ಗುಣಮುಖರಾದ ಆರು ಜನರ ಬಿಡುಗಡೆ
Team Udayavani, Jun 14, 2020, 8:35 AM IST
ಬಳ್ಳಾರಿ: ನಗರದ ಕೋವಿಡ್ (ಜಿಲ್ಲಾ) ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಹೊಸಪೇಟೆಯ ಟಿಬಿ ಡ್ಯಾಂ ಠಾಣೆಯ ಸಿಪಿಐ ಸೇರಿ ಗುಣಮುಖರಾದ 6 ಜನರನ್ನು ಶನಿವಾರ ಬಿಡುಗಡೆಗೊಳಿಸಲಾಯಿತು.
ಹೊಸಪೇಟೆಯ ಟಿಬಿಡ್ಯಾಂ ಪೊಲೀಸ್ ಠಾಣೆಯ 50 ವರ್ಷದ ಸಿಪಿಐ ಪಿ.5377, ಹೊಸಪೇಟೆಯ 40 ವರ್ಷದ ವ್ಯಕ್ತಿ ಪಿ.3246, ತೋರಣಗಲ್ಲಿನ 42 ವರ್ಷದ ವ್ಯಕ್ತಿ ಪಿ.4350, ಬಳ್ಳಾರಿಯ 45 ವರ್ಷದ ಮಹಿಳೆ ಪಿ.5573, ಕರ್ನೂಲ್ ಜಿಲ್ಲೆಯ ಸೋಂಕಿತ 54 ವರ್ಷದ ಪಿ.5574, ಬಳ್ಳಾರಿಯ 35 ವರ್ಷದ ವ್ಯಕ್ತಿ ಪಿ.5379 ಅವರು ಕೋವಿಡ್ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ನಗರದ ಕೋವಿಡ್ ಆಸ್ಪತ್ರೆಯಲ್ಲಿ ಹೂವು, ಹಣ್ಣು, ಪಡಿತರ ಧಾನ್ಯಗಳನ್ನು ನೀಡಿ ಚಪ್ಪಾಳೆ ತಟ್ಟುವ ಮೂಲಕ ಅಂಬ್ಯುಲೆನ್ಸ್‌ನಲ್ಲಿ ಅವರ ಮನೆಗಳಿಗೆ ಕಳುಹಿಸಿಕೊಡಲಾಯಿತು.
ಈ ವೇಳೆ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಎನ್. ಬಸರೆಡ್ಡಿ ಮಾತನಾಡಿ, ಇವರು ಬಂದಾಗ ಸಾಕಷ್ಟು ಭಯಭೀತರಾಗಿದ್ದರು. ಇವರಿಗೆ ಆಪ್ತ ಸಮಾಲೋಚನೆ ಮಾಡಿ ಅವರಲ್ಲಿದ್ದ ಭಯ ಹೋಗಲಾಡಿಸಿದೆವು. ಆತ್ಮಸ್ಥೈರ್ಯ ತುಂಬಿ ಅವರನ್ನು ಗುಣಮುಖರಾಗಲು ಬಹಳ ಶ್ರಮವಹಿಸಿದೆವು. 6 ಜನರು ಒಂದೇ ಬಾರಿಗೆ ಗುಣಮುಖರಾಗಿರುವುದು ನಮಗೆ ತುಂಬಾ ಸಂತೋಷವಾಗಿದ್ದು, ಇನ್ನು ಉಳಿದವರನ್ನು ಆದಷ್ಟು ಬೇಗ ಗುಣಮುಖರನ್ನಾಗಿ ಮಾಡಿ ಬಳ್ಳಾರಿಯನ್ನು ಕೋವಿಡ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಪ್ರಯತ್ನಿಸುತ್ತೇವೆ ಎಂದರು.
ಗುಣಮುಖರಾಗಿ ಹೊರಬಂದವರಲ್ಲಿ ಟಿಬಿ ಡ್ಯಾಂ ಸಿಪಿಐ ಸೇರಿದಂತೆ ಕೆಲವರು ಮಾತನಾಡಿದರು. ಬಳ್ಳಾರಿ ಡಿವೈಎಸ್ಪಿ ಕೆ.ರಾಮರಾವ್, ಹೊಸಪೇಟೆ ಡಿವೈಎಸ್ಪಿ ರಘುಕುಮಾರ್ ಮಾತನಾಡಿದರು. ಈ ಸಂದರ್ಭದಲ್ಲಿ ಕೋವಿಡ್ ನೋಡಲ್ ಅ ಧಿಕಾರಿ ಡಾ| ದೈವೀಕ್, ಡಾ| ನಿಖೀಲ್, ಡಾ| ಶಂಕರ್ ನಾಯಕ್, ಡಾ| ಪ್ರಕಾಶ್, ಡಾ| ಉದಯ್ ಶಂಕರ್, ಡಾ| ಚಿತ್ರಶೇಖರ ಸೇರಿದಂತೆ ಪೊಲೀಸ್ ಇಲಾಖೆಯ ವಿವಿಧ ಹಂತದ ಅಧಿಕಾರಿಗಳು, ಡಾ| ಪ್ರಕಾಶ, ಅಂಜನೇಯ ಹಾಗೂ ಲ್ಯಾಬ್ ಟೆಕ್ನಿಷಿಯನ್ಸ್, ಎಕ್ಸ್-ರೇ, ಡಿ-ಗ್ರೂಪ್ ಸಿಬ್ಬಂದಿ ಸೇರಿದಂತೆ ಆಸ್ಪತ್ರೆಯ ಇತರೆ ಸಿಬ್ಬಂದಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!
Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ
Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.