ಅಧಿಕಾರಿಗಳು ಸಿಬ್ಬಂದಿಯಿಂದ ಸಮಗ್ರ ಮಾಹಿತಿ ಸಂಗ್ರಹಿಸಿ
Team Udayavani, Dec 7, 2020, 7:13 PM IST
ಕೂಡ್ಲಿಗಿ: ಶೀಘ್ರದಲ್ಲೇ ಕೋವಿಡ್ ಲಸಿಕೆ ಲಭ್ಯ ವಾಗಲಿದ್ದು ಆಯಾ ಕಚೇರಿ ಸಿಬ್ಬಂದಿಯಿಂದ ಮಾಹಿತಿ ಯನ್ನು ಎಲ್ಲ ಅಧಿಕಾರಿಗಳು ಸಂಗ್ರಹಿಸಬೇಕು ಎಂದು ಕೂಡ್ಲಿಗಿ ಟಿಎಚ್‌ಓ ಷಣ್ಮುಖನಾಯ್ಕ ತಿಳಿಸಿದರು.
ಅವರು ತಾಲೂಕು ಕಚೇರಿಯಲ್ಲಿ ಕೋವಿಡ್ ಲಸಿಕೆ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ನೀಡಿದರು. ಸರ್ಕಾರದ ನಿರ್ದೇಶನದಂತೆ ಪ್ರಾಥಮಿಕವಾಗಿ ಆರೋಗ್ಯ ಸಿಬ್ಬಂದಿ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ನೀಡಲಿದ್ದು, ತದನಂತರ ಎಲ್ಲಕಚೇರಿಗಳ ಸಿಬ್ಬಂದಿಗೆ ಲಸಿಕೆ ನೀಡುವ ಮಾಹಿತಿ ಇದೆ. ಅದರ ಜೊತೆ ತುರ್ತು ಆರೋಗ್ಯ ಸಮಸ್ಯೆ ಇರುವವರಿಗೆ ಈ ಲಸಿಕೆ ನೀಡಬೇಕೆಂಬ ನಿರ್ದೇಶನವೂ ಇದೆ. ಆದ್ದರಿಂದ ತಮ್ಮ ಇಲಾಖೆ ಸಿಬ್ಬಂದಿ ಮಾಹಿತಿ ಜೊತೆಗೆ ಮುಂದಿನ ಹಂತದಲ್ಲಿ ಯಾವುದೇ ಸಾರ್ವಜನಿಕರಿಗೂ ತೊಂದರೆಯಾಗದಂತೆ ಅಧಿ ಕಾರಿಗಳು ಹಾಗೂ ಗ್ರಾಪಂ ಸಿಬ್ಬಂದಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಬಿಪಿ, ಸಕ್ಕರೆ ಕಾಯಿಲೆ, ಹೃದಯ ರೋಗ ಸೇರಿದಂತೆ ವಿವಿಧ ರೋಗಗಳಿಂದ ಬಳಲುತ್ತಿರುವ ನಾಗರಿಕರ ಪಟ್ಟಿಮಾಡಿ ಎಂದು ಸೂಚಿಸಿದರು.
ಶೀಘ್ರದಲ್ಲಿಯೇ ಗ್ರಾಪಂ ಚುನಾವಣೆ ಸಮೀಪದಲ್ಲಿಯೇ ಇದ್ದು, ಎರಡನೇ ಹಂತದ ಕೋವಿಡ್ ಅಲೆ ಎದುರಾಗುವ ಭೀತಿಯಿದೆ. ಆದ್ದರಿಂದ ಚುನಾವಣೆಗಳಲ್ಲಿ ಅಧಿ ಕಾರಿಗಳು ಜನರಿಗೆ ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಬಳಸಿ ರೋಗದ ಬಗ್ಗೆ ಎಚ್ಚರ ವಹಿಸಲು ಸೂಚನೆ ನೀಡಬೇಕೆಂದರು. ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಎಸ್. ಮಹಾಬಲೇಶ್ವರ ಮಾತನಾಡಿ, ಈಗಾಗಲೇ ಈ ಕುರಿತು ಡಿಸಿಯವರು ಸೂಕ್ತ ನಿರ್ದೇಶನ ನೀಡಿದ್ದು ಲಸಿಕೆ ಯಾವುದೇ ಹಂತದಲ್ಲಿ ನಮಗೆ ಬರಬಹುದು. ಆದ್ದರಿಂದ ಎಲ್ಲ ಇಲಾಖೆಯ ಸಿಬ್ಬಂದಿಗಳ ಮಾಹಿತಿ ಪಟ್ಟಿಯನ್ನು ತಯಾರಿಸಿಕೊಳ್ಳಲು ಸೂಚಿಸಿದ್ದಾರೆ.
ಆದ್ದರಿಂದ ಎಲ್ಲ ಇಲಾಖೆ ಅಧಿಕಾರಿಗಳು ಶೀಘ್ರದಲ್ಲೇ ಪಟ್ಟಿ ತಯಾರು ಮಾಡಿಕೊಳ್ಳಬೇಕು ಎಂದರು. ಗ್ರಾಪಂ ಚುನಾವಣೆ ಎದುರಾಗುತ್ತಿದ್ದು ಪಿಡಿಓ ಹಾಗೂ ಗ್ರಾಪಂ ಅಧಿಕಾರಿಗಳು ಮೊದಲ ಹಂತವಾಗಿ ಮತದಾನ ಕೆಂದ್ರದ ಮೂಲ ಸೌಲಭ್ಯಗಳನ್ನು ತಯಾರು ಮಾಡಿ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳಿ ಎಂದು ತಿಳಿಸಿದರು. ಈ ಸಮಯದಲ್ಲಿ ಡಿವೈಎಸ್‌ಪಿ ಹರೀಶ್, ಇಓ ಜಿ.ಎಂ. ಬಸಣ್ಣ, ಪಪಂ ಮುಖ್ಯಾಧಿಕಾರಿ ಸಿ. ಪಕೃದ್ದೀನ್, ಬಿಇಓ ಉಮಾದೇವಿ, ಸಿ. ಅಂಜಿನಪ್ಪ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಪಿಡಿಒಗಳು ಸಭೆಯಲ್ಲಿ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.