ನಿಗದಿತ ದರದಲ್ಲಿ ರೈತರಿಗೆ ರಸಗೊಬ್ಬರ ವಿತರಿಸಿ
Team Udayavani, Aug 23, 2020, 2:48 PM IST
ಸಾಂದರ್ಭಿಕ ಚಿತ್ರ
ಕುರುಗೋಡು: ರೈತರಿಗೆ ನಿಗದಿತ ಬೆಲೆಯಲ್ಲಿ ರಸಗೊಬ್ಬರ ಮಾರಾಟ ಮಾಡಬೇಕು. ಒಂದು ವೇಳೆ ಲೋಪದೋಷ ಕಂಡು ಬಂದಲ್ಲಿ ಕ್ರಮ ಜರುಗಿಸಬೇಕಾಗುತ್ತದೆ ಎಂದು ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ಎಚ್ಚರಿಸಿದರು.
ಪಟ್ಟಣದ ಬೀಜ ಗೊಬ್ಬರ ಕೀಟನಾಶಕ ಹಾಗೂ ರಸಗೊಬ್ಬರ ಮಾರಾಟಗಾರರ ಖಾಸಗಿ ಅಂಗಡಿಹಾಗೂ ಸಂಗ್ರಹ ಗೋದಾಮುಗಳಿಗೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ವಾರಕೊಮ್ಮೆ ಖರೀದಿ ಹಾಗೂ ಮಾರಾಟ ಮಾಡಿದ ದಾಸ್ತಾನು ಇರುವ ವಿವರ ದಾಖಲೆಗಳನ್ನು ಕಡ್ಡಾಯವಾಗಿ ಕೃಷಿ ಇಲಾಖೆಗೆ ನೀಡಬೇಕು. ಅದರ ಆಧಾರದ ಮೇಲೆ ತಾಲೂಕಿನ ರೈತರಿಗೆ ಅಗತ್ಯವಿರುವ ಪ್ರಮಾಣದಲ್ಲಿ ರಸಗೊಬ್ಬರ ದೊರೆಯುವಂತೆ ಇಲಾಖೆ ಕ್ರಮ ಕೈಗೊಳ್ಳಲಿದೆ. ರಸಗೊಬ್ಬರ ಮಾರಾಟ ಮಾಡುವವರು ಕಡ್ಡಾಯವಾಗಿ ರೈತರ ಆಧಾರ್ ಕಾರ್ಡ್, ಬೆರಳಚ್ಚು, ಭೂಮಿ ವಿವರ ಸೇರಿದಂತೆ ರಸಗೊಬ್ಬರ ಪ್ರಮಾಣ ಸೇರಿದಂತೆ ಅಗತ್ಯ ದಾಖಲೆಯನ್ನು ಪಿ.ವಿ.ಎಸ್. ಮಷಿನ್‌ನಲ್ಲಿ ಪಡೆದುಕೊಂಡು ನಂತರವೇ ಮಾರಾಟ ಮಾಡಬೇಕು. ಉತ್ತಮ ಮಳೆ ಹಿನ್ನೆಲೆಯಲ್ಲಿ ಬೇಡಿಕೆ ಇರುವುದರಿಂದ ಮಾರಾಟಗಾರರು ತಾಲೂಕಿನರೈತರಿಗೆ ಸಮರ್ಪಕವಾಗಿ ರಸಗೊಬ್ಬರ ನಿಗದಿತ ದರದಲ್ಲಿ ಮಾರಾಟ ಮಾಡಬೇಕು ಎಂದರು.
ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದ ಮಾರಾಟಗಾರರ ಅಂಗಡಿ ಹಾಗೂ ಗೋದಾಮುಗಳಿಗೆ ಭೇಟಿ ನೀಡಿ ಪರೀಶಿಲಿಸಿದರು. ಜಿಲ್ಲಾ ಉಪ ಕೃಷಿ ನಿರ್ದೇಶಕ ಚಂದ್ರಶೇಖರ್, ಕೃಷಿ ಅಧಿಕಾರಿ ದೇವರಾಜ್, ರೈತ ಸಂಪರ್ಕ ಕೇಂದ್ರದ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
Ballari; ಮೃ*ತ ಬಾಣಂತಿಯರ ಮನೆಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.