ನೌಕರರು ಜನ ಗುರುತಿಸುವ ಕೆಲಸ ಮಾಡಿ
Team Udayavani, Jul 31, 2017, 2:41 PM IST
ಕಂಪ್ಲಿ: ಸರ್ಕಾರಿ ನೌಕರರಿಗೆ ವರ್ಗಾವಣೆ ಎನ್ನುವುದು ಸಾಮಾನ್ಯವಾಗಿದ್ದು, ನೌಕರರು, ಅಧಿಕಾರಿಗಳು ಎಲ್ಲಿಯೇ ಹೋದರೂ ಅಲ್ಲಿಯ ಜನತೆ ಗುರುತಿಸುವಂತ ಕಾರ್ಯ ಮಾಡಬೇಕು ಎಂದು ಹಂಪಿ ಉಪವಿಭಾಗದ ಡಿವೈಎಸ್‌ಪಿ ಸಿ.ಆರ್. ಹೊನವಾಡ್ಕರ್ ಹೇಳಿದರು.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ಆಯೋಜಿಸಿದ್ದ ವರ್ಗಾವಣೆಗೊಂದ ಕಂಪ್ಲಿ ವೃತ್ತ ನಿರೀಕ್ಷರಿಗೆ ಬೀಳ್ಕೊಡುಗೆ ಮತ್ತು ಕಂಪ್ಲಿ ವೃತ್ತಕ್ಕೆ ಆಗಮಿಸಿದ ನೂತನ ವಲಯ ನಿರೀಕ್ಷಕರಿಗೆ ಸ್ವಾಗತ ಸಮಾರಂಭದ ಅಧ್ಯಕ್ಷ ವಹಿಸಿ ಅವರು ಮಾತನಾಡಿದರು. ಕಂಪ್ಲಿ ವೃತ್ತದಲ್ಲಿ ಕಳೆದ ಒಂದು ವರ್ಷದಲ್ಲಿ ವೃತ್ತ ನಿರೀಕ್ಷಕರಾಗಿ ಕಾರ್ಯನಿರ್ವಹಿಸದ ಸಿದ್ದೇಶ್ವರ ಕೃಷ್ಣಾಪುರ ಉತ್ತಮವಾಗಿ ಕಾರ್ಯನಿರ್ವಹಿಸಿ ಎಲ್ಲರ ಮನಗೆದ್ದಿದ್ದಾರೆ. ವಲಯದಲ್ಲಿ ಸಮರ್ಪಕವಾಗಿ ಶಾಂತಿ ಸುವ್ಯವಸ್ಥೆ ಕಾಪಾಡಿದ್ದಾರೆ ಎದರು.
ಪುರಸಭೆ ಅಧ್ಯಕ್ಷ ಎಂ.ಸುಧೀರ್ ಮಾತನಾಡಿ, ಪುರಸಭೆ ಸದಸ್ಯರು ಹಾಗೂ ಕಂಪ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಿ.ಆರ್. ಹನುಮಂತ ಹಾಗೂ ಇತರರು ವೃತ್ತ ನಿರೀಕ್ಷಕರ ಕಾರ್ಯಕ್ಷಮತೆಯನ್ನು ಶ್ಲಾಘಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ವೃತ್ತ ನಿರೀಕ್ಷಕ ಸಿದ್ದೇಶ್ವರ ಕೃಷ್ಣಾಪುರ, ಕಂಪ್ಲಿ ವಲಯದಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರ ಸಹಕಾರದಿಂದ ಉತ್ತಮವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಯಿತು. ಪ್ರತಿಯೊಬ್ಬರೂ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಸಹಕಾರ ನೀಡಬೇಕು ಎಂದರು.
ಕಂಪ್ಲಿ ವಲಯಕ್ಕೆ ವೃತ್ತ ನಿರೀಕ್ಷಕರಾಗಿ ಆಗಮಿಸಿರುವ ಎಚ್. ದೊಡ್ಡಣ್ಣ ಮಾತನಾಡಿ, ಸಾರ್ವಜನಿಕರ ಸಹಕಾರ ಇಲ್ಲದಿದ್ದರೆ ಕಾನೂನು ಸುವ್ಯವಸ್ಥೆ ಕಾಪಾಡುವುದು ಕಷ್ಟಸಾಧ್ಯ. ಶಾಂತಿಸುವ್ಯವಸ್ಥೆ ಕಾಪಾಡಲು ಪ್ರತಿಯೊಬ್ಬರೂ ಸಹಕರಿಸಬೇಕು ಎಂದರು. ಕಮಲಾಪುರ ಪಿಎಸ್‌ಐ ಬೇರಿ ಭೀಮನಗೌಡ ಮಾತನಾಡಿ, ಪೊಲೀಸ್ ಇಲಾಖೆಯಲ್ಲಿ ಒಂದೇ ವರ್ಷಕ್ಕೆ ವರ್ಗಾವಣೆಗೆ ಅರ್ಹರಾಗುತ್ತಾರೆ. ಆದರೆ, ಈ ವರ್ಗಾವಣೆ ನೀತಿಯನ್ನು ಬದಲಾಯಿಸಬೇಕು. ಒಂದು ಠಾಣೆಯಿಂದ ಮತ್ತೂಂದು ಠಾಣೆಗೆ ಬಂದಾಗ ಅಲ್ಲಿಯ ಪರಿಸ್ಥಿತಿ ಅರಿಯಲು ಸಮಯಬೇಕಾಗುತ್ತದೆ. ಇನ್ನು ಉತ್ತಮವಾಗಿ
ಕಾರ್ಯನಿರ್ವಹಿಸಬೇಕೆನ್ನುವಾಗಲೇ ಒಂದು ವರ್ಷವಾಗಿರುತ್ತದೆ.ಹಾಗೂ ವರ್ಗಾವಣೆ ಮಾಡುತ್ತಾರೆ. ಇದರಿಂದ ಕುಟುಂಬದ ಪರಿಸ್ಥಿತಿ ಏನಾಗಬೇಕು ಎಂದು ಪ್ರಶ್ನಿಸಿದರು. ಪುರಸಭೆ ಮುಖ್ಯಾಧಿಕಾರಿ ಎಂ. ವಿಜಯಲಕ್ಷ್ಮೀ, ಪಿಎಸ್‌ಐ ಬಿ. ನಿರಂಜನ್ ಮಾತನಾಡಿದರು.
ನಂತರ ಕಂಪ್ಲಿ ಮತ್ತು ಕಮಲಾಪುರ ಠಾಣೆಯ ಸಿಬ್ಬಂದಿಗಳ ಪರವಾಗಿ ವರ್ಗಾವಣೆಗೊಂಡ ಸಿಪಿಐ ಸಿದ್ದೇಶ್ವರ ಕೃಷ್ಣಾಪುರ ಅವರನ್ನು ಸನ್ಮಾನಿಸಲಾಯಿತು. ನೂತನವಾಗಿ ಕಂಪ್ಲಿಗೆ ಆಗಮಿಸಿರುವ ಸಿಪಿಐ ಎಚ್ .ದೊಡ್ಡಣ್ಣನವರನ್ನು ಸ್ವಾಗತಿಸಲಾಯಿತು. ಎಎಸ್ ಐಗಳಾದ ಎಜೆ ಚೆನ್ನವೀರಣ್ಣ, ಹಗರಪ್ಪ, ರಫಿಕ್, ಕಂಪ್ಲಿ, ಕಮಲಾಪುರ ಠಾಣೆಗಳ ಸಿಬ್ಬಂದಿಗಳು, ಪಟ್ಟಣದ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ವಿವಿಧ ಗ್ರಾಮಗಳ ಮುಖಂಡರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.