Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Team Udayavani, Nov 22, 2024, 11:55 AM IST
ಸಿರುಗುಪ್ಪ: ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಕಾಣಿಸಿಕೊಳ್ಳುತ್ತಿದ್ದ ಮೊಸಳೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆಹಿಡಿದಿದ್ದು ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ.
ನಿಟ್ಟೂರು ಗ್ರಾಮದ, ತುಂಗಭದ್ರ ನದಿಯ ಸಿಂಗಾಪುರ ಘಾಟ್ ರಸ್ತೆಯಲ್ಲಿರುವ ಸಾಮ್ರಾಟ ಹಿರಿಯ ಪ್ರಾಥಮಿಕ ಶಾಲೆಯ ಹಿಂದಿರುವ ಹಳ್ಳದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಕಾಣಿಸಿಕೊಂಡಿದ್ದ ಮೊಸಳೆಯು ಜನರು ಓಡಾಡುವ ರಸ್ತೆಯಲ್ಲಿ ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು, ಮೊಸಳೆ ಕಾಣಿಸಿಕೊಂಡ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿಯನ್ನು ಗ್ರಾಮಸ್ಥರು ನೀಡಿದ್ದರು.
ಅರಣ್ಯ ಇಲಾಖೆಯ ಅಧಿಕಾರಿ ಅಂಬಣ್ಣ ನಾಯಕ ನೇತೃತ್ವದಲ್ಲಿ ಮೊಸಳೆ ಹಿಡಿಯುವ ಕಾರ್ಯಾಚರಣೆ ನಡೆಯಿತು. ವೇಷಗಾರ ಮಲ್ಲಯ್ಯ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ನವೆಂಬರ್ 22ರಂದು ಬೆಳಗಿನ ಜಾವ ಮೊಸಳೆಯನ್ನು ಹಿಡಿದಿದ್ದು ತುಂಗಭದ್ರಾ ನದಿಗೆ ಬಿಡಲಾಗಿದೆ.
ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆಯನ್ನು ನವೆಂಬರ್ 22ರಂದು ಸೆರೆಹಿಡಿದು ತುಂಗಭದ್ರಾ ನದಿಗೆ ಬಿಡಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿ ಅಂಬಣ್ಣ ನಾಯ್ಕ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.