ಕೊರೊನಾ ಕರ್ಫ್ಯೂ ಜಾರಿ


Team Udayavani, Apr 19, 2021, 9:07 PM IST

ದಗಜಹಗ್ದ

ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆ ಹಾಗೂ ಹೊಸಪೇಟೆ ನಗರಸಭೆ ವ್ಯಾಪ್ತಿಯಲ್ಲಿ ಏ. 19ರಿಂದ ಏ.30ರವರೆಗೆ “ಕೊರೊನಾ ಕರ್ಫ್ಯೂ’ ಜಾರಿಗೊಳಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಧಿಕಾರಿ ಪವನಕುಮಾರ್‌ ಮಾಲಪಾಟಿ ಅವರು ಭಾನುವಾರ ಆದೇಶ ಹೊರಡಿಸಿದ್ದಾರೆ.

ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ(34)ರಲ್ಲಿ ಪ್ರದತ್ತವಾದ ಅ ಧಿಕಾರವನ್ನು ಚಲಾಯಿಸಿ ಬಳ್ಳಾರಿ ಮಹಾನಗರ ಪಾಲಿಕೆ ಹಾಗೂ ಹೊಸಪೇಟೆ ನಗರಸಭೆ ವ್ಯಾಪ್ತಿಯಲ್ಲಿ ಏ. 19ರಿಂದ ಏ. 30ರವರೆಗೆ ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಕೊರೊನಾ ಕರ್ಫ್ಯೂ ಜಾರಿಗೊಳಿಸಲಾಗಿದೆ.

ಈ “ಕೊರೊನಾ ಕರ್ಫ್ಯೂ’ ಸಂದರ್ಭದಲ್ಲಿ ಅತ್ಯವಶ್ಯಕ ಸೇವೆಗಳಿಗೆ ಮಾತ್ರ ಅನುಮತಿಸಿದ್ದು ಉಳಿದಂತೆ ಎಲ್ಲ ಸೇವೆಗಳನ್ನು ಸಂಚಾರಗಳನ್ನು ನಿಷೇ ಧಿಸಿಲಾಗಿದೆ ಎಂದು ಜಿಲ್ಲಾಧಿ ಕಾರಿ ಮಾಲಪಾಟಿ ಅವರು ತಿಳಿಸಿದ್ದಾರೆ. ವಿವಿಧ ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮತ್ತು ಅವರ ಸಹಾಯಕರಿಗೆ ವೈದ್ಯಕೀಯ ಸೇವೆಗಾಗಿ ಸಂಚಾರಕ್ಕೆ ಅನುಮತಿಸಿದೆ. ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸುವಂಥ ಎಲ್ಲ ಕಾರ್ಖಾನೆಗಳು/ ಕಂಪನಿಗಳು/ ಸಂಸ್ಥೆಗಳು ಯಥಾರೀತಿ ಕಾರ್ಯ ನಿರ್ವಹಿಸಲು ಅನುಮತಿಸಿದೆ. ಆದರೆ, ಸಂಬಂ ಸಿದ ಕಾರ್ಮಿಕರು/ ನೌಕರರು, “ಕೊರೊನಾ ಕರ್ಫ್ಯೂ’ ಅವ ಧಿಗೆ ಮುನ್ನವೇ ಕರ್ತವ್ಯಕ್ಕೆ ಹಾಜರಿರತಕ್ಕದ್ದು.

ವೈದ್ಯಕೀಯ ಸೇವೆಗಳನ್ನು ಮತ್ತು ತುರ್ತು ಚಟುವಟೆಕೆಗೆ ಮಾತ್ರ ಅನುಮತಿಸಿದ್ದು, ಇನ್ನುಳಿದಂತೆ ಎಲ್ಲ ವಾಣಿಜ್ಯ ಚಟುವಟಿಕೆಗಳನ್ನು ನಿಬಂìಧಿ  ಸಿದೆ. ಅತ್ಯವಶ್ಯಕ ಸೇವೆಗಳನ್ನು ಒದಗಿಸುವಂತಹ ವಾಹನಗಳು/ಸರಕು ಸಾಗಾಣೀಕೆ ವಾಹನಗಳು/ ಖಾಲಿ ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಲಾಗಿದೆ.

ರಾತ್ರಿ ವೇಳೆಯಲ್ಲಿನ ಬಸ್ಸು, ರೈಲು, ವಿಮಾನದ ದೂರ ಪ್ರಯಾಣಕ್ಕೆ ಅನುಮತಿಸಲಾಗಿದೆ. ಪ್ರಯಾಣಿಕರು ಮನೆಯಿಂದ ನಿಲ್ದಾಣಗಳಿಗೆ ಮತ್ತು ನಿಲ್ದಾಣದಿಂದ ಮನೆಗೆ ಅಧಿಕೃತ ಟಿಕೆಟ್‌ಗಳ ಆಧಾರದ ಮೇಲೆ ಆಟೋ/ ಕ್ಯಾಬ್‌ ಇತ್ಯಾ ದಿಗಳ ಮೂಲಕ ಸಂಚರಿಸಲು ಅನುಮತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ಆದೇಶ ಪಾಲನೆಯಲ್ಲಿ ಲೋಪವೆಸಗುವಂಥವರ ವಿರುದ್ಧ ವಿಪತ್ತು ನಿರ್ವಾಹಣಾ ಕಾಯ್ದೆ 2005 ಸೆಕ್ಷನ್‌ 51ರಿಂದ 60 ಹಾಗೂ ಭಾರತೀಯ ದಂಡ ಸಂಹಿತೆ ಹಾಗೂ ಅನ್ವಯವಾಗಬಹುದಾದ ಇತರ ಕಾನೂನು ಉಪಬಂಧಗಳ ಅನುಸಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಅಗತ್ಯ ಕ್ರಮ: ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್‌ -19 ನಿಯಂತ್ರಣಕ್ಕೆ ಸಂಬಂ ಧಿಸಿದಂತೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತವು ಎಲ್ಲ ಅವಶ್ಯ ಕ್ರಮಗಳನ್ನು ಕೈಗೆತ್ತಿಕೊಳ್ಳುತ್ತಿದೆ ಎಂದು ಜಿಲ್ಲಾಧಿಕಾರಿ ಮಾಲಪಾಟಿ ತಿಳಿಸಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್‌ -19 ಹರಡುವಿಕೆ ಬಗ್ಗೆ ಪರಿಶೀಲಿಸಲಾಗಿ ಕಳೆದ 15 ದಿನಗಳಲ್ಲಿ ಕೋವಿಡ್‌-19 ಸೋಂಕಿತ ಪ್ರಕರಣಗಳು ದಿನೇದಿನೆ ಹೆಚ್ಚಾಗುತ್ತಿರುವ ಕಾರಣ ಹಾಗೂ ವೈದ್ಯಕೀಯ ಪರಿಣಿತರ ಸಲಹೆಗಳಂತೆ ಮುಂಬರುವ ದಿನಗಳಲ್ಲಿ ಪ್ರಕರಣಗಳು ಇನ್ನು ಹೆಚ್ಚಾಗುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಹಾಗೂ ಜಿಲ್ಲೆಯ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ವೈರಾಣು ಹೆಚ್ಚಾಗಿ ಹರಡದಂತೆ ನಿಯಂತ್ರಿಸಲು ಮತ್ತು ತಡೆಗಟ್ಟಲು ಅವಶ್ಯವವಿರುವುದರಿಂದ ಪ್ರಸ್ತುತ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ನಿಗದಿ ತ ಸಮಯದಲ್ಲಿ ಜನ ಸಂಚಾರವನ್ನು ನಿಷೇ ಧಿಸುವುದು ಸೂಕ್ತವೆಂದು ಕಂಡುಬಂದಿರುವುದರಿಂದ ಕೊರೊನಾ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

1-ani

Mangaluru; ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ : ಮೂವರ ಬಂಧನ

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಇದು ವಿಶ್ವದ ಅತಿ ಎತ್ತರದ ಏಕಶಿಲಾ ಬೆಟ್ಟ… Online ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ

ಇದು ವಿಶ್ವದ ಅತಿ ಎತ್ತರದ ಏಕಶಿಲಾ ಬೆಟ್ಟ… Online ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ

Satish Jaraki

Congress; ಸುರ್ಜೇವಾಲ ವಿರುದ್ಧ ಸಚಿವರಿಂದಲೇ ದೂರು?: ಸತೀಶ್ ಜಾರಕಿಹೊಳಿ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary

Bellary: ಐದು ವರ್ಷದ ಮಗುವಿನ ಅತ್ಯಾಚಾರ ನಡೆಸಿದ್ದ ಆರೋಪಿಗೆ ಗುಂಡೇಟು

ಮೀಟರ್ ಬಡ್ಡಿ ದಂಧೆಗೆ ಮನನೊಂದು ವಿಎಸ್‌ಕೆ ವಿವಿ ಅಟೆಂಡರ್ ಆತ್ಮಹತ್ಯೆ… ಪೊಲೀಸರಿಂದ ತನಿಖೆ

ಮೀಟರ್ ಬಡ್ಡಿ ದಂಧೆಗೆ ಮನನೊಂದು ವಿಎಸ್‌ಕೆ ವಿವಿ ಅಟೆಂಡರ್ ಆತ್ಮಹತ್ಯೆ… ಪೊಲೀಸರಿಂದ ತನಿಖೆ

5-balalri

ಆಕಳುಗಳ ಕೆಚ್ಚಲು ಕೊಯ್ದ ಪ್ರಕರಣ; ಶಾಸಕ,ಉಸ್ತುವಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

Makar Sankranti: ಹಂಪಿಗೆ ಹರಿದು ಬಂದ ಭಕ್ತ ಜನ ಸಾಗರ!

Makar Sankranti: ಹಂಪಿಗೆ ಹರಿದು ಬಂದ ಭಕ್ತ ಜನ ಸಾಗರ!

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-wl

ಅಖಿಲ ಭಾರತ ಅಂತರ್‌ ವಿ.ವಿ.ವೇಟ್‌ಲಿಫ್ಟಿಂಗ್‌:ಮಂಗಳೂರು ವಿವಿ ರನ್ನರ್ ಅಪ್‌

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

1-ani

Mangaluru; ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ : ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.