ಕುರುಗೋಡು: ಕೇಂದ್ರ ಸರ್ಕಾರ ಮಂಡಿಸಲಿರುವ ವಿದ್ಯುತ್ ಕಾಯ್ದೆ ಪ್ರತಿಗಳು ಸುಟ್ಟು ಆಕ್ರೋಶ
Team Udayavani, Aug 9, 2022, 4:34 PM IST
ಕುರುಗೋಡು: ಸಮೀಪದ ಶ್ರೀಧರಗಡ್ಡೆ ಗ್ರಾಮದಲ್ಲಿ ಎ. ಐ. ಕೆ.ಕೆ.ಎಂ.ಎಸ್ ರೈತ ಸಂಘಟನೆ ವತಿಯಿಂದ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸಲಿರುವ ವಿದ್ಯುತ್ (ತಿದ್ದುಪಡಿ) ಕಾಯ್ದೆ 2022 ರ ಪ್ರತಿಗಳನ್ನು ಸುಟ್ಟು ಹಾಕಿ ಅದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಗೋವಿಂದ್ ಮಾತನಾಡಿ, ವಿದ್ಯುತ್ ತಿದ್ದುಪಡಿ ಕಾಯ್ದೆ 2022 ಇದು ಖಾಸಗೀಕರಣ ನೀತಿಯಾಗಿದೆ. ಈ ಹಿಂದೆ ಬಡವರಿಗೆ ಸಿಗುತ್ತಿದ್ದ ಭಾಗ್ಯಜೋತಿ, ಕುಟೀರ ಜ್ಯೋತಿ ಸೇರಿದಂತೆ ಹಲವಾರು ಯೋಜನೆಗಳು ಈ ನೀತಿಯಿಂದ ನಾಶವಾಗಲಿವೆ. ಇಂದು ರೈತರ ಬೆಳೆಗಳಿಗೆ ಬೆಂಬಲ ಬೆಲೆ ಸಿಗದೆ ನಷ್ಟದಲ್ಲಿರುವಾಗ, ಕೇಂದ್ರ ಸರ್ಕಾರ ಅವರ ಕಷ್ಟಗಳಿಗೆ ಹೆಗಲು ಕೋಡಬೇಕಾಗಿತ್ತು ಅದರ ಬದಲು ರೈತರ ಪಂಪ್ ಸೆಟ್ ಗಳಿಗೆ ಉಚಿತವಾಗಿ ನೀಡುತ್ತಿದ್ದ 10 ಹೆಚ್. ಪಿ. ವಿದ್ಯುತ್ ಕೂಡಾ ರೈತರಿಂದ ಕಿತ್ತುಕೊಳ್ಳುತ್ತಿರುವುದು ನೊಂದ ಜೀವಗಳಿಗೆ ಸಿಡಿಲು ಬಡಿದಂತಾಗಿದೆ ಎಂದು ಹೇಳಿದರು.
ಜಿಲ್ಲಾ ಉಪಾಧ್ಯಕ್ಷ ಬಸಣ್ಣ ಮಾತನಾಡಿ, ವಿದ್ಯುತ್ ಖಾಸಗೀಕರಣದಿಂದ ಇನ್ನು ಮುಂದೆ ಗ್ರಾಮ ಪಂಚಾಯತ್ ಮಟ್ಟದಲ್ಲಿ ಶುದ್ಧಿಕರಿಸಿದ ಕುಡಿಯುವ ನೀರು ಸೇರಿದಂತೆ ವಿದ್ಯುತ್ ಬಳಸಿಕೊಂಡು ಉಚಿತವಾಗಿ ಸಿಗುತ್ತಿದ್ದ ಹಲವಾರು ಯೋಜನೆಗಳು ದುಬಾರಿಯಾಗಲಿವೆ. ಇನ್ನು ಮುಂದೆ ಸಾರ್ವಜನಿಕ ಸ್ವತ್ತಾಗಿದ್ದ ವಿದ್ಯುತ್ ಹಂತ ಹಂತವಾಗಿ ಏಕಸೌಮ್ಯ ಬಂಡವಳಿಗಾರರ ಪಾಲಾಗಲಿದೆ. ಈ ಬಂಡವಾಳಿಗರು ಇದರ ಸಂಪೂರ್ಣ ಲಾಭ ಪಡೆಯಲು ಜನರ ರಕ್ತ ಹೀರುವುದು ಖಚಿತ. ಕೇಂದ್ರ ಸರ್ಕಾರದ ಬಂಡವಾಳಿಗರ ಪರವಾದ ಇಂತ ನೀತಿಗಳ ವಿರುದ್ಧ ದೇಶದ ಜನಸಾಮಾನ್ಯರು ಸಿಡಿದೇಳಬೇಕು ಮತ್ತು ಬಲಿಷ್ಠ ಹೋರಾಟಗಳನ್ನು ಕಟ್ಟಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯ ಸಮಿತಿ ಸದಸ್ಯರಾದ ಈ.ಹನುಮಂತಪ್ಪ, ಜಿಲ್ಲಾ ಸಮಿತಿ ಸದಸ್ಯರಾದ ಲಿಂಗಪ್ಪ, ಗ್ರಾಮಸ್ತರಾದ ಚಿದಾನಂದ, ಗಾದಿಲಿಂಗಪ್ಪ ಸೇರಿದಂತೆ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.