ವಿದ್ಯಾರ್ಥಿಗಳಿಗೆ ಆಹಾರ ಸರಿಯಾಗಿ ಮುಟ್ಟಿಸಿ
Team Udayavani, Jul 31, 2021, 11:54 AM IST
ಸಿರುಗುಪ್ಪ: ಶಾಲೆಗೆ ಬರುವ ಪ್ರತಿ ವಿದ್ಯಾರ್ಥಿಗೆ ಕಡ್ಡಾಯವಾಗಿ ಅವರ ಪಾಲಕರನ್ನು ಶಾಲೆಗೆ ಕರೆಸಿಕೊಂಡು ಬಿಸಿಯೂಟಕ್ಕೆ ನೀಡುವ ಆಹಾರ ಪದಾರ್ಥಗಳಾದ ಅಕ್ಕಿ, ಬೇಳೆ, ಎಣ್ಣೆ, ಉಪ್ಪು, ಹಾಲಿನಪುಡಿಯನ್ನು ವಿತರಿಸಬೇಕೆಂದು ತಾಪಂ ಇಒ ಶಿವಪ್ಪ ಸುಬೇದಾರ್ ತಿಳಿಸಿದರು.
ತಾಲೂಕಿನ ಕೆಂಚನಗುಡ್ಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ತಾಪಂ ಇಒ ಅವರು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಿಸಿಯೂಟದ ಧಾನ್ಯಗಳನ್ನು ವಿತರಿಸಿದ ಬಗ್ಗೆ ದಾಖಲೆಗಳನ್ನು ಪರಿಶೀಲನೆ ಮಾಡಿ ಮಾತನಾಡಿ, ಕೆಲ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಆಹಾರ ಧಾನ್ಯಗಳನ್ನು ವಿತರಿಸುತ್ತಿರುವ ಬಗ್ಗೆ ಮಾಹಿತಿ ಬಂದಿದೆ. ಆದರೆ ಸರ್ಕಾರದ ಕೊರೊನಾ ನಿಯಮಾವಳಿ ಪ್ರಕಾರ ಪಾಲಕರಿಗೆ ಮಾತ್ರ ಆಹಾರ ಧಾನ್ಯಗಳನ್ನು ವಿತರಿಸಬೇಕೆಂದು ಸೂಚಿಸಿದರು.
ಪ್ರತಿ ವಿದ್ಯಾರ್ಥಿಗಳಿಗೆ ಸರ್ಕಾರ ನಿಗದಿ ಪಡಿಸಿದ ಪ್ರಕಾರ ಆಹಾರಧಾನ್ಯ ಗಳನ್ನು ವಿತರಣೆ ಮಾಡಲಾಗುತ್ತದೆ. ಕೆಲ ವಿದ್ಯಾರ್ಥಿಗಳ ಆಧಾರ್ ನಂಬರ್‌ನ್ನು ಶಾಲಾ ದಾಖಲಾತಿಯಲ್ಲಿ ದಾಖಲಿಸದೆ ಇರುವುದರಿಂದ ಅಂಥ ವಿದ್ಯಾರ್ಥಿಗಳಿಗೆ ಮಾತ್ರ ಆಹಾರ ಧಾನ್ಯ ವಿತರಣೆ ಮಾಡಿಲ್ಲವೆಂದು ಶಿಕ್ಷಕ ಮಹಾದೇವ ಮಾಹಿತಿ ನೀಡಿದರು. ಶಾಲಾ ಖಾತೆಯಲ್ಲಿರುವ ಹಣ ಯಾವ ಕೆಲಸಗಳಿಗೆ ಬಳಕೆ ಮಾಡಲಾಗಿದೆ ಎನ್ನುವುದರ ಬಗ್ಗೆ ರಿಜಿಸ್ಟರ್‌ಬುಕ್‌ನಲ್ಲಿ ದಾಖಲಿಸಬೇಕು.
ಖರ್ಚಾಗಿದ್ದರೆ ಖರ್ಚಾದ ಮಾಹಿತಿಯನ್ನು, ಖರ್ಚಾಗಿಲ್ಲದಿದ್ದರೆ ಖಾತೆಯಲ್ಲಿ ಉಳಿದಿರುವ ಹಣ ಎಷ್ಟು ಎಂಬುದನ್ನು ಕಡ್ಡಾಯವಾಗಿ ದಾಖಲಿಸಬೇಕು. ಆದರೆ ನೀವು ಹಣ ಉಳಿಕೆ ಮತ್ತು ಖರ್ಚಿನ ಬಗ್ಗೆ ಯಾವುದೇ ಕಡತ ನಿರ್ವಹಿಸದೇ ಇರುವುದು ಸರಿಯಾದ ಕ್ರಮವಲ್ಲ, ಇನ್ನು ಮುಂದೆ ಹಣದ ಖರ್ಚುವೆಚ್ಚದ ಬಗ್ಗೆ ದಾಖಲಾತಿ ಕಡ್ಡಾಯವಾಗಿ ಬರೆದಿಡಬೇಕು. ಶಾಲೆ ಆವರಣ ಸ್ವತ್ಛವಾಗಿಟ್ಟುಕೊಳ್ಳಬೇಕು. ಕಾಂಪೌಂಡ್ ಎತ್ತರಿಸಲು ಬೇಕಾದ ಅನುದಾನ ನೀಡಲಾಗುವುದು. ಈ ಬಗ್ಗೆ ವರದಿ ತಯಾರಿಸಿ ತಾಪಂಗೆ ಸಲ್ಲಿಸಬೇಕೆಂದು ಇಒ ಸೂಚನೆ ನೀಡಿದರು. ಶಿಕ್ಷಕ ಅಜ್ಮಿàರ್, ಪಿಡಿಒ ಆದೆಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
MUST WATCH
ಹೊಸ ಸೇರ್ಪಡೆ
Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್
Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.