ಸಾಲ ಯೋಜನೆ ಉದ್ಯೋಗಾವಕಾಶಕ್ಕೆ ಉತ್ತಮ ಹೆಜ್ಜೆ
Team Udayavani, Feb 9, 2021, 2:58 PM IST
ಬಳ್ಳಾರಿ: ಸ್ಟಾರ್ಟ್ ಅಪ್ ಟು ಸೆಲ್ ಎಂಪ್ಲಾಯ್ಮೆಂಟ್ ಎಂಬ ಸುಕೋ ಬ್ಯಾಂಕ್‌ನ ವಿಶೇಷ ಸಾಲ ಯೋಜನೆಯು ಉದ್ಯೋಗಾವಕಾಶಗಳ ನಿರ್ಮಾಣಕ್ಕೆ ಅತ್ಯುತ್ತಮ ಹೆಜ್ಜೆಯಾಗಿದೆ ಎಂದು ಉಪಮುಖ್ಯಮಂತ್ರಿ ಡಾ| ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು. ಬೆಂಗಳೂರು ನಗರದಿಂದ ವರ್ಚುವಲ್ ಮೂಲಕ ಸುಕೋಬ್ಯಾಂಕ್‌ನ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸಬೇಕು ಎನ್ನುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಕೈಗೊಂಡಿದೆ. 10 ಲಕ್ಷ ಉದ್ಯೋಗಾವಕಾಶಗಳನ್ನು ನಿರ್ಮಿಸುವುದು ನಮ್ಮ ಗುರಿಯಾಗಿದೆ.
ಸ್ಟಾರ್ಟ್-ಅಪ್‌ಗ್ಳ ಉದ್ಯಮದಲ್ಲಿಪಾಲ್ಗೊಳ್ಳಲು ಅವಕಾಶ ನೀಡುವುದು, ಅದಕ್ಕೆ ಬೇಕಾದ ತರಬೇತಿ ಹಾಗೂ ಉದ್ಯಮ ಪ್ರಾರಂಭಿಸಬೇಕುಎನ್ನುವವರಿಗೆ ಹೊಸ ಯೋಜನೆಗಳನ್ನು ತಲುಪಿಸುವುದು ಅತ್ಯುತ್ತಮ ಕಲ್ಪನೆಯಾಗಿದೆ. ಇದರಿಂದ ಸ್ಟಾರ್ಟ್-ಅಪ್ ಗಳ ವ್ಯವಹಾರ ಹೆಚ್ಚಾಗುವುದಲ್ಲದೆ, ಗ್ರಾಮೀಣ ಪ್ರದೇಶ ಹಾಗೂ ಎರಡನೇ ಮತ್ತು ಮೂರನೇ ಹಂತದ ನಗರಗಳಲ್ಲಿ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿದೆ. ಇದು ಅತ್ಯುತ್ತಮ ಯೋಜನೆಯಾಗಿದ್ದು ರಾಜ್ಯ ಸರ್ಕಾರದ ವತಿಯಿಂದ ಅಗತ್ಯವಿರುವ ಸಹಕಾರವನ್ನು ನೀಡಲಾಗುವುದು ಎಂದು ಭರವಸೆ ನೀಡಿದರು.
ಬಳ್ಳಾರಿಯಿಂದ ಆನ್‌ಲೈನ್ ಮೂಲಕ ಯೋಜನೆಗೆ ಚಾಲನೆ ನೀಡಿದ ಬ್ಯಾಂಕಿನ ಸಂಸ್ಥಾಪಕ ಅಧ್ಯಕ್ಷ ಮನೋಹರ್ ಮಸ್ಕಿ ಮಾತನಾಡಿ, ನಮ್ಮ ಪ್ರದೇಶದಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಉದ್ದೇಶದಿಂದ ಹೊಸ ರೀತಿಯ ಯೋಜನೆಯನ್ನು ಪ್ರಾರಂಭಿಸಲಾಗಿದೆ. 12 ಜಿಲ್ಲೆಗಳಲ್ಲಿ ಬ್ಯಾಂಕಿನ ಶಾಖೆಗಳಿದ್ದು, ಕೊರೊನಾ ಸಂಕಷ್ಟ ಕಾಲದಲ್ಲಿ ಸಣ್ಣ ಸಾಲಗಳನ್ನು ನೀಡುವ ಜನರ ಸಹಾಯಕ್ಕೆ ಮುಂದಾಗಿದ್ದೇವು. ಸ್ಟಾರ್ಟ್ ಅಪ್ ಕಂಪನಿಗಳಿಗೆ ಹಣಕಾಸಿನ ಸಹಾಯ ಒದಗಿಸಿ, ಅವರ ಮೂಲಕ ಅವರ ಉತ್ಪನ್ನಗಳನ್ನು ಬಳಸುವವರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಿ ನಾಡಿನ ಜನರಿಗೆಆರೋಗ್ಯ ಸೇವೆಗಳು, ಆರೋಗ್ಯಯುತ ಆಹಾರ ಹಾಗೂ ಪರಿಸರ ಸಂರಕ್ಷಣೆಗೆ ಸಣ್ಣ ಸೇವೆ ನೀಡುವುದು ನಮ್ಮ ಉದ್ದೇಶವಾಗಿದೆ ಎಂದರು.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ್ ಕಲುºರ್ಗಿಯಿಂದಲೇ ಆನ್‌ಲೈನ್ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನಾಡಿನ ಯುವಜನರು ನೌಕರಿಗಳಿಗಾಗಿ ಹುಡುಕಾಡದೆ ಇಂಥ ಯೋಜನೆಗಳ ಲಾಭವನ್ನು ಪಡೆದುಕೊಂಡು ಸ್ವಯಂ ಉದ್ಯೋಗ ಆರಂಭಿಸಿ ತಾವೂ ಬೆಳದು ಇತರೆ ಯುವಜನರಿಗೆ ಉದ್ಯೋಗಗಳನ್ನು ಸೃಷ್ಟಿಸಬೇಕೆಂದು ಕರೆ ನೀಡಿದರು.
ಸುಕೋಬ್ಯಾಂಕಿನ ಅಧ್ಯಕ್ಷ ಮೋಹಿತ ಮಸ್ಕಿ ಮಾತನಾಡಿ, ಸುಕೋ ಬ್ಯಾಂಕ್ ಯಾವಾಗಲೂ ವಿಶಿಷ್ಟ ಹಾಗೂ ವಿನೂತನ ಗ್ರಾಹಕಸ್ನೇಹಿ ಯೋಜನೆಗಳನ್ನು ರೂಪಿಸಿ ಜನರಿಗೆ ತಲುಪುವಂತೆ ಮಾಡುತ್ತಿದೆ. ತಂತ್ರಜ್ಞಾನವನ್ನು ಬಳಸುವಲ್ಲಿ ಸಹಕಾರಿ ಕ್ಷೇತ್ರದಲ್ಲಿ ಯಾವಾಗಲೂ ಮುಂಚೂಣಿ ಬ್ಯಾಂಕಾಗಿ ಅಭಿವೃದ್ಧಿ ಹೊಂದುತ್ತಿದೆ. ಇಂದಿನ ಆನ್‌ಲೈನ್ ಮೂಲಕ ಯೋಜನೆ ಪ್ರಾರಂಭಿಸಿದ್ದು ಇದಕ್ಕೆ ಉದಾಹರಣೆಯಾಗಿದೆ. ಈ ವಿಶೇಷ ಯೋಜನೆಯಿಂದ ಸುಮಾರು 500ಕ್ಕೂ ಹೆಚ್ಚಿನ ಯುವಕ-ಯುವತಿಯರ ಸ್ವಾವಲಂಬನೆ ಬದುಕಿಗೆ ನೆರವಾಗಲಿದೆ.
ಇದನ್ನೂ ಓದಿ:ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟ
“ಸ್ವಉದ್ಯೋಗಕ್ಕಾಗಿ ಸ್ಟಾರ್ಟ್ ಅಪ್ ಯೋಜನೆಯನ್ನು ಸುಕೋಬ್ಯಾಂಕ್ ರೂಪಿಸಿರುವ “ಸ್ಟಾರ್ಟ್ ಅಪ್ ಸೆಲ್ ಎಂಪ್ಲಾಯ್ಮೆಂಟ್ ವಿಶೇಷ ಸಾಲಯೋಜನೆ ಅಡಿಯಲ್ಲಿ ಸಾಲ ನೀಡುವ ಪ್ರಕ್ರಿಯನ್ನುಆರಂಭಿಸಲಾಗುತ್ತದೆ ಎಂದು ಅವರು ತಿಳಿಸಿದರು. ಪ್ರಾಂಚೈಸಿ ನವೀನ್ ಶೆಟ್ಟಿ ಅವರಿಗೆ ಯೋಜನೆಯ ಮೊದಲ ಫಲಾನುಭವಿ ಪ್ರಮಾಣ ಪತ್ರವನ್ನು ನೀಡಲಾಯಿತು. ಬನಶ್ರೀ ಸಿಸ್ಟಂ ಪ್ರೈ.ಲಿ.ನ ಬ್ಯಾಟ್-ಪ್ಲೇಪ್ರಾಂಚೈಸಿಯ ಮೊದಲ ಫಲಾನುಭವಿಯಾಗಿ ಸುನೀಲ್ ಕುಮಾರ್ ಪ್ರಮಾಣ ಪತ್ರವನ್ನು ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.