ಭೂ ಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ನಿರಶನ
ಜಿಂದಾಲ್ ಕಂಪನಿಗೆ ಕಡಿಮೆ ಬೆಲೆಗೆ ಭೂಮಿ ಮಾರಾಟ ಖಂಡಿಸಿ ಪ್ರತಿಭಟನೆ
Team Udayavani, Jun 11, 2019, 8:39 AM IST
ಹೊಸಪೇಟೆ: ಟಿ.ಬಿ.ಡ್ಯಾಂ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು, ಪ್ರತಿಭಟನೆ ನಡೆಸಿದರು.
ಹೊಸಪೇಟೆ: ಭೂ ಸ್ವಾಧೀನ ಕಾಯ್ದೆ ತಿದ್ದುಪಡಿ ಹಾಗೂ ಜಿಂದಾಲ್ ಕಂಪನಿಗೆ ಕಡಿಮೆ ಬೆಲೆಗೆ ಭೂಮಿ ಮಾರಾಟ ಮಾಡಲು ಮುಂದಾಗಿರುವ ಸರ್ಕಾರದ ಕ್ರಮ ವಿರೋಧಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು, ಸೋಮವಾರ ಟಿ.ಬಿ.ಡ್ಯಾಂ (ಗಣೇಶ್ ದೇವಸ್ಥಾನ) ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ಟಿ.ಬಿ. ಡ್ಯಾಂನ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಧರಣಿ ಕುಳಿತ ರೈತರು, ರೈತರ ಒಪ್ಪಿಗೆಯಿಲ್ಲದೆ ಯಾವುದೇ ಕಾರಣಕ್ಕೂ ಭೂಸ್ವಾಧೀನ ಪಡಿಸಿಕೊಳ್ಳಬಾರದು. ಜಿಂದಲ್ ಕಂಪನಿಗೆ ಒಂದು ಎಕರೆಗೆ 1.22 ಲಕ್ಷ ರೂ.ಗಳಂತೆ 3,666 ಎಕರೆ ಭೂಮಿಯನ್ನು ಮಾರಾಟ ಮಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ತುಂಗಭದ್ರಾ ಜಲಾಶಯ ಅಚ್ಚುಕಟ್ಟು ಪ್ರದೇಶದ ರೈತರು ಕಳೆದ ನಾಲ್ಕೈದು ವರ್ಷದಿಂದ ಭೂಮಿಗಳಿಗೆ ಸಮರ್ಪಕ ನೀರು ಸಿಗದೇ ಪರದಾಡುತ್ತಿದ್ದು, ತುಂಗಭದ್ರ ಬಲದಂಡೆ ಕೆಳಮಟ್ಟದ ಕಾಲುವೆಯನ್ನು ಲೈನಿಂಗ್ ಹೆಸರಲ್ಲಿ ನವೀಕರಣಗೊಳಿಸುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಸ್ಥಳಕ್ಕೆ ಉಪವಿಭಾಗಾಧಿಕಾರಿ ಪಿ.ಎನ್. ಲೋಕೇಶ್ ಭೇಟಿ ನೀಡಿ, ರೈತರ ಕೆಲ ಸಮಸ್ಯೆಗಳ ಈಡೇರಿಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಬಳಿಕ ರೈತರು ಪ್ರತಿಭಟನೆ ಹಿಂಪಡೆದರು. ಡಿವೈಎಸ್‌ಪಿ ಎಲ್.ನಾಗೇಶ್, ಪಿಐಗಳಾದ ಅಯ್ಯನಗೌಡ ಪಾಟೀಲ್, ಸಿದ್ದೇಶ್ವರ್, ಪರಸಪ್ಪ ಭಜಂತ್ರಿ, ಮಂಜುನಾಥ, ಎಸ್.ಕೆ.ಪವಾರ್, ಸೇರಿದಂತೆ ಇತರೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಸ್ಥಳದಲ್ಲಿ ಮೊಕ್ಕಂ ಹೂಡಿದ್ದರು.
ವಾಹನ ಸಂಚಾರದಲ್ಲಿ ವ್ಯತ್ಯಯ: ಹೆದ್ದಾರಿ ಬಂದ್‌ನಿಂದಾಗಿ ಸುಮಾರು ನಾಲ್ಕಾರು ತಾಸುಗಳು ಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ, ಸಾರ್ವಜನಿಕರು ಪರದಾಡಿದರು. ಈ ಸಂದರ್ಭದಲ್ಲಿ ದ್ವಿಚಕ್ರ ವಾಹನ ಸಾವರರಿಗೆ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಟ್ರಾಫಿಕ್ ಸಮಸ್ಯೆ ಉಂಟಾಗದಂತೆ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ವಾಹನಗಳಿಗೆ ಪರ್ಯಾಯ ಮಾರ್ಗಗಳ ವ್ಯವಸ್ಥೆ ಕಲ್ಪಿಸಿದ್ದರು.
ಜಿಲ್ಲಾ ಕಾರ್ಯಧ್ಯಕ್ಷ ಪಿ.ನಾರಾಯಣ ರೆಡ್ಡಿ, ತಾಲೂಕು ಅಧ್ಯಕ್ಷ ಸಣ್ಣಕ್ಕಿ ರುದ್ರಪ್ಪ, ಮುಖಂಡರಾದ ಚಿನ್ನದೊರೆ, ಎಲ್.ಎಸ್.ರುದ್ರಪ್ಪ, ರೇವಣಸಿದ್ದಪ್ಪ, ಜಾಕೀರ್, ಸುರೇಶ್, ಮಲ್ಲಿಕಾರ್ಜುನ, ಶ್ರೀನಿವಾಸ್, ಬಿ.ವಿ. ಗೌಡ, ಚೆಲ್ಲವೆಂಕಟ ನಾಯ್ಡು, ವಿ.ಟಿ. ನಾಗರಾಜ, ಮಧುಸೂದನ್, ಜೀರ ಸಂಘಪ್ಪ, ಸುದರ್ಶನ್, ಖಾಸಿಂ ಸಾಬ್, ರಂಗಪ್ಪ, ರಮೇಶ್, ಜಡಿಯಪ್ಪ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.