ನಿಯಮ ಪಾಲಿಸದ ವಾಹನ ಸವಾರರಿಂದ ದಂಡ ವಸೂಲಿ
Team Udayavani, May 12, 2020, 11:44 AM IST
ಸಾಂದರ್ಭಿಕ ಚಿತ್ರ
ಸಂಡೂರು: ಕೋವಿಡ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಅಂತರ ಕಾಪಾಡಿ ಎಂದು ಡಂಗೂರ ಸಾರಿದೆ. ನಿತ್ಯ ಮೈಕ್ ಮೂಲಕ ಪ್ರಚಾರ ಮಾಡುತ್ತಿದ್ದರೂ ಜನ ಸಹಕರಿಸದ ಹಿನ್ನೆಲೆಯಲ್ಲಿ ನಿಯಮದಂತೆ ದಂಡ ವಸೂಲಿ ಪ್ರಾರಂಭಿಸಬೇಕಾಗಿದೆ ಎಂದು ಪುರಸಭೆಯ ಮುಖ್ಯಾಧಿಕಾರಿ ಸತ್ಯನಾರಾಯಣರಾವ್
ತಿಳಿಸಿದರು.
ಅವರು ಪಟ್ಟಣದ ವಿಜಯ ವೃತ್ತದಲ್ಲಿ ಮಾಸ್ಕ್ ಇಲ್ಲದೆ ಸಂಚಾರ ಮಾಡುವವರು, ಸಾಮಾಜಿಕ ಅಂತರ ಕಾಪಾಡದೇ ಇರುವವರಿಗೆ ದಂಡ ಹಾಕುವ ಕಾರ್ಯ ಮಾಡುತ್ತಿದ್ದೇವೆ. ಮೊದಲನೇ ದಿನ 8300, ಎರಡನೆ ದಿನ 4300, ಮೂರನೇ 6200 ರೂ. ದಂಡ ವಸೂಲಿ ಮಾಡಿ ಸರ್ಕಾರಕ್ಕೆ ಪಾವತಿಸಿದ್ದೇವೆ. ಆದರೂ ಸಾರ್ವಜನಿಕರು ನಿಯಮ ಪಾಲಿಸುತ್ತಿಲ್ಲ. ಈ ಬಗ್ಗೆ ಆರೋಗ್ಯ ಇಲಾಖೆ,
ಪುರಸಭೆ, ಪೊಲೀಸ್ ಇಲಾಖೆ, ಆಶಾ ಕಾರ್ಯಕರ್ತೆಯರು ನಿತ್ಯ ಸಾರ್ವಜನಿಕರ ಪ್ರಾಣ ರಕ್ಷಣೆಗಾಗಿಯೇ ಹೋರಾಟ ನಡೆಸುತ್ತಿದ್ದಾರೆ. ಆದ್ದರಿಂದ ಕಡ್ಡಾಯವಾಗಿ ನಿಯಮ ಪಾಲಿಸಬೇಕು ಎಂದು ದಂಡ ಹಾಕಿದವರಿಗೆ ತಿಳಿ ಹೇಳಿ ಭಿತ್ತಿಪತ್ರ ಕಳುಹಿಸುವ ಮೂಲಕ ಜಾಗೃತಿ ಉಂಟು ಮಾಡಿದರು.
ಪುರಸಭೆ ಅಧಿಕಾರಿಗಳಾದ ಮಲ್ಲೇಶಪ್ಪ, ಗೀತಾ, ಇತರ ಸಿಬ್ಬಂದಿ, ಪೊಲೀಸರ ಸಹಕಾರದಿಂದ ದಂಡ ವಸೂಲಿ ಮಾಡಿ ಜಾಗೃತಿ ಮೂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
Ballari; ಮೃ*ತ ಬಾಣಂತಿಯರ ಮನೆಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.