ಪ್ರಜ್ವಲ್ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ
Team Udayavani, May 8, 2024, 5:05 PM IST
■ ಉದಯವಾಣಿ ಸಮಾಚಾರ
ಬಳ್ಳಾರಿ: ಪ್ರಜ್ವಲ್ ರೇವಣ್ಣ ಪ್ರಕರಣ ಕಾನೂನು ಹಂತದಲ್ಲಿ ತನಿಖೆ ನಡೆಯುತ್ತಿದ್ದರೂ ಬಿಜೆಪಿಯವರು ಅನಾವಶ್ಯಕವಾಗಿ ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ತಿರುಗೇಟು ನೀಡಿದರು.
ಲೋಕಸಭೆ ಚುನಾವಣೆ ನಿಮಿತ್ತ ನಗರದ ನೆಹರೂ ಕಾಲೋನಿಯ ವುಂಕಿ ಮರಿಸಿದ್ದಮ್ಮ ಶಾಲೆ ಮತಗಟ್ಟೆಯಲ್ಲಿ ಸರತಿ ಸಾಲಲ್ಲಿ ನಿಂತು ಕುಟುಂಬ ಸಮೇತ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರಜ್ವಲ್ ರೇವಣ್ಣ ಪ್ರಕರಣ ಬಿಜೆಪಿ ಜೆಡಿಎಸ್ ಮೈತ್ರಿ ಮೇಲೆ ಪರಿಣಾಮ ಬೀರಿದೆ. ಅದಕ್ಕಾಗಿ ಬಿಜೆಪಿಯವರು ಕಾಂಗ್ರೆಸ್ ಮೇಲೆ ವಿನಾಕಾರಣ ಆರೋಪ
ಮಾಡುತ್ತಿದೆ. ಮುಖ್ಯವಾಗಿ ಕರ್ನಾಟಕದ ಚುನಾವಣೆ ಮೇಲೆ ಪ್ರಜ್ವಲ್ ಪ್ರಕರಣ ಪ್ರಭಾವ ಬೀರಿದೆ.
ಬಿಜೆಪಿಯವರು ಸೋಲಿನ ಹತಾಶೆಯಿಂದ ಮಾತನಾಡುತ್ತಿದ್ದಾರೆ. ಮಾಡಿದ ಕೃತ್ಯವನ್ನು ಬಿಜೆಪಿಯವರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಪ್ರಜ್ವಲ್ ಪ್ರಕರಣದ ಹಿಂದೆ ಯಾವ ಷಡ್ಯಂತರವೂ ಇಲ್ಲ. ಪಾಪ ಮಾಡಿದವರು ಅನುಭವಿಸುತ್ತಾರೆ ಎಂದು ತಿಳಿಸಿದರು.
ಇದೇ ವೇಳೆ ಮಹಾನಾಯಕ ಅಂದರೆ ಯಾರು? ಎಂದು ಪ್ರಶ್ನಿಸಿದ ಸಚಿವ ಬಿ.ನಾಗೇಂದ್ರ, ನಾವು ಸಹ ಕಾತುರದಿಂದ ಕಾಯುತ್ತಿದ್ದೇವೆ. ಬಿಜೆಪಿಯಮಹಾನಾಯಕ ಅಥವಾ ಜೆಡಿಎಸ್ ಪಕ್ಷದ ಮಹಾನಾಯಕನಾ? ಈ ಪ್ರಕರಣದಲ್ಲಿ ಯಾರು
ಭಾಗಿಯಾಗಿಲ್ಲ ಎಂದು ಪ್ರಜ್ವಲ್ ಕಾರು ಚಾಲಕ ಹೇಳಿಕೆ ನೀಡಿದ್ದಾರೆ. ಇದು ನನ್ನ ವೈಯಕ್ತಿಕ ಅಂತ ಚಾಲಕ ಈಗಾಗಲೇ ಸಷ್ಟಪಡಿಸಿದ್ದಾರೆ. ಆದರೂ, ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ.
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಹ ಹೇಳಿಕೆ ಕೊಡುವುದು ಸರಿಯಲ್ಲ. ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಲೆ ಆರೋಪ ಮಾಡುವುದು ಸರಿಯಲ್ಲ. ಡಿ.ಕೆ. ಶಿವಕುಮಾರ್ ಯಾವುದೇ ತಪ್ಪು ಮಾಡಿಲ್ಲ. ಅವರ ಪಾತ್ರವೂ ಇಲ್ಲ. ಪ್ರಕರಣವನ್ನು ಮಾಧ್ಯಮದವರೇ ಬೆಳಕಿಗೆ ತಂದಿದ್ದಾರೆ. ಪ್ರಕರಣದಿಂದ ಬಿಜೆಪಿಗೆ ಚುನಾವಣೆಗೆ ಹಿನ್ನಡೆಯಾಗುವುದು ಖಚಿತ ಎಂದು ಭವಿಷ್ಯ ನುಡಿದ ಸಚಿವ ನಾಗೇಂದ್ರ, ಚುನಾವಣೆಯಲ್ಲಿ ಧರ್ಮಕ್ಕೆ ಜಯಸಿಗಲಿದೆ. ಕಾಂಗ್ರೆಸ್ ಧರ್ಮದ ಪರವಾಗಿದೆ ಎಂದು ತಿಳಿಸಿದರು.
ಬಿರುಬಿಸಿಲು ಲೆಕ್ಕಿಸದೆ ಜನರು ಮತದಾನ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ. ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ನಾಗೇಂದ್ರ, ಮೊದಲ ಹಂತಕ್ಕಿಂದ ಎರಡನೇ ಹಂತದ ಚುನಾವಣೆ ಉತ್ತಮವಾಗಿದೆ. ಗ್ಯಾರೆಂಟಿಗಳಿಂದ ಮಹಿಳೆಯರು ಹೆಚ್ಚು ಮತದಾನ ಮಾಡುತ್ತಿದ್ದಾರೆ. ಬಳ್ಳಾರಿ ಕ್ಷೇತ್ರದಲ್ಲಿ ಶೇ.70ಕ್ಕಿಂತ ಹೆಚ್ಚು ಮತದಾನ ಆಗುವ ವಿಶ್ವಾಸವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.