ಜ್ವರ ಪರೀಕ್ಷಾ ಕೇಂದ್ರ-ಕ್ಯಾಂಟಿನ್ ಅಕ್ಕ-ಪಕ್ಕ!
Team Udayavani, Jul 4, 2020, 9:37 AM IST
ಹರಪನಹಳ್ಳಿ: ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಕೋವಿಡ್ ಜ್ವರ ತಪಾಸಣಾ ಕೇಂದ್ರ ಮತ್ತು ಸಾರ್ವಜನಿಕರು ಆಹಾರ ಸೇವಿಸುವ ಕ್ಯಾಂಟಿನ್ ಅಕ್ಕ-ಪಕ್ಕದಲ್ಲಿಯೇ ಇವೆ. ಹೀಗಾಗಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳ ಸಂಬಂಧಿಕರಿಗೆ ಆತಂಕ ಶುರುವಾಗಿದೆ.
ಆಸ್ಪತ್ರೆಯ ನಾಗರಿಕ ಸೌಲಭ್ಯಗಳ ಸಂಕೀರ್ಣ ಕಟ್ಟಡದಲ್ಲಿ ಆಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ತಿಂಡಿ, ಊಟ, ಟೀ ಸೇವಿಸುವ ಉದ್ದೇಶದಿಂದ ಉಪಾಹಾರ ಕೇಂದ್ರ ತೆರೆಯಲಾಗಿದೆ. ಆದರೆ ಇದೀಗ ಕ್ಯಾಂಟಿನ್ ಪಕ್ಕದಲ್ಲಿಯೇ ಕೊರೊನಾ ಜ್ವರ ತಪಾಸಣಾ ಕೇಂದ್ರ ತೆರೆಯಲಾಗಿದ್ದು, ಇಲ್ಲಿಂದಲೇ ಸೋಂಕಿತರ ಸಂಪರ್ಕದಲ್ಲಿದ್ದವರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗುತ್ತಿದೆ. ಈಚೆಗೆ ಕೋವಿಡ್ ಪಾಸಿಟಿವ್ ವರದಿ ಬಂದಿರುವ ಅರಸೀಕೆರೆ ಪೊಲೀಸ್ ಠಾಣೆ ಪೆದೆಗಳ ಗಂಟಲು ದ್ರವ ಇಲ್ಲಿಂದಲೇ ಸಂಗ್ರಹಿಸಿ ಕಳಿಸಲಾಗಿತ್ತು. ಅಕ್ಕ-ಪಕ್ಕದಲ್ಲಿಯೇ ಕ್ಯಾಂಟಿನ್ ಮತ್ತು ತಪಾಸಣಾ ಕೇಂದ್ರ ತೆರೆದಿರುವುದರಿಂದ ಸೋಂಕು ಹರಡಬಹುದು ಎಂಬ ಭಯದಿಂದ ಕ್ಯಾಂಟಿನ್‌ಗೆ ಹೋಗಲು ಸಾರ್ವಜನಿಕರು ಹಿಂದೇಟು ಹಾಕುತ್ತಿದ್ದಾರೆ. ಪರಿಣಾಮ ರೋಗಿಗಳ ಸಂಬಂಧಿಕರು ತಿಂಡಿ, ಊಟಕ್ಕಾಗಿ ಪರದಾಟ ನಡೆಸುವಂತಾಗಿದೆ. ಸುಮಾರು 1 ಕಿಮೀ ದೂರವಿರುವ ಪ್ರವಾಸಿ ಮಂದಿರ ವೃತ್ತಕ್ಕೆ ಊಟ ಹುಡುಕಿಕೊಂಡು ಹೋಗುತ್ತಿರುವ ದೃಶ್ಯ ಸಾಮಾನ್ಯವಾಗಿದೆ. 100 ಹಾಸಿಗೆಗಳ ದೊಡ್ಡ ಆಸ್ಪತ್ರೆಯಲ್ಲಿ ಜ್ವರ ತಪಾಸಣಾ ಕೇಂದ್ರ ತೆರೆಯಲು ಸ್ಥಳವಿಲ್ಲದಿರುವುದು ದುರಂತ ಎನ್ನುವಂತಾಗಿದೆ.
ಕ್ಯಾಂಟಿನ್ ಪಕ್ಕದಲ್ಲಿಯೇ ಜ್ವರ ತಪಾಸಣಾ ಕೇಂದ್ರವಿರುವುದರಿಂದ ಅಲ್ಲಿಗೇ ಹೋಗಲು ಭಯವಾಗುತ್ತಿದೆ. ಆದ್ದರಿಂದ ದೂರದಲ್ಲಿ ಹೋಗಿ ಊಟ, ತಿಂಡಿ ಮುಗಿಸಿಕೊಂಡು ಬರುತ್ತಿದ್ದೇವೆ. ಇಲ್ಲಿಗೆ ಆಗಮಿಸುವ ಪ್ರತಿಯೊಬ್ಬರಿಗೂ ಭಯವಾಗುತ್ತಿದೆ ಎನ್ನುತ್ತಾರೆ ರೋಗಿಯ ಸಂಬಂದಿ ದುರುಗಪ್ಪ. ಈ ಕುರಿತು ಆಸ್ಪತ್ರೆಯ ಆಡಳಿತಾಧಿಕಾರಿ, ಪ್ರಭಾರಿ ತಾಲೂಕು ಆರೋಗ್ಯಾಧಿಕಾರಿ ಆಗಿರುವ ಡಾ|ಶಿವಕುಮಾರ ಅವರು, ಆಸ್ಪತ್ರೆಯಲ್ಲಿ ಕೋಣೆಗಳು ಖಾಲಿ ಇವೆಯಾ ಎಂದು ಪರಿಶೀಲನೆ ನಡೆಸುತ್ತೇವೆ ಎಂದು ಹಾರಿಕೆ ಉತ್ತರ ನೀಡುತ್ತಾರೆ. ಕೂಡಲೇ ಜ್ವರ ತಪಾಸಣಾ ಕೇಂದ್ರವನ್ನು ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ರೋಗಿಗಳ ಸಂಬಂಧಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.