ಕೂಲಿ ಕಾರ್ಮಿಕರ ಸುರಕ್ಷತೆಗೆ ಒತ್ತು ನೀಡಿ

ಬೇಸಿಗೆ ಸಮೀಪಿಸುತ್ತಿದ್ದು ಬೋರ್‌ವೆಲ್‌ ವ್ಯವಸ್ಥೆ ಮಾಡಿಕೊಡಬೇಕೆಂದು ಗ್ರಾಮಸ್ಥರು ಪ್ರಸ್ತಾಪಿಸಿದರು.

Team Udayavani, Mar 15, 2022, 5:55 PM IST

ಕೂಲಿ ಕಾರ್ಮಿಕರ ಸುರಕ್ಷತೆಗೆ ಒತ್ತು ನೀಡಿ

ಕುರುಗೋಡು: ಉದ್ಯೋಗ ಖಾತ್ರಿಯಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ಸುರಕ್ಷಿತ ವ್ಯವಸ್ಥೆಗೆ ಮತ್ತು ಅಪಘಾತ ಸಂಭವಿಸಿದರೆ ಸರಕಾರದಿಂದ ಸೂಕ್ತ ಪರಿಹಾರ ನೀಡಲು 22 ಶಾಸಕರಿಂದ ಒಪ್ಪಿಗೆ ಪತ್ರ ನೀಡಬೇಕು ಎಂದು ಕೂಲಿ ಕಾರ್ಮಿಕರು ಅಧಿಕಾರಿಗಳಿಗೆ ಒತ್ತಾಯಿಸಿದರು.

ಸಮೀಪದ ಏಳುಬೆಂಚೆ ಗ್ರಾಮದಲ್ಲಿ ನಡೆದ ಗ್ರಾಮಸಭೆಯಲ್ಲಿ ಸದಸ್ಯರು ಮಾತನಾಡಿ, ಈ ಹಿಂದೆ ಉದ್ಯೋಗ ಖಾತ್ರಿಯಲ್ಲಿ ಕೆಲಸ ಮಾಡುವ ವೇಳೆ ಮತ್ತು ಗ್ರಾಮ ತೊರೆದು ಬೇರೆ ಕಡೆ ಕೆಲಸ ಮಾಡಲು ತೆರಳಿದ ಸಂದರ್ಭದಲ್ಲಿ ಅಪಘಾತಕ್ಕೀಡಾಗಿದ್ದ ಕಾರ್ಮಿಕರಿಗೆ ಸರಕಾರದಿಂದ ನೆರವು ಹಾಗೂ ಸುರಕ್ಷಿತ ವ್ಯವಸ್ಥೆ ಕಲ್ಪಿಸಿಲ್ಲ. ಆದ್ದರಿಂದ ಅದನ್ನು ಜಾರಿ ಮಾಡಬೇಕು ಎಂದು ಆಗ್ರಹಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪಿಡಿಒ ಮಂಜುನಾಥ್‌, ಈಗಾಗಲೇ ಸರಕಾರದ ಮಟ್ಟದಲ್ಲಿ ಚರ್ಚೆ ನಡೆದಿದ್ದು, ಕೂಲಿ ಕಾರ್ಮಿಕರಿಗೆ ಇನ್ಸೂರೆನ್ಸ್‌ ವ್ಯವಸ್ಥೆ ಮಾಡಲಾಗಿದೆ. ಇದರಲ್ಲಿ 13 ರೂ ಖಾತೆ, 330 ರೂ ಖಾತೆ ಇದ್ದು ಒಟ್ಟು 2 ಲಕ್ಷ ವೆಚ್ಚದ ಇನ್ಶೂರೆನ್ಸ್‌ ಒದಗಿಸಲಾಗಿದೆ.ಇದನ್ನು ಪ್ರತಿಯೊಬ್ಬ ಕೂಲಿ ಕಾರ್ಮಿಕರು ಮಾಡಿಸಬೇಕಾಗಿದೆ ಎಂದರು.

ನಂತರ ಗ್ರಾಮಸ್ಥರು ಮಾತನಾಡಿ, ಏಳುಬೆಂಚಿ ಗ್ರಾಮದ ಎದುರು ಬಸವಣ್ಣನಿಂದ ಚನ್ನಯ್ಯನ ಅಂಗಡಿವರೆಗೆ ಚರಂಡಿ ದುರಸ್ತಿಯಲ್ಲಿದ್ದು, ಅದನ್ನು ಆದಷ್ಟು ಬೇಗ ದುರಸ್ತಿ ಮಾಡಬೇಕು. ಇದರಿಂದ ನಿತ್ಯ ಜನರಿಗೆ ತೊಂದರೆ ಆಗುತ್ತಿದೆ ಎಂದರು. ಗ್ರಾಪಂ ಪಿಡಿಒ ಮತ್ತು ಅಧ್ಯಕ್ಷ ಮಾತನಾಡಿ, ಸ್ಥಳವನ್ನು ಪರಿಶೀಲನೆ ಮಾಡಿ ಎಸ್ಟಿಮೇಟ್‌ ಮಾಡಿ ಮುಂದಿನ ದಿನಗಳಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು. ತಿಮ್ಮಲಾಪುರ ಗ್ರಾಮದಲ್ಲಿ ಕುಡಿಯುವ ನೀರಿನ
ಬೋರ್‌ವೆಲ್‌ಗ‌ಳು ನನೆಗುದಿಗೆ ಬಿದ್ದುಹೋಗಿವೆ.

ಬೇಸಿಗೆ ಸಮೀಪಿಸುತ್ತಿದ್ದು ಬೋರ್‌ವೆಲ್‌ ವ್ಯವಸ್ಥೆ ಮಾಡಿಕೊಡಬೇಕೆಂದು ಗ್ರಾಮಸ್ಥರು ಪ್ರಸ್ತಾಪಿಸಿದರು. ಈಗಾಗಲೇ ತಿಮ್ಮಲಾಪುರ ಗ್ರಾಮಕ್ಕೆ 4 ಬೋರ್‌ ವೆಲ್‌ ಮಂಜೂರು ಮಾಡಲಾಗಿದೆ. ಅದಕ್ಕೆ ಬೇಕಾದ ಸಾಮಗ್ರಿಗಳು ಬಂದಿದ್ದು ಶೀಘ್ರವೇ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು. ಗ್ರಾಪಂಗೆ ತ್ಯಾಜ್ಯ ವಿಲೇವಾರಿ ವಾಹನಗಳು ಬಂದು ತಿಂಗಳುಗಳೇ ಗತಿಸಿದರೂ ಗ್ರಾಮದಲ್ಲಿ ವಾಹನಗಳು ತ್ಯಾಜ್ಯ ವಿಲೇವಾರಿ ಮಾಡಲು ಮುಂದಾಗದೆ ಎಲ್ಲೆಂದರಲ್ಲಿ ಬಿದ್ದು ಗಬ್ಬು ನಾರುತ್ತಿವೆ ಎಂದು ಆರೋಪಿಸಿದರು.

2021-22ನೇ ಸಾಲಿನಲ್ಲಿ ವಸತಿರಹಿತ 40 ಪಲಾನುಭವಿಗಳಿಗೆ ಆಶ್ರಮ ಮನೆಗಳನ್ನು ಆಯ್ಕೆ ಮಾಡಲಾಯಿತು. ಇದರಲ್ಲಿ ಅಂಬೇಡ್ಕರ್‌ ಯೋಜನೆಯಡಿಯಲ್ಲಿ 10 ಹಾಗೂ ಬಸವ ವಸತಿ ಯೋಜನೆಯಡಿಯಲ್ಲಿ 30 ಮನೆಗಳನ್ನು ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಒ, ಸರ್ವ ಗ್ರಾಪಂ ಸದಸ್ಯರು, ಗ್ರಾಮದ ಮುಖಂಡರು, ಸಂಘ ಸಂಸ್ಥೆಯ ಮುಖಂಡರು ಸಭೆಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

dw

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

8

Kasaragod: ಟ್ಯಾಂಕರ್‌ ಲಾರಿಯಿಂದ ರಸ್ತೆಗೆ ಹರಿದ ಎಣ್ಣೆ

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

crime

Siddapura: ಬೈಕಿಗೆ ಕಾರು ಡಿಕ್ಕಿ; ಸವಾರರು ಗಂಭೀರ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.