ನದಿ ತೀರದ ಜನರಿಗೆ ಮೊಸಳೆಗಳ ಆತಂಕ

ನಿದ್ದೆಗೆಟ್ಟು ಕಾಯಬೇಕಿದೆ ಜಾನುವಾರುಗಳನ್ನು-ಹೊಲಗಳಿಗೂ ನುಗ್ಗುತ್ತಿವೆ ಮೊಸಳೆ

Team Udayavani, May 6, 2022, 2:16 PM IST

crocodile

ಸಿರುಗುಪ್ಪ: ತಾಲೂಕಿನಲ್ಲಿ ಸುಮಾರು 40 ಕಿಮೀ ದೂರ ಹರಿಯುವ ತುಂಗಭದ್ರಾ ನದಿಯಲ್ಲಿ ಬೇಸಿಗೆಯಲ್ಲಿ ನೀರು ಕಡಿಮೆ ಆಗುತ್ತಿದ್ದಂತೆ ಮೊಸಳೆಗಳು ಕಾಣಿಸಿಕೊಳ್ಳುತ್ತಿದ್ದು, ನದಿ ತೀರದ ಜನರಿಗೆ ಆತಂಕ ಶುರುವಾಗುತ್ತದೆ.

ತಾಲೂಕಿನಲ್ಲಿ ತುಂಗಭದ್ರ ನದಿ ದಂಡೆಯಲ್ಲಿರುವ ಎಂ.ಸೂಗೂರು, ಮಣ್ಣೂರು, ನಡಿವಿ, ರುದ್ರಪಾದ, ನಿಟ್ಟೂರು, ಹೆರಕಲ್ಲು, ಕೆಂಚನಗುಡ್ಡ, ದೇಶನೂರು, ಬಾಗೇವಾಡಿ, ಚಿಕ್ಕಬಳ್ಳಾರಿ, ಹೊನ್ನಾರಹಳ್ಳಿ, 25-ಹಳೇಕೋಟೆ, ಶ್ರೀಧರಗಡೆ, ಹಚ್ಚೊಳ್ಳಿ, ಮಾಟೂರು, ಚಳ್ಳೆಕೂಡ್ಲೂರು ಗ್ರಾಮಸ್ಥರು ನಿತ್ಯವೂ ಆತಂಕದಲ್ಲಿಯೇ ಓಡಾಡುವಂತಾಗಿದೆ.

ನೆಮ್ಮದಿಯಿಂದ ಹೊಲಗದ್ದೆಗಳಿಗೆ ತೆರಳುವಂತಿಲ್ಲ. ನದಿಯಲ್ಲಿ ದನಕರುಗಳಿಗೆ ನೀರು ಕುಡಿಸುವಂತಿಲ್ಲ ಮತ್ತು ಅವುಗಳಿಗೆ ಮೈ ತೊಳೆಯುವಂತಿಲ್ಲ, ಅಲ್ಲದೆ ಹೊಲದಲ್ಲಿ ನೆಮ್ಮದಿಯಾಗಿ ಕೆಲಸ ಮಾಡುವಂತಿಲ್ಲ. ರೈತರು ಜೀವ ಭಯದ ನೆರಳಿನಲ್ಲಿಯೇ ತಮ್ಮ ದಿನನಿತ್ಯದ ಕೆಲಸ ಕಾರ್ಯಗಳನ್ನು ಮಾಡುವಂತಾಗಿದೆ. ತುಂಗಭದ್ರಾ ನದಿಯಲ್ಲಿ ನೀರು ಕಡಿಮೆಯಾಗುತ್ತಿದ್ದಂತೆ ನದಿ ತೀರದಲ್ಲಿ ಮೊಸಳೆಗಳು ಕಂಡು ಬರುತ್ತಿದ್ದು, ಜಾನುವಾರುಗಳ ಬೇಟೆಗೆ ಹೊಂಚು ಹಾಕಿ ಮೊಸಳೆಗಳನ್ನು ಕಾಯುವುದು ಸಾಮಾನ್ಯವಾಗಿದೆ.

ಆಹಾರ ಅರಸಿ ನದಿ ದಡಕ್ಕೆ ಬರುವ ಮೊಸಳೆಗಳು ಹೊಲಗದ್ದೆಗಳಲ್ಲಿಯೂ ಬರುತ್ತಿದ್ದು, ಇದರಿಂದಾಗಿ ತಾಲೂಕಿನ ನದಿ ತೀರದ ಗ್ರಾಮಸ್ಥರಿಗೆ ನೆಮ್ಮದಿಯೇ ಇಲ್ಲದಂತಾಗಿದೆ. ಜನ ಜಾನುವಾರುಗಳ ಮೇಲೆ ಮೊಸಳೆಗಳು ಯಾವಾಗ ದಾಳಿ ಮಾಡುತ್ತವೆಯೋ ಎಂಬ ಭಯದಲ್ಲಿಯೇ ಬದುಕುತ್ತಿದ್ದಾರೆ. ಕಳೆದ 2 ವರ್ಷಗಳಲ್ಲಿ ಮೊಸಳೆಗಳ ದಾಳಿಗೆ ಮೂವರು ಮೃತಪಟ್ಟಿದ್ದಾರೆ.

ಮೊಸಳೆಗಳ ಕಾಟದಿಂದ ಅನೇಕಬಾರಿ ಜನ ಜಾನುವಾರುಗಳಿಗೂ ಹಾನಿಯಾಗಿದೆ. ಕಳೆದ 10 ವರ್ಷಗಳಲ್ಲಿ ತಾಲೂಕಿನಲ್ಲಿ ಹರಿಯುವ ತುಂಗಭದ್ರಾ ನದಿಯಲ್ಲಿ 500ಕ್ಕೂ ಹೆಚ್ಚು ಮೊಸಳೆಗಳಿವೆ ಎಂದು ಹೇಳಲಾಗುತ್ತಿದೆ. ನದಿ ತೀರದಲ್ಲಿ ಸಾಲು ಸಾಲಾಗಿ ಮೊಸಳೆಗಳು ಮಲಗಿಕೊಳ್ಳುವುದು ಸಾಮಾನ್ಯ ದೃಶ್ಯವಾಗಿದೆ. ಇದರಿಂದಾಗಿ ಜನರು ನದಿ ತೀರದಲ್ಲಿ ಓಡಾಡಲು ಭಯಪಡುವಂತಾಗಿದೆ. ತಾಲೂಕಿನ ದೇಶನೂರು ಗ್ರಾಮದ ನದಿ ತೀರದಲ್ಲಿರುವ ತೋಟಗಾರಿಕೆ ಇಲಾಖೆಯ ಸಸ್ಯಕ್ಷೇತ್ರದಲ್ಲಿ ಹತ್ತಾರು ಮೊಸಳೆಗಳು ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದ್ದು, ಇಲ್ಲಿಯವರೆಗೆ ಇಲ್ಲಿ ಕೆಲಸ ಮಾಡುವ ಯಾವುದೇ ಕೆಲಸಗಾರರ ಮೇಲೆ ಮೊಸಳೆಗಳು ದಾಳಿ ಮಾಡಿಲ್ಲ.

ತಾಲೂಕಿನ ಹರಿಗೋಲ್‌ ಘಾಟ್‌ನಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬರನ್ನು ಮತ್ತು ನಿಟ್ಟೂರು ಗ್ರಾಮದಲ್ಲಿ ನದಿ ಮೂಲಕ ಜಮೀನಿಗೆ ತೆರಳುತ್ತಿದ್ದ ರೈತನನ್ನು ಹಾಗೂ ಚಲ್ಲೆಕೂಡ್ಲೂರು ಗ್ರಾಮದ ಯುವಕನೊಬ್ಬನು ಮೀನು ಹಿಡಿಯಲು ನದಿಗೆ ತೆರಳಿದಾಗ ಮೊಸಳೆಗಳು ದಾಳಿ ಮಾಡಿ ಮೃತಪಟ್ಟಿದ್ದ. ತುಂಗಭದ್ರಾ ನದಿಯಲ್ಲಿರುವ ಅಪಾಯಕಾರಿ ಮೊಸಳೆಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಶಾಸಕ ಎಂ.ಎಸ್. ಸೋಮಲಿಂಗಪ್ಪ ವಿಧಾನಸಭೆಯಲ್ಲಿ ಚರ್ಚೆ ನಡೆಸಿದ್ದರು.

ಆದರೂ ತಾಲೂಕಿನ ಜನರಿಗೆ ಮೊಸಳೆಗಳ ಆತಂಕ ತಪ್ಪಿಲ್ಲ. ಮೊಸಳೆಗಳು ಯಾವ ಭಾಗದಲ್ಲಿ ಹೆಚ್ಚಿವೆ ಎನ್ನುವ ಮಾಹಿತಿ ನೀಡುವ ನಾಮಫಲಕಗಳನ್ನು ಅಳವಡಿಸುವ ಕಾರ್ಯ ನಡೆಯಬೇಕಾಗಿದೆ. ಇನ್ನಾದರೂ ಅರಣ್ಯ ಇಲಾಖೆಯವರು ಮೊಸಳೆಗಳ ಬಗ್ಗೆ ನದಿ ತೀರದ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಬೇಕಾಗಿದೆ.

ಆರ್.ಬಸವರೆಡ್ಡಿ ಕರೂರು

ಟಾಪ್ ನ್ಯೂಸ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

13-

Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

Sanduru-BJP-Cong-Candidates

Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

byndoor

Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.