ಪೊಲೀಸರ ದೌರ್ಜನ್ಯ ಖಂಡಿಸಿ ಪ್ರತಿಭಟನೆ
Team Udayavani, Mar 10, 2021, 7:48 PM IST
ಬಳ್ಳಾರಿ: ರಾಜ್ಯದಲ್ಲಿ ಪೊಲೀಸರಿಂದ ದಲಿತರ ಮೇಲೆ ನಡೆದ ದೌರ್ಜನ್ಯ ಮತ್ತು ರಾಜ್ಯ ದಲಿತ ಸಂಘರ್ಷ ಸಮಿತಿ ಮುಖಂಡರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಿ, ರೌಡಿಶೀಟರ್ ಮಾಡಿ ಜೈಲಿಗೆ ಕಳುಹಿಸಿರುವ ಪೊಲೀಸರ ಕ್ರಮವನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ (ಡಿಜಿ ಸಾಗರ್)ಯ ಮುಖಂಡರು, ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ಎಲ್ಲ ಸುಳ್ಳು ಕೇಸ್‌ಗಳನ್ನು ಕೂಡಲೇ ವಾಪಸ್ ಪಡೆಯಬೇಕು. ಜಿಲ್ಲೆಯಲ್ಲಿ ಬರುವ ಎಲ್ಲ ಬುದ್ಧ, ಬಸವ, ಡಾ|ಬಿ.ಆರ್.ಅಂಬೇಡ್ಕರ್ ಪ್ರತಿಮೆಗಳಿಗೆ ಹಾಗೂ ಗಣ್ಯರ ಪ್ರತಿಮೆಗಳಿಗೆ ಭದ್ರತೆ ಒದಗಿಸಬೇಕು. ಜಾತಿವಾದಿ, ಕೋಮುವಾದಿ, ಡಾ| ಬಿ.ಆರ್.ಅಂಬೇಡ್ಕರ್ ವಿರೋಧಿ ,ಹಿಂದಿನ ಇಂಡಿ ವಿಭಾಗದ ಹಾಗೂ ಈಗಿನ ಧಾರವಾಡ ಗ್ರಾಮೀಣ ವಿಭಾಗದ ಡಿವೈಎಸ್ಪಿ ಅವರನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ದಲಿತ ಸಮಿತಿ ಜಿಲ್ಲಾ ಮುಖಂಡ, ಹೋರಾಟಗಾರ ವೈ.ಸಿ. ಮಯೂರ ಅವರ ಮೇಲೆ ಹಾಗೂ ಮತ್ತೂಬ್ಬ ಹೋರಾಟಗಾರ ಜಿತೇಂದ್ರ ಕಾಂಬಳೆ ಅವರ ಮೇಲೆ ಸುಳ್ಳು ಕೇಸ್‌ಗಳನ್ನು ದಾಖಲಿಸಲಾಗಿದ್ದು ಕೂಡಲೇ ಈ ಎಲ್ಲ ಸುಳ್ಳು ಕೇಸ್‌ಗಳನ್ನು ತೆಗೆದು ಹಾಕಬೇಕು. ರದ್ದು ಮಾಡಿರುವ ಮಯೂರ ಅವರ ಶಸ್ತ್ರಾಸ್ತ್ರ ಪರವಾನಗಿ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಸೇರಿದಂತೆ ಇನ್ನಿತರೆ ಬೇಡಿಕೆಗಳನ್ನು ಈಡೇರಿಸಬೇಕು ಎಂದವರು ಆಗ್ರಹಿಸಿದರು.
ರಾಜ್ಯ ಸಂಘಟನಾ ಸಂಚಾಲಕ ಎ.ಮಾನಯ್ಯ, ಜಿಲ್ಲಾ ಸಂಚಾಲಕ ಎಚ್.ಸಿದ್ದೇಶ್ ನೇತೃತ್ವದಲ್ಲಿ ಆರಂಭವಾದ ಪ್ರತಿಭಟನಾ ಮೆರವಣಿಗೆ ಗಡಗಿ ಚನ್ನಪ್ಪವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿತು. ಬಳಿಕ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Special Interview: ಪ್ರತ್ಯೇಕ ನಾಡಧ್ವಜಕ್ಕಾಗಿ ಕೇಂದ್ರಕ್ಕೆ ಮತ್ತೂಮ್ಮೆ ಪತ್ರ: ತಂಗಡಗಿ
Kinya: ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಜೋಡಿ ಬಂಧನ
Udupi: ಗೀತಾರ್ಥ ಚಿಂತನೆ- 81: ಮೇಲ್ನೋಟದಲ್ಲಿ ಕಳಕಳಿ, ಒಳನೋಟದಲ್ಲಿ ರಾಜ್ಯಲೋಭ!
Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್ ಬಿಸಿ!
New Policy: ಜಾನಪದ ಕ್ರೀಡೆ ಕಂಬಳಕ್ಕೆ ಅಂತಿಮ ನಿಯಮಾವಳಿ ಸಿದ್ಧ
MUST WATCH
ಹೊಸ ಸೇರ್ಪಡೆ
Lucknow: ಹೊಟೇಲ್ ಬಳಿಕ 7 ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ
Jammu: ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಸೋದರ, ಬಿಜೆಪಿ ಶಾಸಕ ದೇವೇಂದ್ರ ಸಿಂಗ್ ರಾಣಾ ನಿಧನ
New Delhi: ಹಬ್ಬದ ಋತು; ದೇಶದಲ್ಲಿ 4.5 ಲಕ್ಷ ವಾಹನಗಳ ದಾಖಲೆ ಮಾರಾಟ!
Karnataka Rajyotsava: ಮನೆ ತುಂಬಾ 5 ಲಕ್ಷ ಕನ್ನಡ ಪುಸ್ತಕ: ಹರಿಹರಪ್ರಿಯರ ಪ್ರಪಂಚ!
Ranchi: ಹೇಮಂತ್ ಸೊರೇನ್ ವಯಸ್ಸು 5 ವರ್ಷದಲ್ಲಿ 7 ವರ್ಷ ಹೆಚ್ಚಳ!; ಬಿಜೆಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.