ಕಂಚಿಕೆರೆ-ಅರಸೀಕರೆ ರಸ್ತೆ ದುರಸ್ತಿಗೆ ಮನವಿ
Team Udayavani, Feb 9, 2020, 5:35 PM IST
ದಾವಣಗೆರೆ: ಬಳ್ಳಾರಿ ಜಿಲ್ಲೆಯ ಕೊಟ್ಟೂರಿನ ಶ್ರೀಕೊಟ್ಟೂರೇಶ್ವರ ಸ್ವಾಮಿ ರಥೋತ್ಸವಕ್ಕೆ ಪಾದಯಾತ್ರೆ ಮೂಲಕ ಸಾವಿರಾರು ಭಕ್ತರು ತೆರಳುತ್ತಿದ್ದು, ಅವರು ಬರಿಗಾಲದಲ್ಲಿ ಹೋಗುವ ರಸ್ತೆ ದುರಸ್ತಿಗೆ ಸಂಬಂಧಪಟ್ಟ ಇಲಾಖೆಯವರು ತಕ್ಷಣ ಮುಂದಾಗಲಿ ಎಂದು ಕೆಪಿಸಿಸಿ ಸಾಮಾಜಿಕ ಜಾಲತಾಣದ ವಿಭಾಗದ ರಾಜ್ಯ ಕಾರ್ಯದರ್ಶಿ ಕೆ.ಎಲ್. ಹರೀಶ್ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿಯೇ ಅತಿ ಹೆಚ್ಚಿನ ಭಕ್ತರು ಶ್ರೀ ಕೊಟ್ಟೂರೇಶ್ವರ ಸ್ವಾಮಿ ರಥೋತ್ಸವಕ್ಕೆ ಪಾದಯಾತ್ರೆ ಮೂಲಕ ತೆರಳುತ್ತಾರೆ. ಶ್ರೀ ಕೊಟ್ಟೂರೇಶ್ವರ ಸ್ವಾಮಿ ರಥೋತ್ಸವ ಪಾದಯಾತ್ರೆಗೆ ಅಕ್ಕಪಕ್ಕದ ಜಿಲ್ಲೆಗಳಿಂದ ಪಾದಯಾತ್ರೆಯಲ್ಲಿ ಹೋಗುತ್ತಾರೆ. ದಾವಣಗೆರೆ, ಹೊನ್ನಳ್ಳಿ, ಚನ್ನಗಿರಿ, ಹರಿಹರ ತಾಲೂಕಿನ ಭಕ್ತರು ಕಂಚಿಕೆರೆ, ಅರಸೀಕೆರೆ ಮುಖಾಂತರ ಕೊಟ್ಟೂರಿಗೆ ಪಾದಯಾತ್ರೆ ಕೈಗೊಳ್ಳುತ್ತಾರೆ. ಹಲವು ವರ್ಷಗಳಿಂದ ಈ ರಸ್ತೆ ಹದಗೆಟ್ಟಿದ್ದರೂ ಸಹ ಜನಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸಿಲ್ಲ. ಪ್ರತಿವರ್ಷ ಭಕ್ತರು ಪಾದಯಾತ್ರೆ ಸಂದರ್ಭದಲ್ಲಿ ಸರ್ಕಾರಕ್ಕೆ ಹಿಡಿಶಾಪ ಹಾಕುವುದು ತಪ್ಪಿಲ್ಲ.
ಈ ಬಾರಿಯಾದರೂ ನಮ್ಮ ಜನಪ್ರತಿನಿಧಿಗಳು ಕೆಸರೆರಚಾಟ ಬಿಟ್ಟು ಭಕ್ತರ ಮನವಿಗೆ ಸ್ಪಂದಿಸಿ, ರಸ್ತೆ ಅಭಿವೃದ್ಧಿ ಅಥವಾ ತಾತ್ಕಾಲಿಕವಾಗಿಯಾದರೂ ತಕ್ಷಣ ದುರಸ್ತಿ ಮಾಡಿಸಲಿ ಎಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.