ಬೆಳೆದ ರೈತರಿಗೇ ಖಾರವಾಯ್ತು ಮೆಣಸಿನಕಾಯಿ!


Team Udayavani, Sep 28, 2020, 6:43 PM IST

ಬೆಳೆದ ರೈತರಿಗೇ ಖಾರವಾಯ್ತು ಮೆಣಸಿನಕಾಯಿ!

ಕಂಪ್ಲಿ: ಜಮೀನಿನಲ್ಲಿ ಕೂಲಿ ಕಾರ್ಮಿಕರು ಹಸಿಮೆಣಸಿನಕಾಯಿ ಕೀಳುತ್ತಿರುವುದು.

ಕಂಪ್ಲಿ: ಕಳೆದ ವರ್ಷ ಉತ್ತಮ ಬೆಲೆ ಸಿಕ್ಕ ಹಿನ್ನೆಲೆಯಲ್ಲಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ವಿವಿಧ ತಳಿಯ ಮೆಣಸಿನಕಾಯಿ ಬೆಳೆ ಬೆಳೆದಿದ್ದು ಮಾರುಕಟ್ಟೆಯಲ್ಲಿ ದರ ಕುಸಿತದಿಂದಾಗಿ ಕಂಗಾಲಾಗಿದ್ದಾರೆ.

ತಾಲೂಕಿನ ದೇವಸಮುದ್ರ, ಮೆಟ್ರಿ, ದೇವಲಾಪುರ, ಹಂಪಾದೇವನಹಳ್ಳಿ, ಸುಗ್ಗೇನಹಳ್ಳಿ, ಕಣ್ವಿ ತಿಮ್ಮಲಾಪುರ, ನೆಲ್ಲುಡಿ, ಎಮ್ಮಿಗನೂರು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ರೈತರು ಬ್ಯಾಡಗಿ, ತ್ರಿಮೂರ್ತಿ, ಗುಂಟೂರು ಮೆಣಸಿನಕಾಯಿ ತಳಿಗಳನ್ನು ನಾಟಿ ಮಾಡಿದ್ದು ಈಗಾಗಲೇ ಹಸಿ ಮೆಣಸಿನಕಾಯಿಗಳನ್ನು ಬಿಡಿಸುತ್ತಿದ್ದಾರೆ. ಆದರೆ ಆರಂಭದಲ್ಲಿ ಕೆಜಿ ಒಂದಕ್ಕೆ 25ರಿಂದ 27 ರೂಗಳಿದ್ದ ಬೆಲೆ ಎರಡನೇ ಸಲ ಕಾಯಿಗಳನ್ನು ಬಿಡಿಸುವ ಸಮಯಕ್ಕೆ ಕೆಜಿಗೆ 12ರಿಂದ 13 ರೂಗಳಿಗೆ ಇಳಿಕೆಯಾಗಿದ್ದು ಮೆಣಸಿನಕಾಯಿ ಬಿಡಿಸಿದ ಕೂಲಿಯೂ ಬರುತ್ತಿಲ್ಲವೆಂದು ರೈತರು ದೂರುತ್ತಿದ್ದಾರೆ.

ದೇವಸಮುದ್ರ ಗ್ರಾಮದ ಪ್ರಗತಿಪರ ರೈತ ಜಿ. ಮಲ್ಲಿಗೌಡ ಅವರು ತಮ್ಮ ಎರಡು ಎಕರೆಯಲ್ಲಿ, ಗಣೇಶ್‌ 2 ಎಕರೆಯಲ್ಲಿ ಹಾಗೂ ಇತರೆ ರೈತರು ಸುಮಾರು 50ರಿಂದ 60 ಎಕರೆ ಪ್ರದೇಶದಲ್ಲಿ ತ್ರಿಮೂರ್ತಿ ತಳಿಯ ಮೆಣಸಿನಕಾಯಿ ಬೆಳೆ ಬೆಳೆದಿದ್ದಾರೆ. ಈಗಾಗಲೇ ಎಕರೆಗೆ 15ರಿಂದ 20 ಸಾವಿರ ರೂಗಳನ್ನು ವ್ಯಯಿಸಿದ್ದು ಎರಡನೇ ಸಲ ಹಸಿ ಮೆಣಸಿನಕಾಯಿಗಳನ್ನು ಬಿಡಿಸಿದ್ದು ಎಕರೆಗೆ 30ರಿಂದ 35 ಕ್ವಿಂಟಲ್‌ ಫಸಲು ಬಂದಿದೆ. ಆದರೆ ಮಾರುಕಟ್ಟೆಯಲ್ಲಿ ಇವುಗಳನ್ನು ಕೇಳುವವರೇ ಇಲ್ಲ. 12ರಿಂದ 13 ರೂಗಳಿಗೆ ಕೆಜಿಯಂತೆ ಕೇಳುತ್ತಿದ್ದಾರೆ. ಈ ಬೆಲೆಗೆ ಮಾರಿದರೆ ಕೂಲಿ ಕಾರ್ಮಿಕರ ಕೂಲಿಯೂ ದಕ್ಕುವುದಿಲ್ಲವೆಂದು ತಮ್ಮ ನೋವನ್ನು ತೋಡಿಕೊಂಡರು.

ಹಸಿ ಮೆಣಸಿನಕಾಯಿ ಬಹುತೇಕ ಚಿಲ್ಲಿ ಸಾಸ್‌ ತಯಾರಿಸಲು ನಮ್ಮ ಜಮೀನಿಗೆ ಬಂದು ಖರೀದಿ ಮಾಡುತ್ತಿದ್ದರು. ಆದರೆ ನಾವೇ ಮಾರುಕಟ್ಟೆಗೆ ಒಯ್ದರೂ ಕೇಳುವವರೂ ಇಲ್ಲದಂತಾಗಿದೆ,ವಿಪರ್ಯಾಸವೆಂದರೆ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಒಂದು ಕೆಜಿ ಮೆಣಸಿನಕಾಯಿಯನ್ನು 30ರಿಂದ 40 ರೂಗಳಿಗೆ ಮಾರಾಟ ಮಾಡುತ್ತಿದ್ದಾರೆ. ರೈತರಿಗೆ ಮಾತ್ರ ಈ ಬೆಲೆ ದಕ್ಕುತ್ತಿಲ್ಲವೆಂದು ದೂರಿದರು.

ಉತ್ತಮ ಬೆಲೆಯ ನಿರೀಕ್ಷೆಯಲ್ಲಿ ಎರಡು ಎಕರೆಯಲ್ಲಿ ತ್ರಿಮೂರ್ತಿ ತಳಿಯ ಮೆಣಸಿನಕಾಯಿ ಬೆಳೆದಿದ್ದೇನೆ. ಈಗಾಗಲೇ 15ರಿಂದ 20 ಸಾವಿರ ವ್ಯಯಿಸಿದ್ದು, ಎರಡು ಸಲ ಹಸಿ ಮೆಣಸಿನಕಾಯಿ ಬಿಡಿಸಿದ್ದು ಸುಮಾರು 90 ಕ್ವಿಂಟಲ್‌ ಫಸಲು ಬಂದಿದೆ. ಆದರೆ ಸೂಕ್ತ ಬೆಲೆ ಸಿಗುತ್ತಿಲ್ಲ. ಜಿ. ಮಲ್ಲಿಗೌಡ, ರೈತ, ದೇವಸಮುದ್ರ

ಕಳೆದ ವರ್ಷ ಹಸಿ ಹಾಗೂ ಒಣ ಮೆಣಸಿನ ಕಾಯಿಗೆ ಉತ್ತಮ ಬೆಲೆ ದೊರೆತಿದ್ದರಿಂದ ತಾಲೂಕಿನಲ್ಲಿ ಬಹುತೇಕ ರೈತರು ಇದೇಬೆಳೆಯನ್ನು ಬೆಳೆದಿರುವುದರಿಂದ ಮತ್ತು ಉತ್ತಮ ಇಳುವರಿಯೂ ಇರುವುದರ ಜೊತೆಗೆ ಮಾರುಕಟ್ಟೆಯಲ್ಲಿ ಅಧಿಕ ಪ್ರಮಾಣದಲ್ಲಿ ಮೆಣಸಿನಕಾಯಿ ಬರುತ್ತಿರುವುದರಿಂದ ಬೆಲೆಯಲ್ಲಿ ಕುಸಿತವಾಗಿದೆ. ಎಂ.ಎಂ.ಶಿವಕುಮಾರ್‌, ಸಹಾಯಕ ತೋಟಗಾರಿಕಾ ಅಧಿಕಾರಿ

 

-ಜಿ. ಚಂದ್ರಶೇಖರಗೌಡ

ಟಾಪ್ ನ್ಯೂಸ್

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

1-ani

Mangaluru; ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ : ಮೂವರ ಬಂಧನ

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಇದು ವಿಶ್ವದ ಅತಿ ಎತ್ತರದ ಏಕಶಿಲಾ ಬೆಟ್ಟ… Online ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ

ಇದು ವಿಶ್ವದ ಅತಿ ಎತ್ತರದ ಏಕಶಿಲಾ ಬೆಟ್ಟ… Online ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ

Satish Jaraki

Congress; ಸುರ್ಜೇವಾಲ ವಿರುದ್ಧ ಸಚಿವರಿಂದಲೇ ದೂರು?: ಸತೀಶ್ ಜಾರಕಿಹೊಳಿ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary

Bellary: ಐದು ವರ್ಷದ ಮಗುವಿನ ಅತ್ಯಾಚಾರ ನಡೆಸಿದ್ದ ಆರೋಪಿಗೆ ಗುಂಡೇಟು

ಮೀಟರ್ ಬಡ್ಡಿ ದಂಧೆಗೆ ಮನನೊಂದು ವಿಎಸ್‌ಕೆ ವಿವಿ ಅಟೆಂಡರ್ ಆತ್ಮಹತ್ಯೆ… ಪೊಲೀಸರಿಂದ ತನಿಖೆ

ಮೀಟರ್ ಬಡ್ಡಿ ದಂಧೆಗೆ ಮನನೊಂದು ವಿಎಸ್‌ಕೆ ವಿವಿ ಅಟೆಂಡರ್ ಆತ್ಮಹತ್ಯೆ… ಪೊಲೀಸರಿಂದ ತನಿಖೆ

5-balalri

ಆಕಳುಗಳ ಕೆಚ್ಚಲು ಕೊಯ್ದ ಪ್ರಕರಣ; ಶಾಸಕ,ಉಸ್ತುವಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

Makar Sankranti: ಹಂಪಿಗೆ ಹರಿದು ಬಂದ ಭಕ್ತ ಜನ ಸಾಗರ!

Makar Sankranti: ಹಂಪಿಗೆ ಹರಿದು ಬಂದ ಭಕ್ತ ಜನ ಸಾಗರ!

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-wl

ಅಖಿಲ ಭಾರತ ಅಂತರ್‌ ವಿ.ವಿ.ವೇಟ್‌ಲಿಫ್ಟಿಂಗ್‌:ಮಂಗಳೂರು ವಿವಿ ರನ್ನರ್ ಅಪ್‌

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

1-ani

Mangaluru; ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ : ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.