ಸೇವಾ ಮನೋಭಾವ ಬೆಳೆಸಿಕೊಳ್ಳಿ: ಅಲ್ಲು ಅಶ್ವಥ್‌ನಾಯ್ಡು


Team Udayavani, Jan 21, 2019, 9:56 AM IST

bell-4.jpg

ಕಂಪ್ಲಿ: ಪಟ್ಟಣದಲ್ಲಿ ಕಳೆದ ಹಲವು ವರ್ಷಗಳಿಂದ ಕಮ್ಮವಾರಿ ಸಮುದಾಯದವರು ಜಾತಿ, ಮತ, ಧರ್ಮ, ಪಂಥಗಳ ಬೇಧಭಾವವಗಳಿಲ್ಲದೆ ಎಲ್ಲಾ ವರ್ಗದವರಿಗೂ ಉತ್ತಮ ಸೇವಾ ಮನೋಭಾವನೆಯಿಂದ ಸಂಸ್ಥೆಯ ಮೂಲಕ ಶಿಕ್ಷಣ ನೀಡುತ್ತಿದೆ ಎಂದು ಕಂಪ್ಲಿ ಫಿರ್ಕ ಕಮ್ಮವಾರಿ ಸಮುದಾಯದ ಅಧ್ಯಕ್ಷ ಅಲ್ಲು ಅಶ್ವಥ್‌ನಾಯ್ಡು ತಿಳಿಸಿದರು.

ಪಟ್ಟಣದ ಕುರುಗೋಡು ರಸ್ತೆಯ ಕಮ್ಮವಾರಿ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಸಮುದಾಯದ ವಿಜಯನಗರ ಪ್ರಾಥಮಿಕ, ಪ್ರೌಢಶಾಲೆಯ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಟ್ಟಣದಲ್ಲಿ ಪ್ರತಿಯೊಬ್ಬರಿಗೂ ಉತ್ತಮ ಶಿಕ್ಷಣ ಸಿಗಬೇಕೆನ್ನುವ ನಿಟ್ಟಿನಲ್ಲಿ ನಮ್ಮ ಶಿಕ್ಷಣ ಸಂಸ್ಥೆಯು ಅತ್ಯಂತ ಕಡಿಮೆ ಶುಲ್ಕದಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣದಿಂದ ಹತ್ತನೇ ತರಗತಿಯವರೆಗೂ ಶಿಕ್ಷಣ ನೀಡುತ್ತಿದೆ. ಜೊತೆಗೆ ಹತ್ತನೇ ತರಗತಿಯಲ್ಲಿ ಪ್ರತಿವರ್ಷವೂ ಉತ್ತಮ ಫಲಿತಾಂಶವನ್ನು ಪಡೆಯುತ್ತಿದೆ ಎಂದು ಶಿಕ್ಷಕರ ಶ್ರಮ ಶ್ಲಾಘಿಸಿದರು.

ಶಾಲೆಗೆ 50ಸಾವಿರ ರೂ. ವೆಚ್ಚದಲ್ಲಿ ಕ್ರೀಡಾಸಾಮಗ್ರಿಗಳನ್ನು ನೀಡಿದ ಸಂಘದ ಮಾಜಿ ಅಧ್ಯಕ್ಷರಾದ ಚಿಗರುಪಾಟಿ ರಾಮಬಸವೇಶ್ವರರಾವ್‌ ಅವರ ಸೇವೆ ಸ್ಮರಿಸಿದ ಅವರು, ತಮ್ಮ ಸಂಸ್ಥೆಯ ಶಿಕ್ಷಣ ಸಂಸ್ಥೆಯನ್ನು ಜಿಲ್ಲೆಯಲ್ಲಿಯೇ ಉತ್ತಮ ಶಾಲೆಯನ್ನಾಗಿ ರೂಪಿಸುವ ಉದ್ದೇಶ ಹೊಂದಿದ್ದು, ಇದಕ್ಕಾಗಿ ಶಿಕ್ಷಕರು, ವಿದ್ಯಾರ್ಥಿಗಳು, ಪಾಲಕರು, ಪೋಷಕರು ಸಹಕಾರ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಅನೇಕ ಶಿಕ್ಷಣ ಪ್ರೇಮಿಗಳು, ಗಣ್ಯರು ಶಾಲೆಯ ಸಾಧನೆಯನ್ನು ಕುರಿತು ಮಾತನಾಡಿದರು. ನಂತರ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಹಾಗೂ ಹತ್ತನೇ ತರಗತಿಯಲ್ಲಿ ಅಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ನೀಡಿ ಗೌರವಿಸಿದರು. ಗಣ್ಯರಾದ ಚಿಗರುಪಾಟಿ ರಾಮಬಸವೇಶ್ವರರಾವ್‌, ಪುರಸಭೆ ಅಧ್ಯಕ್ಷ ಎಂ.ಸುಧೀರ, ಸದಸ್ಯರಾದ ಭಟ್ಟಾ ಪ್ರಸಾದ್‌, ಮುಖಂಡರಾದ ಕೆ.ಎಂ. ಹೇಮಯ್ಯಸ್ವಾಮಿ, ಪ್ರಭಾರಿ ಉಪಪ್ರಾಚಾರ್ಯ ಎಸ್‌.ಜಿ. ಚಿತ್ರಗಾರ, ಕೆ.ವಿಜಯಭಾಸ್ಕರರಾವ್‌, ಎಂ.ನಾಗರಾಜ, ಕಾರ್ಯದರ್ಶಿ ನರಶೆಟ್ಟಿ ಕೊಂಡಯ್ಯ, ಪಿ.ರಘುರಾಮಯ್ಯ, ಸಾಯಿಬಾಬ, ಪುರಿಮೆಟ್ಲ ಚಂದ್ರಶೇಖರ್‌, ಡಿ.ನಾಗೇಶ್ವರರಾವ್‌, ಜಿ.ಶಂಕರನಾರಾಯಣ, ವೆಮೂರಿ ಪ್ರಸಾದ್‌ರಾವ್‌, ಕೊನೇರು ರಾಮಕೃಷ್ಣ,ಎನ್‌.ಪುರುಷೋತ್ತಮ ಸೇರಿದಂತೆ ಅನೇಕರು ಭಾಗವಹಿಸಿದ್ದರು. ನಂತರ ಶಾಲೆಯ ವಿದ್ಯಾರ್ಥಿಗಳಿಂದ ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಮೂಹ ನೃತ್ಯಗಳು ಪಾಲಕರ, ಪೋಷಕರ ಗಮನ ಸೆಳೆದವು. ಮುಖ್ಯ ಶಿಕ್ಷಕ ವಿಷ್ಣು ಪ್ರಾಸ್ತಾವಿಕವಾಗಿ ಮಾತನಾಡಿದರು.

ಟಾಪ್ ನ್ಯೂಸ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು

Anmol Buffalo: The price of this Buffalo weighing 1500 kg is Rs 23 crore!

Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!

13-BBK-11

BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

13-

Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

Sanduru-BJP-Cong-Candidates

Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ

Bellary-BYV

Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

kmc

Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

10

Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು

11(1)

Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.