ಅರ್ಥಪೂರ್ಣ ಗಣರಾಜ್ಯೋತ್ಸವಕ್ಕೆ ನಿರ್ಧಾರ

ಗಣರಾಜ್ಯೋತ್ಸವಕ್ಕೆ ಹಾಜರಾಗದವರಿಗೆ ನೋಟಿಸ್‌ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

Team Udayavani, Jan 12, 2020, 3:54 PM IST

12-Janauary-20

ದಾವಣಗೆರೆ: ರಾಷ್ಟ್ರೀಯ ಹಬ್ಬವಾದ ಗಣರಾಜ್ಯೋತ್ಸವ ಅರ್ಥಪೂರ್ಣವಾಗಿರಬೇಕು. ದೇಶದ ಗಣರಾಜ್ಯಕ್ಕಾಗಿ ಶ್ರಮಿಸಿದ ಎಲ್ಲಾ ಮಹನೀಯರನ್ನು ನೆನೆಯುವ ದಿನ ಇದಾಗಿದ್ದು, ಅವರ ಶ್ರಮ, ತ್ಯಾಗ, ಬಲಿದಾನಕ್ಕೆ ನಾವು ಗೌರವ ಸಮರ್ಪಿಸಬೇಕಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದ್ದಾರೆ.

ತಮ್ಮ ಕಚೇರಿ ಸಭಾಂಗಣದಲ್ಲಿ 71ನೇ ಗಣರಾಜ್ಯೋತ್ಸವ ಪೂರ್ವಸಿದ್ಧತೆ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜ.26ರಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ನೆರವೇರಲಿದೆ. ಎಲ್ಲ ಇಲಾಖೆ ಮುಖ್ಯಸ್ಥರು ತಮ್ಮ ತಮ್ಮ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಿ. 9 ಗಂಟೆಯೊಳಗಾಗಿ ಕ್ರೀಡಾಂಗಣದಲ್ಲಿ ಹಾಜರಿರಬೇಕು. ಯಾವುದೇ ಕಾರಣಕ್ಕೂ ಸರ್ಕಾರಿ ಇಲಾಖೆ ಅ ಧಿಕಾರಿ ಮತ್ತು ಸಿಬ್ಬಂದಿ ರಜೆ ಎಂಬುದಾಗಿ ಭಾವಿಸದೇ ತಪ್ಪದೇ ಹಾಜರಿರಬೇಕು. ಹಾಜರಾಗದವರಿಗೆ ನೋಟಿಸ್‌ ನೀಡಲಾಗುವುದು ಎಂದರು.

10 ಸಾವಿರ ಜನರು ಕುಳಿತುಕೊಳ್ಳಲು ಸಾಮರ್ಥ್ಯದ ಕ್ರೀಡಾಂಗಣ ಅಂದು ತುಂಬಬೇಕು. ಅತಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಶಿಕ್ಷಣ ಇಲಾಖೆ ಕ್ರಮ ವಹಿಸಬೇಕು. ಮಕ್ಕಳಿಗೆ ಶುದ್ದ ಕುಡಿಯುವ ನೀರಿನ ವ್ಯವಸ್ಥೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಪೆರೇಡ್‌ನ‌ಲ್ಲಿ ಭಾಗವಹಿಸುವ ಮಕ್ಕಳಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಸೂಚಿಸಿದರು. ಪ್ಲಾಸ್ಟಿಕ್‌ ಧ್ವಜ, ಪ್ಲಾಸ್ಟಿಕ್‌ ಹೂಗುಚ್ಚ ಮತ್ತು ನೀರಿನ ಬಾಟಲ್‌ಗ‌ಳನ್ನು ಯಾವುದೇ ಕಾರಣಕ್ಕೂ ತರುವಂತಿಲ್ಲ. ಅಪರ ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ, ತಹಶೀಲ್ದಾರ್‌, ಪೊಲೀಸ್‌ ಉಪ ಅಧೀಕ್ಷಕರು, ಮಹಾನಗರಪಾಲಿಕೆ ಆಯುಕ್ತರು ಕಾರ್ಯಕ್ರಮದ ಮೇಲುಸ್ತುವಾರಿ ವಹಿಸಿಕೊಂಡು ಸಹಕರಿಸಬೇಕು. ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿ ಧ್ವಜ ಸಂಹಿತಿ ಕಾಪಾಡಬೇಕು. ಎಲ್ಲಾ ಶಾಲೆಗಳಲ್ಲಿ 7.30ಕ್ಕೆ ಧ್ವಜಾರೋಹಣಕ್ಕೆ ಕ್ರಮಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯವರಿಗೆ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಪೂಜಾರ್‌ ವೀರಮಲ್ಲಪ್ಪ ಮಾತನಾಡಿ, ಗಣರಾಜ್ಯೋತ್ಸವ ಸಂಬಂಧ ಆಯಾ ಇಲಾಖೆಯವರು ತಮಗೆ ವಹಿಸಿರುವ ಜವಾಬ್ದಾರಿ ನಿರ್ವಹಿಸಬೇಕು. ಎಲ್ಲಾ ಸರ್ಕಾರಿ, ಅರೆ ಸರ್ಕಾರಿ ಹಾಗೂ ಪ್ರಮುಖ ಖಾಸಗಿ ಕಚೇರಿಗಳ ಮೇಲೆ ಜ.25 ಮತ್ತು 26 ರಂದು ವಿದ್ಯುತ್‌ ದೀಪಾಲಂಕಾರ ಮಾಡಿಸಬೇಕು. ಅಂದು ಸಂಜೆ ಕುವೆಂಪು ಕನ್ನಡ ಭವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ವೇದಿಕೆ ನಿರ್ಮಾಣ, ಆಸನದ ವ್ಯವಸ್ಥೆ, ಧ್ವನಿ ವರ್ಧಕ, ವಿದ್ಯುತ್‌ ಪೂರೈಕೆ ಕುರಿತು ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರು, ಕಾರ್ಯಪಾಲಕ ಅಭಿಯಂತರರು ಸಂಪೂರ್ಣ ಮೇಲುಸ್ತುವಾರಿ ನೋಡಿಕೊಳ್ಳಬೇಕು. ಕ್ರೀಡಾಂಗಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಪೊಲೀಸ್‌ ಇಲಾಖೆಯವರು ಭದ್ರತೆ ಮತ್ತು ಸುರಕ್ಷತೆ ಒದಗಿಸಬೇಕು. ಕ್ರೀಡಾಂಗಣದಿಂದ ಕೆಲವು ಶಾಲೆಗಳು ದೂರವಿದ್ದು, ಆರ್‌ಟಿಓ ಶಾಲಾ ಮಕ್ಕಳಿಗೆ ಬಸ್‌ ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದರು. ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸರ್ಕಾರಿ ಅಧಿಕಾರಿ, ನೌಕರರಿಗೆ ಸರ್ವೋತ್ತಮ ಪ್ರಶಸ್ತಿ ನೀಡಿ, ಸನ್ಮಾನಿಸಲಾಗುವುದು ಎಂದು ಅವರು ತಿಳಿಸಿದರು.

ಸಭೆಯಲ್ಲಿ ಉಪ ವಿಭಾಗಾಧಿಕಾರಿ ಮಮತಾ ಹೊಸಗೌಡರ್‌, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ.ಜಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Ballari-BYV

Waqf Notice: ಸಿಎಂ ಪಿತೂರಿ, ಸಚಿವ ಜಮೀರ್‌ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ

Ramulu

By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!

Vijayendra (2)

Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ

Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…

Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

11

Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ

10

Mangalore: ಅಡ್ಯಾರ್‌ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ

2-dandeli

Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ

1-thirthahalli

Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.