ಗಾಂಧೀಜಿ 150ನೇ ಜನ್ಮವರ್ಷ ಅದ್ಧೂರಿ ಆಚರಣೆಗೆ ನಿರ್ಧಾರ
Team Udayavani, Sep 28, 2018, 4:09 PM IST
ಬಳ್ಳಾರಿ: ರಾಷ್ಟ್ರಪಿತ ಮಹಾತ್ಮಾಗಾಂಧೀಜಿಯವರ 150ನೇ ಜನ್ಮವರ್ಷಾಚರಣೆಯನ್ನು ಈ ಬಾರಿ ಅದ್ಧೂರಿಯಾಗಿ ಆಚರಿಸಲು ರಾಜ್ಯ ಸರಕಾರ ನಿರ್ಧರಿಸಿದ್ದು, ಕರ್ನಾಟಕದಲ್ಲಿ ಗಾಂಧೀಜಿ ಹೆಜ್ಜೆಗಳು ಕುರಿತ ಅಪರೂಪದ ಛಾಯಾಚಿತ್ರಗಳ ಪ್ರದರ್ಶನ ಹಾಗೂ ರೇಖಾಚಿತ್ರಗಳ ಪ್ರದರ್ಶನ, ಎಲ್‌ಇಡಿ ಬೆಳಕಿನಲ್ಲಿ ಗಾಂಧೀಜಿ ಸಂದೇಶಗಳ ಬಿತ್ತರ, ಗಾಂಧೀಜಿ ವಿಚಾರಧಾರೆಗಳುಳ್ಳ ಸ್ತಬ್ಧ ಚಿತ್ರಗಳ ಪ್ರದರ್ಶನ ಸೇರಿದಂತೆ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ನಡೆದ ಮಹಾತ್ಮಾ ಗಾಂಧೀಜಿ ಜನ್ಮವರ್ಷಾಚರಣೆಯ ಪೂರ್ವಭಾವಿ
ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅ.2ರಂದು ಬೆಳಗ್ಗೆ 9.30ಕ್ಕೆ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಚಾಲನೆ ನೀಡಲಿದ್ದಾರೆ. ಕರ್ನಾಟಕದಲ್ಲಿ ಗಾಂಧೀಜಿ ಹೆಜ್ಜೆಗಳು ಅಪರೂಪದ ಛಾಯಾಚಿತ್ರ ಪ್ರದರ್ಶನಕ್ಕೆ ಜಿಪಂ ಅಧ್ಯಕ್ಷೆ ಸಿ.ಭಾರತಿ ತಿಮ್ಮಾರೆಡ್ಡಿ ಚಾಲನೆ ನೀಡಲಿದ್ದಾರೆ. ಶಾಸಕ ಸೋಮಶೇಖರರೆಡ್ಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕರು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಕಲಾವಿದ ಮಂಜುನಾಥ ಗೋವಿಂದವಾಡ ಅವರ ರೇಖಾಚಿತ್ರಗಳಲ್ಲಿ ಅರಳಿದ ಗಾಂಧೀಜಿ ಚಿತ್ರಗಳ ಪ್ರದರ್ಶನ, ಮಹಾತ್ಮಾ ಗಾಂಧೀಜಿ ಅವರ ಇಡೀ ಜೀವನ-ಸಾಧನೆ ಸಂಗ್ರಹದ ಎರಡು ಕಿರುಹೊತ್ತಿಗೆಗಳನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗುತ್ತದೆ. ಗಾಂಧೀಜಿ ಅವರಿಗೆ ಪ್ರಿಯವಾದ ಭಜನ ಗಾಯನ ಹಾಗೂ ಸಂಪನ್ಮೂಲ ವ್ಯಕ್ತಿಯೊಬ್ಬರು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ತಿಳಿಸಿದರು.
ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮವರ್ಷಾಚರಣೆ ಅಂಗವಾಗಿ ಮಹಾತ್ಮಾಗಾಂಧೀಜಿ ಅವರ ವಿಚಾರಧಾರೆ ಕುರಿತು ಎರಡು ಸ್ತಬ್ಧಚಿತ್ರ ಸಿದ್ದಪಡಿಸಿ ರಾಜ್ಯಾದ್ಯಂತ ಎಲ್ಲ 30 ಜಿಲ್ಲೆಗಳ ಆಯ್ದ ತಾಲೂಕೂಗಳಲ್ಲಿ ‘ಗಾಂಧಿ-150 ಅಭಿಯಾನ’ ಕಾರ್ಯಕ್ರಮ ಏರ್ಪಡಿಸಲಾಗುತ್ತಿದ್ದು, ಆ ಎರಡು ಸ್ತಬ್ಧ ಚಿತ್ರಗಳಲ್ಲಿ ಒಂದು ಸ್ತಬ್ಧಚಿತ್ರ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿಗೆ ಅ.12ರಂದು ಮಧ್ಯಾಹ್ನ 12ಕ್ಕೆ ಮತ್ತು ಹಗರಿಬೊಮ್ಮನಳ್ಳಿಗೆ ಸಂಜೆ 4ಕ್ಕೆ ಬರಲಿದೆ. ಅ.13ರಂದು ಮಧ್ಯಾಹ್ನ 12ಕ್ಕೆ ಬಳ್ಳಾರಿಗೆ ಆಗಮಿಸಲಿದೆ. ಈ ಸಂದರ್ಭದಲ್ಲಿ ಆಯಾ ತಾಲೂಕುಗಳ ತಹಶೀಲ್ದಾರರು ಸ್ತಬ್ಧಚಿತ್ರವನ್ನು ಗಡಿಯಲ್ಲಿ ಅದ್ಧೂರಿಯಾಗಿ ಸ್ವಾಗತಿಸಬೇಕು ಮತ್ತು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳನ್ನು ಆಹ್ವಾನಿಸಬೇಕು ಎಂದು ಸೂಚನೆ ನೀಡಿದರು.
ನಗರದ ಎಲ್ಲ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಹಾಜರಾಗುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ
ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಮಹಾತ್ಮಾ ಗಾಂಧೀಜಿ ಅವರ ಸಂದೇಶಗಳನ್ನು ಮಕ್ಕಳಲ್ಲಿ ಬಿತ್ತುವ ಕೆಲಸ ಮಾಡಿ ಎಂದರು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ. ರಾಮಲಿಂಗಪ್ಪ
ಮಹಾತ್ಮಾಗಾಂಧೀಜಿ: ವಿಶೇಷ ಕಾರ್ಯಕ್ರಮಗಳ ಕುರಿತು ಸಭೆಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಗಾಂಧಿಭವನದ ಕಾರ್ಯದರ್ಶಿ ಟಿ.ಜಿ.ವಿಠ್ಠಲ್ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.