ಬಳ್ಳಾರಿಯಲ್ಲಿ 4ಕ್ಕೆ ಶಿಕ್ಷಕರ ಅರ್ಹತಾ ಪರೀಕ್ಷೆ
Team Udayavani, Sep 29, 2020, 5:05 PM IST
ಸಾಂದರ್ಭಿಕ ಚಿತ್ರ
ಬಳ್ಳಾರಿ: ಶಿಕ್ಷಕರ ಅರ್ಹತಾ ಪರೀಕ್ಷೆ-2019ರ (ಟಿಇಟಿ) ಪರೀಕ್ಷೆಯ ನಗರದ 20 ಪರೀಕ್ಷಾ ಕೇಂದ್ರಗಳಲ್ಲಿ ಅ. 4ರಂದುನಡೆಯಲಿದ್ದು, ಪರೀಕ್ಷೆಗೆ ಸಕಲ ಸಿದ್ಧತೆಗಳನ್ನು ಶಿಕ್ಷಣ ಇಲಾಖೆ ಮಾಡಿಕೊಂಡಿದೆ. ಅಂದು ನಡೆಯುವ ಮೊದಲ ಅಧಿ ವೇಶನದಲ್ಲಿ 2956 ಮತ್ತು ಎರಡನೇ ಅಧಿವೇಶನದಲ್ಲಿ 6713 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ರಾಮಪ್ಪ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ನಗರದ 20 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ಪರೀಕ್ಷೆಗೆ ಸಕಲ ಪೂರ್ವ ಸಿದ್ದತೆ ಮಾಡಿಕೊಳ್ಳಲಾಗಿದೆ. ಅ. 4ರಂದು ಮೊದಲ ಅಧಿವೇಶನವು ಬೆಳಗ್ಗೆ 9.30 ರಿಂದ 12 ಗಂಟೆಯವರೆಗೆ ಮತ್ತು ಎರಡನೇ ಅಧಿ ವೇಶನವು ಮಧ್ಯಾಹ್ನ 2.00 ರಿಂದ 4.30 ರವರೆಗೆ ನಡೆಯಲಿದೆ. ಪರೀಕ್ಷೆಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು ಅರ್ಜಿ ಸಂಖ್ಯೆ ಮತ್ತು ಜನ್ಮದಿನಾಂಕ ನಮೂದಿಸುವುದರ ಮೂಲಕ ಪ್ರವೇಶ ಪತ್ರಗಳ ಡೌನ್ ಲೋಡ್ ಮಾಡಿಕೊಳ್ಳಬಹುದು. ಕೋವಿಡ್-19 ಎಸ್ ಒಪಿ ನಿಯಮಗಳನ್ನು ಕಡ್ಡಾಯವಾಗಿ ಅನುಸರಿಸಲು ಎಲ್ಲ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರಿಗೆ ನಿರ್ದೇಶನ ನೀಡಲಾಗಿದೆ ಎಂದವರು ತಿಳಿಸಿದ್ದಾರೆ.
ಎಲ್ಲ ಪರೀಕ್ಷಾ ಕೇಂದ್ರದ ಸಿಬ್ಬಂದಿಯು ಸಮಯಕ್ಕೆ ಸರಿಯಾಗಿ ಕಡ್ಡಾಯವಾಗಿ ಹಾಜರಾಗಬೇಕು. ಆರೋಗ್ಯದ ಸುರಕ್ಷತೆ ದೃಷ್ಟಿಯಿಂದ ಸಾಮಾಜಿಕ ಅಂತರ ಕಾಪಾಡಿಕೊಂಡು ಮುಂಜಾಗ್ರತ ಕ್ರಮಗಳನ್ನು ಅನುಸರಿಸಲು ಸಲಹೆ ನೀಡಲಾಗಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಮತ್ತು ಸಿಬ್ಬಂದಿಗಳ ಉಷ್ಣಾಂಶ ಪರೀಕ್ಷೆಗಾಗಿ ಥರ್ಮೋಮೀಟರ್‌ಗಳನ್ನು ಬಳಕೆ ಮಾಡಿಕೊಂಡು ಆರೋಗ್ಯ ಸುರಕ್ಷತೆ ಕಾಪಾಡಿಕೊಳ್ಳಲು ಕ್ರಮ ವಹಿಸಿದೆ. ಪ್ರತಿ ಕೊಠಡಿಯಲ್ಲಿ 20 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಅದರಲ್ಲಿ ಪ್ರತಿ ಬೆಂಚ್‌ಗೆ ಒಂದು ಮೀಟರ್ ದೈಹಿಕ ಅಂತರ ಕಾಪಾಡಿಕೊಂಡು ಇಬ್ಬರು ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಆಸನ ವ್ಯವಸ್ಥೆ ಸಜ್ಜುಗೊಳಿಸಲಾಗಿದೆ. ಪ್ರತಿ ಅಭ್ಯರ್ಥಿ ಮುಖಗವಸನ್ನು ಧರಿಸಿ ಪರೀಕ್ಷೆಗೆ ಹಾಜರಾಗಬೇಕು ಮತ್ತು ತಮ್ಮದೇ ಆದ ನೀರಿನ ಬಾಟಲ್ ತರಲು ಅವಕಾಶ ನೀಡಿದೆ. ಅಭ್ಯರ್ಥಿ ಕೋವಿಡ್-19 ಪಾಸಿಟಿವ್ ಎಂದು ಗುರುತಿಸಲ್ಪಟ್ಟು, ಅಂತಹ ಅಭ್ಯರ್ಥಿಯು ಪರೀಕ್ಷೆ ಬರೆಯಲು ಇಚ್ಚಿಸಿದಲ್ಲಿ ಅಂತಹ ಅಭ್ಯರ್ಥಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿ ಅವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕೋವಿಡ್-19 ಪಾಸಿಟಿವ್ ಬಂದ ಅಭ್ಯರ್ಥಿಗಳು ಪರೀಕ್ಷಾ ಅವ ಧಿಗೆ ಎರಡು ದಿನಗಳ ಮುಂಚಿತವಾಗಿ ಕೋವಿಡ್-19 ಪಾಸಿಟಿವ್ ಇರುವ ಬಗ್ಗೆ ಜಿಲ್ಲಾ ನೋಡಲ್ ಅಧಿಕಾರಿಗಳಾದ, ಎ.ಕೆ.ಸತ್ಯನಾರಾಯಣ ಮೊ.ನಂ: 9740738762 ಕರೆ ಮಾಡಿ ಗಮನಕ್ಕೆ ತರಬೇಕು ಎಂದು ಅವರು ತಿಳಿಸಿದ್ದಾರೆ.
ಉಪಕರಣಗಳು ನಿಷೇಧ: ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಮೊಬೈಲ್ ಫೋನ್, ಬ್ಲೂಟೂತ್ ಡಿವೈಸ್, ಪೇಜರ್, ವೈರ್‌ಲೆಸ್, ಕ್ಯಾಲ್ಕುಲೇಟರ್, ಇತರೆ ಮೊದಲಾದ ಎಲೆಕ್ಟ್ರಾನಿಕ್ ಉಪಕರಣಗಳು, ಸ್ಲೈಡ್ ರೂಲುಗಳು, ಮಾರ್ಕರ್‌ಗಳು, ಲಾಗ್ ಟೇಬಲ್‌ಗಳು, ವೈಟ್ಯಿಫ್ಲೊಡ್ ಗಳು, ಬ್ಲೇಡು, ಎರೇಸರ್ ಇವುಗಳನ್ನು ಪರೀಕ್ಷಾ ಕೇಂದ್ರದ ಆವರಣದೊಳಗೆ ತರುವುದನ್ನು ನಿಷೇ ಧಿಸಲಾಗಿದೆ. ಕೇಂದ್ರದ ಸುತ್ತಮುತ್ತ ಪ್ರದೇಶವನ್ನು ಸೆಕ್ಷನ್ 144 ಜಾರಿ ಮತ್ತು ಜೆರಾಕ್ಸ್, ಸೈಬರ್‌ಕೆಫೆ, ಕಂಪ್ಯೂಟರ್ ಸೆಂಟರ್‌ಗಳನ್ನು ಮುಚ್ಚಿಸಲು ಜಿಲ್ಲಾಧಿಕಾರಿಗಳು ಆದೇಶವನ್ನು ಹೊರಡಿಸಿದ್ದಾರೆ. ಪೊಲೀಸ್ ಇಲಾಖೆಯ ವತಿಯಿಂದ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತು ವ್ಯವಸ್ಥೆ ಕಲ್ಪಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಹೆಲ್ತ್ ಕೌಂಟರ್‌ಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಯವರು ಮತ್ತು ಆಶಾ ಕಾರ್ಯಕರ್ತರು ಪರೀಕ್ಷಾ ಪ್ರಾರಂಭದ ಮುನ್ನ ಆರೋಗ್ಯ ತಪಾಸಣೆ ಕೈಗೊಂಡು ಪ್ರತಿ ಅಭ್ಯರ್ಥಿಯು ಕೈಗಳನ್ನು ಸ್ಯಾನಿಟೈಸ್ ಮಾಡಿಕೊಳ್ಳಲಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.