ಕಾರ್ಖಾನೆ ಪುನರಾರಂಭ: ಕಬ್ಬು ಬೆಳೆದ ರೈತರಲ್ಲಿ ಮಂದಹಾಸ


Team Udayavani, Jan 4, 2019, 11:08 AM IST

bell-2.jpg

ಸಿರುಗುಪ್ಪ: ಈ ಭಾಗದ ಸಕ್ಕರೆ ಕಾರ್ಖಾನೆಯನ್ನು ನಂಬಿ ಸುಮಾರು 7 ಸಾವಿರ ಎಕರೆ ಪ್ರದೇಶದಲ್ಲಿ 2.5 ಲಕ್ಷ ಟನ್‌ ಕಬ್ಬು ಬೆಳೆದ ರೈತರಿಗೆ ಅನುಕೂಲವಾಗಲಿದೆ ಎಂದು ಶಾಸಕ ಎಂ.ಎಸ್‌. ಸೋಮಲಿಂಗಪ್ಪ ತಿಳಿಸಿದರು.

ತಾಲೂಕಿನ ದೇಶನೂರು ಗ್ರಾಮದ ಎನ್‌ಎಸ್‌ ಎಲ್‌ ಸಕ್ಕರೆ ಕಾರ್ಖಾನೆ ಪುನರ್‌ ಪ್ರಾರಂಭಿಸಲು ಗುರುವಾರ ಆಯೋಜಿಸಿದ್ದ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಕ್ಕರೆ ಕಾರ್ಖಾನೆ ಪ್ರಾರಂಭಿಸಲು ಸಾಧ್ಯವಿಲ್ಲ ಎಂದು ಕಾರ್ಖಾನೆ ಆಡಳಿತ ಮಂಡಳಿಯವರು ಹೇಳಿದಾಗ ಇಲ್ಲಿನ ಕಬ್ಬು ಬೆಳೆದ ರೈತರಲ್ಲಿ ಆತಂಕ ಉಂಟಾಗಿ, ಕಾರ್ಖಾನೆಯನ್ನು ಪುನಃ ಪ್ರಾರಂಭಿಸುವಂತೆ ರೈತರು ಅನೇಕ ಹೋರಾಟ ಮಾಡಬೇಕಾಯಿತು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ| ರಾಮ್‌ ಪ್ರಸಾದ್‌ ಮನೋಹರ್‌ ಅವರಿಗೆ ರೈತರ ಬಗ್ಗೆ ಇದ್ದ ಕಾಳಜಿ ಹಾಗೂ ರೈತರ ಹೋರಾಟದ ಫಲವಾಗಿ ಕಾರ್ಖಾನೆ ಆಡಳಿತ ಮಂಡಳಿಯವರು ರೈತರ ಬಗ್ಗೆ ಕಾಳಜಿ ವಹಿಸಿ ಕಾರ್ಖಾನೆಯಲ್ಲಿ ಕಬ್ಬು ನುರಿಸಲು ಮುಂದಾಗಿರುವುದು ತಾಲೂಕಿನ ರೈತರಲ್ಲಿ ಖುಷಿ ತಂದಿದೆ. ಅಲ್ಲದೇ ಅಲ್ಪ ಸ್ವಲ್ಪ ಲಾಭ ಪಡೆಯುವ ಭರವಸೆಯಲ್ಲಿ ರೈತರಿದ್ದಾರೆ ಎಂದು ತಿಳಿಸಿದರು.

ರೈತ ಮುಖಂಡ ಅಶೋಕ್‌ ಭೂಪಾಲ್‌ ಮಾತನಾಡಿ, ಕಳೆದ ನವೆಂಬರ್‌ ತಿಂಗಳಲ್ಲಿ ಕಬ್ಬು ಕಟಾವಿಗೆ ಬಂದಿದ್ದು, ಎರಡು ತಿಂಗಳಾದರೂ ಕಬ್ಬು ಕಟಾವು ಮಾಡಲಾಗದೆ ನಮಗೆ ಸಂಕಷ್ಟ ಎದುರಾಗಿತ್ತು. ಶಾಸಕರು, ರೈತರು, ರೈತ ಮುಖಂಡರು ಸೇರಿದಂತೆ ಜಿಲ್ಲಾಧಿಕಾರಿ ಡಾ| ರಾಮ್‌ಪ್ರಸಾದ್‌ ಮನೋಹರ್‌ ಅವರೊಂದಿಗೆ ಸಮಾಲೋಚಿಸಿದಾಗ ಜಿಲ್ಲಾಧಿಕಾರಿಗಳು ರೈತರ ಕಷ್ಟಗಳನ್ನು ಮನಗಂಡು ಕಾರ್ಖಾನೆ ಮಾಲೀಕರೊಂದಿಗೆ ಚರ್ಚಿಸಿ ಕೆಲವು ಷರತ್ತುಗಳೊಂದಿಗೆ ಇತರೆ ಕಾರ್ಖಾನೆಗಳಿಗೆ ಕಬ್ಬು ರವಾನಿಸಲು ಪ್ರಯತ್ನಿಸಿದ್ದರು. ಇದರಿಂದ ಕಾರ್ಖಾನೆ ಮಾಲೀಕರು ಪುನಃ ಕಾರ್ಖಾನೆ ಕಬ್ಬು ನುರಿಸಲು ಚಾಲನೆ ನೀಡಿರುವುದರಿಂದ ರೈತರಲ್ಲಿ ಸಂತಸ ತಂದಿದೆ ಎಂದರು.
 
ಕಾರ್ಖಾನೆಯ ಸಿಒಒ (ಚೀಫ್‌ ಆಪರೇಟಿಂಗ್‌ ಆಫಿಸರ್‌) ಪ್ರಸಾದ್‌ ಮಾತನಾಡಿ, ಕಾರ್ಖಾನೆಯನ್ನು ಜ.5ರಂದು ಕಬ್ಬು ನುರಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ನಮಗೆ ಎಷ್ಟೇ ನಷ್ಟವಾದರೂ ರೈತರ ಅನುಕೂಲಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಕಾರ್ಖಾನೆ ಪ್ರಾರಂಭಿಸುತ್ತಿದ್ದೇವೆ. ರೈತರು ಪ್ರತಿದಿನ 2,500 ಟನ್‌ ಕಬ್ಬು ಕಾರ್ಖಾನೆಗೆ ರವಾನಿಸಿದರೆ ನಮಗೆ ತುಂಬಾ ಅನುಕೂಲವಾಗುತ್ತದೆ. ಇಲ್ಲದಿದ್ದರೆ ನಮಗೆ ಹೆಚ್ಚಿನ ನಷ್ಟವಾಗಲಿದೆ. ಆದ್ದರಿಂದ ರೈತರು ನಮಗೆ ಅನುಕೂಲಕ್ಕೆ ತಕ್ಕಂತೆ ಕಬ್ಬು ರವಾನಿಸಬೇಕೆಂದು ಮನವಿ ಮಾಡಿದರು.

ಕಾರ್ಖಾನೆಯ ಜನರಲ್‌ ಮ್ಯಾನೇಜರ್‌ ರೂಪೇಶ್‌ಕುಮಾರ್‌, ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ್‌, ಗ್ರೇಡ್‌-2 ತಹಶೀಲ್ದಾರ್‌ ಬಿ.ಮಲ್ಲೇಶಪ್ಪ, ಸಹಾಯಕ ಕೃಷಿ ನಿರ್ದೇಶಕ ಪಾಲಾಕ್ಷಿಗೌಡ, ಮಾಜಿ ಶಾಸಕ ಟಿ.ಎಂ. ಚಂದ್ರಶೇಖರಯ್ಯಸ್ವಾಮಿ, ಕಬ್ಬು ಬೆಳೆಗಾರರ ಹೋರಾಟ ಸಮಿತಿ ಅಧ್ಯಕ್ಷ ಗೌಸ್‌ಸಾಬ್‌, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಚೊಕ್ಕ ಬಸವನಗೌಡ, ರೈತ ಮುಖಂಡರಾದ ಹನುಮನಗೌಡ, ಮೊಹನ್‌ಕುಮಾರ್‌, ಪಾಲಾಕ್ಷಿರೆಡ್ಡಿ, ಬೇವೂರು ಬಸವನಗೌಡ, ಗೋಪಾಲರೆಡ್ಡಿ ಹಾಗೂ ರೈತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Hubli; Pig farmer assault case; Four arrested including sister’s husband

Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕ್ಮಸಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6

Karkala: ಲೈಸೆನ್ಸ್‌ ಇಲ್ಲದ ವ್ಯಾಪಾರಕ್ಕೆ ಕಡಿವಾಣ

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

5

Kundapura: ಜಿಲ್ಲೆಯ ರೈತರಿಗೆ ಭಾರೀ ಆಸಕ್ತಿ!

18-liver-cancer

Liver cancer: ಯಕೃತ್ತಿನ ಕ್ಯಾನ್ಸರ್‌

4

Mulki: ವಾಹನ ನಿಲುಗಡೆ ನಿಷೇದವಿದ್ದರೂ ಪಾರ್ಕಿಂಗ್‌; ಸುಗಮ ಸಂಚಾರಕ್ಕೆ ಅಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.