ಕ್ರಿಕೆಟ್ ಬೆಟ್ಟಿಂಗ್: ನಾಲ್ವರ ಬಂಧನ-11800 ರೂ. ವಶಕ್ಕೆ
Team Udayavani, Mar 31, 2022, 5:13 PM IST
ಬಳ್ಳಾರಿ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಯುತ್ತಿದ್ದ ಎರಡು ಕಡೆ ಪ್ರತ್ಯೇಕವಾಗಿ ದಾಳಿ ನಡೆಸಿರುವ ಕಂಪ್ಲಿ ಠಾಣೆ ಪೊಲೀಸರು ನಾಲ್ವರನ್ನು ಬಂಧಿಸಿ 11800 ರೂಗಳೊಂದಿಗೆ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಸದ್ಯ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮಾ.29 ರಂದು ರಾಜಸ್ಥಾನ್ ರಾಯಲ್ಸ್ ಮತ್ತು ಸನ್‌ರೈಸರ್ ಹೆ„ದರಾಬಾದ್ ತಂಡಗಳ ಮಧ್ಯೆ ನಡೆದ ಪಂದ್ಯಕ್ಕೆ ನಂ.10 ಮುದ್ದಾಪುರ ಗ್ರಾಮದಲ್ಲಿ ಸುರೇಶ್ (22), ಅನೀಲ್ ಕುಮಾರ್ ಎನ್ನುವವರು ರಾಜಸ್ಥಾನ್ ರಾಯಲ್ಸ್ ಗೆದ್ದರೆ 100 ರೂ.ಗೆ 200 ರೂ, ಸನ್ ರೈಸರ್ ಹೈದರಾಬಾದ್ ಗೆದ್ದರೆ 100 ರೂ.ಗೆ 300 ರೂ. ಕೊಡುವುದಾಗಿ ಹೇಳಿ ಸಾರ್ವಜನಿಕರಿಂದ ಹಣವನ್ನು ಬೆಟ್ಟಿಂಗ್ ಕಟ್ಟಿಸಿಕೊಳ್ಳುವಲ್ಲಿ ತೊಡಗಿದ್ದು, ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕಂಪ್ಲಿ ಪೊಲೀಸರು ಸುರೇಶ್ (22), ಅನೀಲ್ ಕುಮಾರ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿ 10 ಸಾವಿರ ರೂ.ಗಳೊಂದಿಗೆ ಚೀಟಿ, ಬಾಲ್‌ಪೆನ್, ಬೆಟ್ಟಿಂಗ್‌ಗೆ ಬಳಸಿದ್ದ ಮೊಬೈಲ್ ಫೋನ್‌ನ್ನು ವಶಪಡಿಸಿಕೊಂಡಿದ್ದಾರೆ.
ಕಂಪ್ಲಿ ಪಟ್ಟಣದ ಪದವಿ ಕಾಲೇಜು ಹಿಂಭಾಗ ಕೋಳಿ ಫಾರಂ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಈ ತಂಡಗಳ ನಡುವೆ ಬೆಟ್ಟಿಂಗ್ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಮಂಜುನಾಥ್ (36), ಯೂಸೂಫ್ ಎನ್ನುವವರನ್ನು ಬಂಧಿಸಿ ಅವರಿಂದ 1800 ರೂಗಳೊಂದಿಗೆ ಮೊಬೈಲ್ ಫೋನ್ ನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಎಸ್‌ಪಿ ಸೈದುಲು ಅಡಾವತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.