21ರಂದು ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ
ಸುಗ್ಗೇನಹಳ್ಳಿ ಗ್ರಾಮದಲ್ಲಿ ಗ್ರಾಮವಾಸ್ತವ್ಯ: ಅಧಿಕಾರಿಗಳು ಸಾಥ್
Team Udayavani, Mar 18, 2022, 2:39 PM IST
ಬಳ್ಳಾರಿ: ಬಳ್ಳಾರಿ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ಕಂಪ್ಲಿ ತಾಲೂಕಿನ ಕಂಪ್ಲಿ ಹೋಬಳಿಯ ಸುಗ್ಗೇನಹಳ್ಳಿ ಗ್ರಾಮದಲ್ಲಿ ಮಾ. 21ರಂದು ಗ್ರಾಮವಾಸ್ತವ್ಯ ನಡೆಸಿ ಗ್ರಾಮಸ್ಥರ ದೂರು-ದುಮ್ಮಾನ ಆಲಿಸಲಿದ್ದಾರೆ. ಇದಕ್ಕಾಗಿ ಎಲ್ಲ ಸಿದ್ಧತೆಗಳು ಭರದಿಂದ ಸಾಗಿವೆ. ಜಿಲ್ಲಾಧಿಕಾರಿಗಳಿಗೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಾಥ್ ನೀಡಲಿದ್ದಾರೆ.
ಮಾ. 19ರಂದು ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಅಂದು ನಡೆಯಬೇಕಿದ್ದ ಗ್ರಾಮವಾಸ್ತವ್ಯವನ್ನು ಮಾ.21ಕ್ಕೆ ನಿಗದಿಯಾಗಿದೆ. ಜಿಲ್ಲಾಧಿಕಾರಿಗಳು ಸ್ಥಳದಲ್ಲಿಯೇ ಅನೇಕ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲಿದ್ದಾರೆ. ಉಳಿದ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಪರಿಹರಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಿದ್ದಾರೆ. ಗ್ರಾಮಸ್ಥರು ತಮ್ಮ ದೂರು-ದುಮ್ಮಾನ ಹಾಗೂ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳಿಗೆ ಹೇಳಿಕೊಳ್ಳುವ ಮೂಲಕ ಪರಿಹರಿಸಿಕೊಳ್ಳಬಹುದಾಗಿದೆ. ಜಿಲ್ಲಾಧಿಕಾರಿಗಳು ಸುಗ್ಗೇನಹಳ್ಳಿ ಗ್ರಾಮದಲ್ಲಿ ಗ್ರಾಮವಾಸ್ತವ್ಯ ನಡೆಸಲಿದ್ದರೆ, ತಾಲೂಕುಮಟ್ಟದಲ್ಲಿ ಸಹಾಯಕ ಆಯುಕ್ತರು ಹಾಗೂ ತಹಶೀಲ್ದಾರ್‌ರು ಒಂದೊಂದು ಊರುಗಳನ್ನು ಗುರುತಿಸಿ ಆ ಗ್ರಾಮಗಳಲ್ಲಿ ಗ್ರಾಮವಾಸ್ತವ್ಯ ನಡೆಸುವ ಮೂಲಕ ಜನರ ಸಮಸ್ಯೆಗಳಿಗೆ ದನಿಯಾಗುವ ಕೆಲಸ ಮಾಡಲಿದ್ದಾರೆ.
ವಿವಿಧೆಡೆ ಗ್ರಾಮ ವಾಸ್ತವ್ಯ
ಮಾ.21ರಂದು ಕಂಪ್ಲಿ ತಾಲೂಕಿನ ಕಂಪ್ಲಿ ಹೋಬಳಿಯ ಸುಗ್ಗೇನಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳು, ಬಳ್ಳಾರಿ ಸಹಾಯಕ ಆಯುಕ್ತರು ಹಾಗೂ ತಹಶೀಲ್ದಾರ್‌ರು ಹಾಗೂ ಜಿಲ್ಲಾಮಟ್ಟದ ಮತ್ತು ತಾಲೂಕುಮಟ್ಟದ ಅಧಿಕಾರಿಗಳು ಬಳ್ಳಾರಿ ತಾಲೂಕಿನ ಮೋಕಾ ಹೋಬಳಿಯ ಬೈರದೇವನಹಳ್ಳಿ ಗ್ರಾಮದಲ್ಲಿ ಬಳ್ಳಾರಿ ತಹಶೀಲ್ದಾರ್‌ರು ಮತ್ತು ಅಧಿಕಾರಿಗಳು. ಮಾ.19ರಂದು ಕುರುಗೋಡು ತಾಲೂಕಿನ ವದ್ದಟ್ಟಿ ಗ್ರಾಮದಲ್ಲಿ ತಾಲೂಕಿನ ತಹಸೀಲ್ದಾರರು ಮತ್ತು ಅಧಿಕಾರಿಗಳು, ಸಂಡೂರು ತಾಲೂಕಿನ ಮುರಾರಿಪುರ ಗ್ರಾಮದಲ್ಲಿ ತಾಲೂಕಿನ ತಹಶೀಲ್ದಾರ್ ರು ಮತ್ತು ಅಧಿಕಾರಿಗಳು, ಸಿರಗುಪ್ಪ ತಾಲೂಕಿನ ಹಚ್ಚೊಳ್ಳಿ ಹೋಬಳಿಯ ಇಟಗಿಹಾಳು ಗ್ರಾಮದಲ್ಲಿ ತಾಲೂಕಿನ ತಹಶೀಲ್ದಾರ್‌ರು ಮತ್ತು ಅಧಿಕಾರಿಗಳು ಗ್ರಾಮಗಳಲ್ಲಿ ಗ್ರಾಮ ವ್ಯಾಸ್ತವ್ಯ ಮಾಡಲಿದ್ದಾರೆ. ಗ್ರಾಮ ವಾಸ್ತವ್ಯದಲ್ಲಿ ಜಿಲ್ಲಾಧಿಕಾರಿಗಳು, ತಹಶೀಲ್ದಾರ್‌ರು ಹಾಗೂ ಅಧಿಕಾರಿಗಳು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಜನರ ಅಹವಾಲುಗಳನ್ನು ಆಲಿಸಲಿದ್ದಾರೆ. ನಂತರ ಗ್ರಾಮೀಣ ಪ್ರತಿಭೆ ಹಾಗೂ ಕಲೆಗೆ ಪ್ರೋತ್ಸಾಹಿಸುವಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಅದೇ ಗ್ರಾಮದಲ್ಲಿ ವಾಸ್ತವ್ಯ ಮಾಡಲಾಗುತ್ತದೆ.
ಗ್ರಾಮ ವಾಸ್ತವ್ಯದಲ್ಲಿ ಕೈಗೊಳ್ಳಲಾಗುವ ಕ್ರಮಗಳಿವು
ಗ್ರಾಮವಾಸ್ತವ್ಯದ ಸಂದರ್ಭದಲ್ಲಿ ಗ್ರಾಮದಲ್ಲಿನ ಎಲ್ಲ ಪಹಣಿಯಲ್ಲಿನ ಲೋಪದೋಷಗಳು, ಪಹಣಿ ಕಾಲಂ 3 ಮತ್ತು ಅಧಿಕಾರ ಬಂದ್ ತಾಳೆ ಹೊಂದಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು. ಎಲ್ಲ ಪಹಣಿಗಳಲ್ಲಿಯೂ ಕೂಡ ಕಾಲಂ 3 ಮತ್ತು ಕಾಲಂ 9 ತಾಳೆ ಆಗುತ್ತವೆಯೋ ಅಥವಾ ಇಲ್ಲವೋ ಎಂಬ ಬಗ್ಗೆ ಖಚಿತಪಡಿಕೊಳ್ಳುವುದು ಮತ್ತು ಲೋಪಗಳು ಕಂಡುಬಂದಿರುವ ಪ್ರಕರಣಗಳನ್ನು ಗುರುತಿಸಿ ವಿಲೇ ಮಾಡಲು ಆದೇಶ ಹೊರಡಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುವುದು. ಗ್ರಾಮದಲ್ಲಿ ಸರ್ಕಾರಿ ಜಮೀನು ಹಾಗೂ ಸಾರ್ವಜನಿಕ ಉದ್ದೇಶಗಳಿಗೆ ಕಾಯ್ದಿರಿಸಲಾಗಿರುವ ಜಮೀನುಗಳು ಅಕ್ರಮವಾಗಿ ಒತ್ತುವರಿಯಾಗಿದ್ದಲ್ಲಿ ಅಂಥ ಜಮೀನುಗಳನ್ನು ಗುರುತಿಸಿ ತೆರವುಗೊಳಿಸಲು ಕ್ರಮಕೈಗೊಳ್ಳುವುದು. ಗ್ರಾಮಗಳಲ್ಲಿ ವ್ಯಾಕ್ಸಿನೇಷನ್ ಹಾಕಲು ಹೆಲ್ತ್‌ಕ್ಯಾಂಪ್ ಆಯೋಜಿಸಿ ನಿಯಮಾನುಸಾರ ಕ್ರಮ ಕೈಗೊಳ್ಳತಕ್ಕದ್ದು ಎಂದು ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!
Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ
Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…
“ಕೈ’ ಬಿಡದ ಸಂಡೂರು ಮತದಾರ; ಬಿಜೆಪಿಗೆ ಜಯದ ಕಾತರ: 13 ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ
MUST WATCH
ಹೊಸ ಸೇರ್ಪಡೆ
45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
Mangaluru: ಬೇಕು ಇಂದೋರ್ ಮಾದರಿ;ದೇಶದ ನಂ.1 ಸ್ವಚ್ಛ ನಗರ ಇಲ್ಲಿಗೆ ಹೇಗೆ ಅನ್ವಯವಾಗುತ್ತದೆ?
Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ!
Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.