ರೈತರ ಸಾಲ ಮನ್ನಾಕ್ಕೆಒತ್ತಾಯ

Team Udayavani, Jun 21, 2018, 10:21 AM IST

balelry-1.jpg

ಬಳ್ಳಾರಿ: 2009ಕ್ಕೂ ಹಿಂದಿನ ಬೆಳೆ ಸಾಲವನ್ನೂ ಪರಿಗಣಿಸಿ ಮನ್ನಾ ಮಾಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಈಗಾಗಲೇ 2009 ಏಪ್ರಿಲ್‌ 1ರಿಂದ 2019 ಡಿಸೆಂಬರ್‌ 31ರವರೆಗಿನ ಅವಧಿಯಲ್ಲಿ ರೈತರು ಪಡೆದಿದ್ದ ಬೆಳೆ ಸಾಲವನ್ನು ಮನ್ನಾ ಮಾಡುವುದಾಗಿ ತಿಳಿಸಿದ್ದಾರೆ. ಆದರೆ, 2008ರಲ್ಲಿ ಯುಪಿಎ ಸರ್ಕಾರ ರೈತರ ಸಾಲವನ್ನು ಮನ್ನಾ ಮಾಡಿದ್ದರೂ, ವಿಧಿಸಿದ್ದ ಷರತ್ತುಗಳಿಂದ ಸಾವಿರಾರು ರೈತರು ಸಾಲ ಮನ್ನಾದಿಂದ ವಂಚಿತರಾಗಿದ್ದರು. ಹೀಗಾಗಿ ಸಾಲಮನ್ನಾವನ್ನು 2009ಕ್ಕೂ ಹಿಂದಿನ ವರ್ಷಗಳಿಗೆ ಅನ್ವಯವಾಗುವಂತೆ ಕ್ರಮ ಕೈಗೊಳ್ಳಬೇಕು. 

2017 ಡಿಸೆಂಬರ್‌ 31ಕ್ಕೆ ನಿಗದಿಪಡಿಸಿರುವ ಸಾಲಮನ್ನಾದವಾಯಿದೆಯನ್ನು ಸಹ ಮಾರ್ಪಾಡು ಮಾಡಿ 2018  ಮೇ.31ರ ವರೆಗೆ ವಿಸ್ತರಿಸಬೇಕು. ಸಣ್ಣ, ಮಧ್ಯಮ, ದೊಡ್ಡ ರೈತ ಎಂಬ ತಾರತಮ್ಯ ಮಾಡದೆ ಎಲ್ಲ ವರ್ಗದ ರೈತರ ಬೆಳೆ ಸಾಲ ಮನ್ನಾ ಮಾಡಬೇಕು. ಅದಕ್ಕೆ ಇಂತಿಷ್ಟು ಲಕ್ಷಗಳೆಂದು ಮಿತಿ ಹಾಕಬಾರದು ಎಂದುಪ್ರತಿಭಟನಾಕಾರರು ಆಗ್ರಹಿಸಿದರು. 

ಬ್ಯಾಂಕುಗಳಿಂದ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿರುವ ರೈತರ ಸಾಲವನ್ನು ಮನ್ನಾ ಮಾಡಬೇಕು. ಕೃಷಿ ಉದ್ದೇಶಕ್ಕಾಗಿ ರೈತ ಕುಟುಂಬದವರು ಆಭರಣಗಳ ಮೇಲೆ ಪಡೆದಿರುವ ಸಾಲ, ಕೃಷಿ ಅಭಿವೃದ್ಧಿಗಾಗಿ ಮಧ್ಯಮ, ದೀರ್ಘಾವಧಿ ಸಾಲ, ಪಶುಪಾಲನೆ ಮಾಡಲು, ಪಾಲಿಕೆ, ನಗರಸಭೆ ವ್ಯಾಪ್ತಿಯಲ್ಲಿ ವಾಣಿಜ್ಯ ಬ್ಯಾಂಕುಗಳಲ್ಲಿ ಪಡೆಯಲಾಗಿದ್ದ ಕೃಷಿ ಸಾಲ ಮನ್ನಾ ವ್ಯಾಪ್ತಿಗೆ ತರಬೇಕು ಎಂದುಒತ್ತಾಯಿಸಿದರು. 

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಈಗಾಗಲೇ ನೀಡಿದ್ದ ಭರವಸೆಯಂತೆ ರೈತರ ಸಾಲ ಮನ್ನಾ ಮಾಡಬೇಕು. ಒಂದು ವೇಳೆ ಸಾಲಮನ್ನಾ ಮಾಡುವುದಾಗಿ ನಿಯಮಗಳನ್ನು ರೂಪಿಸಿ ಸಾಲ ಮನ್ನಾದಲ್ಲಿ ವ್ಯತ್ಯಾಸ ಕಂಡು ಬಂದರೆ ಉಗ್ರ ಸ್ವರೂಪ ಹೋರಾಟ ಹಮ್ಮಿಕೊಳ್ಳಲಾಗುವುದು.

ಈಗಾಗಲೇ ರಾಜ್ಯದ 175 ರೈತ ಸಂಘಟನೆಗಳ ಒಕ್ಕೂಟದಿಂದ ಗ್ರಾಮ ಬಂದ್‌ ಚಳವಳಿಯನ್ನು ಮಾಡಲಾಗಿದೆ.
ಉತ್ತರ ಪ್ರದೇಶ, ಪಂಜಾಬ್‌, ಹರಿಯಾಣ, ರಾಜಸ್ಥಾನ, ಮಹಾರಾಷ್ಟ್ರ ರಾಜ್ಯಗಳಲ್ಲಿ ಹಾಲು, ತರಕಾರಿ ಸ್ಥಗಿತಗೊಳಿಸಲಾಗಿದೆ.

ಇದರಿಂದ ನಗರ ಜೀವನದ ಪರಿಸ್ಥಿತಿ ಅಲ್ಲೋಲ ಕಲ್ಲೋಲವಾಗಿದೆ. ಇದನ್ನು ಮುಂದಿನ ದಿನಗಳಲ್ಲಿ ರಾಜ್ಯದಲ್ಲೂ ಸಹ ಗ್ರಾಮಬಂದ್‌ ಚಳವಳಿ ಮಾಡಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಬಿ.ಗೋಣಿಬಸಪ್ಪ, ರಾಜ್ಯ ಕಾರ್ಯಾಧ್ಯಕ್ಷ ಎ.ವೀರಸಂಗಯ್ಯ, ಎಂ.ಎಲ್‌.ಕೆ.ನಾಯಡು, ಕೃಷ್ಣಪ್ಪ, ದೇವರಮನಿ ಮಹೇಶ್‌, ವಿರೂಪಾಕ್ಷಪ್ಪ, ಜೆ.ನಾಗರಾಜ್‌, ವಿ.ನಾಗರಾಜ್‌, ಬಿ.ಸಿದ್ದನಗೌಡ, ಬಿ.ಉಜ್ಜಿನಯ್ಯ, ಎಸ್‌ .ಬಾಷಾಸಾಬ್‌, ಕೆ.ಡಿ.ನಾಯ್ಕ, ರಾಘವೇಂದ್ರ ರೆಡ್ಡಿ, ಮಲ್ಲಿಕಾರ್ಜುನ ಸೇರಿದಂತೆ ಹಲವಾರು ರೈತ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.  

ಟಾಪ್ ನ್ಯೂಸ್

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.