್ನು ಅಲ್ಲ. ಕ್ಷಯರೋಗವನ್ನು ತಡೆಗಟ್ಟುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾ| ಮೋಹನ್‌ಕುಮಾರಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ| ರಾಜಶೇಖರ ರೆಡ್ಡಿ, ಜಿಲ್ಲಾ ಕುಟುಂಬ ಕಲ್ಯಾಣಾಕಾರಿ ಡಾ| ವಿಜಯಲಕ್ಷ್ಮೀ ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ| ಅನಿಲಕುಮಾರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಮರಿಯಂಬಿ, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ| ಅಬ್ದುಲ್ಲಾ, ಜಿಲ್ಲಾಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ್ ಮತ್ತಿತರರು ಇದ್ದರು. ಕ್ಷಯರೋಗದಿಂದಗುಣಮುಖರಾದ ಮೆಹಬೂಬ್‌ಸಾಬ್ ಅವರು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.