ಸರ್ಕಾರಗಳಿಂದ ತಾರತಮ್ಯ ನೀತಿ: ಡಾ| ವಿಜಯಲಕ್ಷ್ಮೀ
Team Udayavani, Mar 31, 2018, 5:15 PM IST
ಮಾನ್ವಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಂಗನವಾಡಿ ಕೇಂದ್ರಗಳ ಖಾಸಗೀಕರಣ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿರ ಬಗ್ಗೆ ತಾರತಮ್ಯ ನೀತಿ ಅನುಸರಿಸುತ್ತಿವೆ ಎಂದು ಅಂಗನವಾಡಿ ಫೆಡರೇಷನ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ| ಡಿ.ವಿ.ವಿಜಯಲಕ್ಷ್ಮೀ ಆರೋಪಿಸಿದರು.
ಪಟ್ಟಣದ ಟಿಎಪಿಸಿಎಂಎಸ್ ಅವರಣದಲ್ಲಿ ಶುಕ್ರವಾರ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಫೆಡರೇಷನ್ (ಎಐಟಿಯುಸಿ) ಜಿಲ್ಲಾ ಸಮಿತಿಯಿಂದ ಹಮ್ಮಿಕೊಂಡಿದ್ದ ಅಂಗನವಾಡಿ ಕಾರ್ಯಕರ್ತೆಯರ 6ನೇ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ಅಂಗನವಾಡಿ ಕೇಂದ್ರಗಳನ್ನು ಖಾಸಗೀಕರಣ ಮಾಡಲು ಮುಂದಾಗಿರುವ ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಕೈಬಿಡಬೇಕು. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಡ ಮಕ್ಕಳಿಗೆ ಶಿಕ್ಷಣದ ಅರಿವು ಮೂಡಿಸುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳ ಪ್ರಗತಿ ಕಾರ್ಯಗಳಲ್ಲಿ ಕರ್ತವ್ಯ ನಿರ್ವಹಿಸುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಸುಮಾರು 18000 ರೂ. ವೇತನ ನೀಡಬೇಕು ಹಾಗೂ ಸೇವೆ ಕಾಯಂಗೊಳಿಸಬೇಕು ಎಂದು ಒತ್ತಾಯಿಸಿದರು.
ಅಂಗನವಾಡಿ ಕಾರ್ಯಕರ್ತೆಯರಿಗೆ 3000 ರೂ. ನಿವೃತ್ತಿ ವೇತನ ನೀಡಬೇಕು. ಆರೋಗ್ಯ, ವೇತನ ಹೆಚ್ಚಳ, ಭದ್ರತೆಗೆ ಆದ್ಯತೆ ನೀಡಬೇಕು ಮತ್ತು ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಯಲು ಸರ್ಕಾರ ಮುಂದಾಗಬೇಕೆಂದು ಒತ್ತಾಯಿಸಿದರು. ಅಧ್ಯಕ್ಷತೆ ವಹಿಸಿದ್ದ ಅಂಗನವಾಡಿ ಫೆಡರೇಷನ್ ರಾಜ್ಯಾಧ್ಯಕ್ಷ ಎಚ್.ಕೆ.ರಾಮಚಂದ್ರಪ್ಪ ಅಂಗನಸಿರಿ ಕೈಪಿಡಿ ಬಿಡುಗಡೆ ಮಾಡಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ಶಿವಣ್ಣ, ರಾಷ್ಟ್ರೀಯ ಮಹಿಳಾ ಒಕ್ಕೂಟದ ಅಧ್ಯಕ್ಷೆ ಎ.ಜ್ಯೋತಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಜಯಮ್ಮ, ಅಂ.ಫೆ. ಜಿಲ್ಲಾಧ್ಯಕ್ಷ ಡಿ.ಎಚ್. ಕಂಬಳಿ ಮಾತನಾಡಿದರು. ರಾಷ್ಟ್ರ ಪ್ರಶಸ್ತಿ ವಿಜೇತೆ ಕವಿತಾ ಮಿಶ್ರಾ, ಎಐಟಿಯುಸಿ ಜಿಲ್ಲಾ ಪದಾಧಿಕಾರಿಗಳಾದ ದೇವೇಂದ್ರಪ್ಪ ಪತ್ತಾರ, ಭಾಷುಮಿಯ್ನಾ, ಎಸ್.ಎಂ.ಶಫಿ, ಶ್ರೀಶೈಲರೆಡ್ಡಿ, ಶಾಂತಾ ಸೀಕಲ್, ಸಂಗಯ್ಯಸ್ವಾಮಿ ಚಿಂಚರಕಿ, ತಾಲೂಕು ಅಧ್ಯಕ್ಷೆ ಕಾಳಮ್ಮ, ಗಿರಿಜಮ್ಮ, ಶಿವಮ್ಮ, ಅಮರಮ್ಮ ಪಾಟೀಲ, ಶಾವಮ್ಮ, ಕೆ.ಮೀರ್, ವೀರಬಸಮ್ಮ, ಆದಿಲಕ್ಷ್ಮೀ, ಸವಿತಾ, ಯಂಕಮ್ಮ ನಾಯಕ, ದಾಕ್ಷಾಯಣಿ ಪೋತ್ನಾಳ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.