ಅಂಗನವಾಡಿ ಕೇಂದ್ರದಲ್ಲಿ ಎಸ್ಸಿ, ಎಸ್ಟಿ ಅಂಗನವಾಡಿ ಮಕ್ಕಳಿಗೆ ಮೊಟ್ಟೆ ವಿತರಣೆ
Team Udayavani, Jan 22, 2022, 12:22 PM IST
ಕುರುಗೋಡು: ಮಕ್ಕಳಲ್ಲಿ ಹೆಚ್ಚುತ್ತಿರುವ ಅಪೌಷ್ಠಿಕತೆಯನ್ನು ನಿವಾರಿಸುವ ಸದುದ್ದೇಶದಿಂದ ರಾಜ್ಯ ಸರ್ಕಾರ ಅಂಗನವಾಡಿ ಕೇಂದ್ರಗಳಲ್ಲಿ ಮೊಟ್ಟೆ ವಿತರಿಸಲು ಮುಂದಾಗಿದೆ ಆದ್ದರಿಂದ 6 ತಿಂಗಳಿಂದ 3 ವರ್ಷದೊಳಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಂಗನವಾಡಿ ಮಕ್ಕಳಿಗೆ ಎರಡು ತಿಂಗಳದ ತಲಾ ಒಬ್ಬ ಮಕ್ಕಳಿಗೆ 24 ಮೊಟ್ಟೆ ಗಳನ್ನು ಸಮೀಪದ ರಾಮಚಂದ್ರಪುರ ಕ್ಯಾಂಪ್ 15ನೇ ಅಂಗನವಾಡಿ ಕೇಂದ್ರದಲ್ಲಿ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕಿ ಅಂಬಮ್ಮ ಮಾತನಾಡಿ, ಮಕ್ಕಳಲ್ಲಿ ಅಪೌಷ್ಠಿಕತೆ ಹೆಚ್ಚಾಗುತ್ತಿದೆ. ಮಕ್ಕಳ ಬೆಳವಣಿಗೆ ನಿರೀಕ್ಷಿತ ಪ್ರಮಾಣದಲ್ಲಿ ಆಗುತ್ತಿಲ್ಲ. ಅಂಗವೈಕಲ್ಯತೆ, ಉಸಿರಾಟದ ತೊಂದರೆ, ಉಬ್ಬಸ, ಹೃದಯ ಸಂಬಂಧಿಕಾಯಿಲೆಗಳು ಬರುತ್ತಿರುವುದರಿಂದ ಮೊ ಟ್ಟೆ ನೀಡುವಂತೆ ಸಲಹೆ ನೀಡಲಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಅಂಗನವಾಡಿಗಳಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮಕ್ಕಳಿಗೆ ಮೊಟ್ಟೆ ವಿತರಿಸಲು ಮುಂದಾಗಿದೆ ಎಂದರು.
ಅಲ್ಲದೆ ಸರ್ಕಾರವು ಅಂಗನವಾಡಿ ಕೇಂದ್ರಗಳ ಮೂಲಕ ಕೋಳಿಮೊಟ್ಟೆ ವಿತರಿಸುವ ಕಾರ್ಯ ಹಲವೆಡೆ ಸ್ಥಗಿತಗೊಂಡಿತ್ತು. ಲಾಕ್‍ಡೌನ್‍ನಿಂದಾಗಿ ಬಡ ಕುಟುಂಬಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಅಪೌಷ್ಟಿಕತೆಗೆ ಈಡಾಗುವ ಆತಂಕವೂ ಎದುರಾಗಿತ್ತು. ಇದನ್ನು ಅರಿತ ಸರಕಾರ 2021 ಡಿಸಂಬರ್ ಮತ್ತು 2022 ಜನವರಿ ತಿಂಗಳ ಒಟ್ಟು 42 ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಕ್ಕಳಿಗೆ ತಲಾ ಒಬ್ಬ ಮಕ್ಕಳಿಗೆ 24 ಮೊಟ್ಟೆ ವಿತರಣೆ ಮಾಡಲಾಗಿದೆ ಎಂದರು.
ಸರಕಾರ ನೀಡಿರುವ ಈ ಒಂದು ಯೋಜನೆ ಯಿಂದ ಕಡಿಮೆ ತೂಕದ ಮಕ್ಕಳ ಜನನ ಪ್ರಮಾಣ ತಗ್ಗಿಸುವುದು, 6 ವರ್ಷದೊಳಗಿನ ಮಕ್ಕಳಲ್ಲಿ ಆರೋಗ್ಯ ಮತ್ತು ಪೌಷ್ಟಿಕ ಮಟ್ಟ ಹೆಚ್ಚಿಸುವುದು, ಗರ್ಭಿಣಿಯರು, ಬಾಣಂತಿಯರಲ್ಲಿ ಅಪೌಷ್ಟಿಕತೆ ನಿರ್ಮೂಲನೆ ಮಾಡುವ ಉದ್ದೇಶದಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಅಂಗನವಾಡಿ ಕೇಂದ್ರಗಳ ಮೂಲಕ ಮೊಟ್ಟೆ, ಹಾಲಿನ ಪುಡಿ ಮೊದಲಾದ ಆಹಾರ ವಿತರಿಸಲಾಗುತ್ತಿದೆ ಎಂದು ಹೇಳಿದರು.
ಆದರೆ, 2 ತಿಂಗಳುಗಳಿಂದ ಹಲವೆಡೆ ಮಕ್ಕಳಿಗೆ ಮೊಟ್ಟೆ ನೀಡುವುದು ಸ್ಥಗಿತ ವಾಗಿತ್ತು, ಇದರಿಂದ ಬಡ ಕುಟುಂಬಗಳು ಕಷ್ಟದಲ್ಲಿ ಸಿಲುಕುವುದನ್ನು ಕಂಡ ಸರಕಾರ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡುವ ಉದ್ದೇಶ ಕೈಗೊಂಡಿದೆ ಇದನ್ನು ಸರಿಯಾದ ರೀತಿಯಲ್ಲಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಾಲ ವಿಕಾಶ ಸಮಿತಿಯ ಹಿರಿಯ ಮುಖಂಡರಾದ ಎ. ಉಮಾ ಮಹೇಶ್ವರ್, ಗ್ರಾಪಂ ಸದಸ್ಯರಾದ ಲಲಿತಮ್ಮ ಜಡೆಪ್ಪ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.