Covid Scam: ಕೋವಿಡ್ ಅಕ್ರಮ ಸಾಬೀತಾದಲ್ಲಿ ರಾಜಕೀಯ ನಿವೃತ್ತಿ: ಬಿ.ಶ್ರೀರಾಮುಲು
ಕಾಂಗ್ರೆಸ್ ಸರಕಾರದ ಇಂತಹ ಗೊಡ್ಡು ಬೆದರಿಕೆಗೆಲ್ಲ ಜಗ್ಗಲ್ಲ: ಮಾಜಿ ಆರೋಗ್ಯ ಸಚಿವ
Team Udayavani, Nov 10, 2024, 7:15 AM IST
ಬಳ್ಳಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಹಗರಣಗಳನ್ನು ಮುಚ್ಚಿಹಾಕಲು ನನ್ನ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮೇಲೆ ಅಭಿಯೋಜನೆಗೆ ಶಿಫಾರಸು ಮಾಡಲು ಮುಂದಾಗಿದ್ದಾರೆ. ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಿಲ್ಲ, ಬಗ್ಗುವುದಿಲ್ಲ. ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ತಿಳಿಸಿದರು.
ಸಂಡೂರು ಕ್ಷೇತ್ರದ ಬನ್ನಿಹಟ್ಟಿ ಗ್ರಾಮದ ಪ್ರಚಾರ ಸಭೆಯಲ್ಲಿ ಶನಿವಾರ ಅವರು ಮಾತನಾಡಿದರು. ಕೋವಿಡ್ ಸಂದರ್ಭ ಭ್ರಷ್ಟಾಚಾರ ನಡೆದಿದೆ ಎಂದು ಹೇಳುತ್ತಿರುವ ಸಿಎಂ, ಅಧಿ ಕಾರಕ್ಕೆ ಬಂದು ಒಂದೂವರೆ ವರ್ಷಗಳ ಕಾಲ ಏಕೆ ತುಟಿಬಿಚ್ಚಲಿಲ್ಲ. ಕಾಂಗ್ರೆಸ್ ಸರಕಾರದ ಇಂತಹ ಗೊಡ್ಡು ಬೆದರಿಕೆ ನನಗೆ ಏನು ಮಾಡದು. ನಾನು ಸಚಿವನಾಗಿದ್ದ ಅವಧಿಯಲ್ಲಿ ಕಲಬುರಗಿ ಮೂಲಕ ಕೊರೊನಾ ರಾಜ್ಯದ ತುಂಬೆಲ್ಲ ಹರಡಿತ್ತು. ಆಗ ಕಾರ್ಯಪಡೆ ರಚಿಸಿಕೊಂಡು ಕೆಲಸ ಮಾಡಿದ್ದೇವೆ ಎಂದರು.
ವಾಲ್ಮೀಕಿ ಹಗರಣ ಏಕೆ ಆಯಿತು ಅಂತ ನಾವು ಜನರಿಗೆ ಹೇಳುತ್ತಿದ್ದೇವೆ. ಇದನ್ನೆಲ್ಲ ಮುಚ್ಚಿಹಾಕೋ ಷಡ್ಯಂತ್ರವಾಗಿ ಈಗ ಕೋವಿಡ್ ವಿಚಾರ ತೆಗೆದಿದ್ದಾರೆ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.