ಬೆಳೆ ಸಮೀಕ್ಷೆ ಆ್ಯಪ್ನಲ್ಲಿ ವಿವರ ದಾಖಲಿಸಿ
Team Udayavani, Aug 21, 2020, 7:34 PM IST
ಬಳ್ಳಾರಿ: ಈಗಾಗಲೇ ಬಳ್ಳಾರಿ ತಾಲೂಕಿನಲ್ಲಿ ಬೆಳೆ ಸಮೀಕ್ಷೆ ಕಾರ್ಯ ಶುರುವಾಗಿದೆ. ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರವನ್ನು ಸ್ವತಃ ತಾವೇ ದಾಖಲಿಸಲು ಅವಕಾಶ ಕಲ್ಪಿಸಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಪಂ ಅಧ್ಯಕ್ಷೆ ಲೀಲಾವತಿ ಕೋರಿದರು.
ನಗರದ ತಾಪಂ ಸಭಾಂಗಣದಲ್ಲಿ ಗುರವಾರ ನಡೆದ 17ನೇ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೆಳೆ ಸಮೀಕ್ಷೆ ಆ್ಯಪ್ನಲ್ಲಿ ಚಿತ್ರಸಹಿತ ಬೆಳೆವಿವರ ನಮೂದಿಸುವುದರಿಂದ ಬೆಳೆವಿಮೆ ಪಾವತಿ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳಿಗೆ ಇದು ಅನುಕೂಲವಾಗಲಿದೆ. ರೈತರು ಇದೇ ಆ. 24ರೊಳಗಾಗಿ ವಿವರ ದಾಖಲಿಸಬೇಕು ಎಂದು ಕೋರಿದ ಅವರು ಕೃಷಿ ಇಲಾಖೆ ಅಧಿಕಾರಿಗಳು ಈ ವಿಷಯದಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿ ಕೆಲಸ ಮಾಡಬೇಕು ಎಂದು ಸೂಚಿಸಿದರು.
ಕೋವಿಡ್ ವೈರಸ್ ಹರಡುವುದನ್ನು ತಡೆಯಲು ಲಾಕ್ಡೌನ್ ವಿಧಿ ಸಿದ್ದ ಹಿನ್ನೆಲೆ ದುಡಿಯಲು ಹೋದ ಕೂಲಿ ಕಾರ್ಮಿಕರು ಮರಳಿ ಗ್ರಾಮಗಳಿಗೆ ಬಂದಿದ್ದಾರೆ. ಅಂಥವರಿಗೆ ಅಂಗನವಾಡಿ ಕೇಂದ್ರಗಳಿಂದ ಆಹಾರ ವಿತರಣೆ ಮಾಡಲಾಗುತ್ತಿದೆ ಮತ್ತು ವಾರಕ್ಕೊಮ್ಮೆ ಅವರಿಗೆ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ ಹಾಗೂ 29 ಹೊಸ ಅಂಗನವಾಡಿ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುತ್ತಿದೆ ಎಂದರು.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ ಅಡಿಯಲ್ಲಿ ತಾಲೂಕಿನಲ್ಲಿ 10 ಎಕೋ ಪಾರ್ಕ್ ಗಳ ಸ್ಥಾಪನೆ ಮಾಡಲಾಗುತ್ತಿದೆ. ಸ್ವಚ್ಛ ಭಾರತ್ ಮಿಷನ್ ಅಡಿ ತಾಲೂಕಿನ 11 ಗ್ರಾಪಂಗಳಲ್ಲಿ ಒಣಕಸ ಹಾಗೂ ಹಸಿಕಸವನ್ನು ಸಂಗ್ರಹಣೆ ಮಾಡಲಾಗುತ್ತಿದೆ ಎಂದು ವಿವರಿಸಿದ ಅವರು ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳು ಸಾಗಿವೆ ಎಂದರು. ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆಗಳು ನಡೆದವು. ಸಭೆಯಲ್ಲಿ ತಾಪಂ ಉಪಾಧ್ಯಕ್ಷೆ ಪುಷ್ಪಾವತಿ ಹಾಗೂ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಂ.ಬಸಪ್ಪ, ತಾಪಂ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.