ದೇವದಾಸಿಯರ ಮಾಸಾಶನ ಹೆಚಳಕ್ಕೆ ಆಗ್ರಹ
Team Udayavani, Jan 20, 2021, 6:39 PM IST
ಹರಪನಹಳ್ಳಿ: ದೇವದಾಸಿ ಮಹಿಳೆಯರಿಗೆ ನೀಡುತ್ತಿರುವ ಮಾಶಾಸನವನ್ನು ಮುಂಬರುವ ಬಜೆಟ್‌ನಲ್ಲಿ ತಿಂಗಳಿಗೆ 5000ರೂಗೆ ಹೆಚ್ಚಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದೇವಾದಾಸಿ ಮಹಿಳೆಯರ ವಿಮೋಚನಾ ಸಂಘದ ನೇತೃತ್ವದಲ್ಲಿ ದೇವದಾಸಿ ಮಹಿಳೆಯರು ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.
ದೇವದಾಸಿ ಮಹಿಳಾ ವಿಮೋಚನಾ ಸಂಘದ ರಾಜ್ಯಾಧ್ಯಕ್ಷರಾದ ಟಿ.ವಿ.ರೇಣುಕಮ್ಮ ಮಾತನಾಡಿ, ಕಳೆದ ನಾಲ್ಕು ವರ್ಷಗಳಿಂದ ನಿರಂತರ ಪ್ರತಿಭಟನೆ ನಡೆಸಿ ನಮ್ಮ ಹಕ್ಕೊತ್ತಾಯಗಳನ್ನು ರಾಜ್ಯ ಬಜೆಟ್ ಅಲ್ಲಿ ಸೇರ್ಪಡೆ ಮಾಡುವಂತೆ ಒತ್ತಾಯ ಮಾಡುತ್ತಾ ಬರುತ್ತಿದ್ದೇವೆ. ಆದರೆ ಮಾಸಿಕ ಸಹಾಯಧನ ಪಿಂಚಣಿ ಹಣವನ್ನು ಕನಿಷ್ಠ 5 ಸಾವಿರ ರೂ.ಗಳಿಗೆ ಹೆಚ್ಚಿಸಬೇಕೆಂಬ ಹಕ್ಕೋತ್ತಾಯಕ್ಕೆ ಕೇವಲ ಸುಳ್ಳು ಭರವಸೆ ನೀಡುತ್ತಾ ಬಂದಿರುವುದನ್ನು ಬಿಟ್ಟರೆ ಪರಿಹಾರ ದೊರಕಿಸಿಲ್ಲ. ಕಳೆದ ಮೂರು ಪಕ್ಷಗಳ ನೇತೃತ್ವದ ಸರ್ಕಾರಗಳು ಬೇಡಿಕೆ ಈಡೇರಿಸದೇ ವಂಚಿಸಿವೆ ಎಂದು ದೂರಿದರು. ಕರ್ನಾಟಕ ಪ್ರಾಂತ್ಯ ರೈತ ಸಂಘಟನೆ ತಾಲೂಕು ಅಧ್ಯಕ್ಷ ಹುಲಿಕಟ್ಟಿ ರಾಜಪ್ಪ ಮಾತನಾಡಿದರು.
ಇದನ್ನೂ ಓದಿ:ಶಿಕ್ಷಣದಿಂದ ಸರ್ವಾಂಗೀಣ ವ್ಯಕ್ತಿತ್ವ
ಸಂಘದ ತಾಲೂಕು ಅಧ್ಯಕ್ಷರಾದ ಎಸ್. ರೇಣುಕಾ, ಉಪಾಧ್ಯಕ್ಷರಾದ ಸಣ್ಣ ಕೆಂಚಮ್ಮ, ಹೂವಕ್ಕ, ಎ.ಮುತ್ತಮ್ಮ, ಈರಮ್ಮ, ಕೆಂಚಮ್ಮ, ಎಚ್.ಕಾಳಮ್ಮ, ಮರಿಯಮ್ಮ, ಮಾಳಗಿ ಹಾಲಮ್ಮ ಇತರರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್ ರೈ
MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ
Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.