ಬಳ್ಳಾರಿಯಲ್ಲಿ ಸೋಂಕು ಪಾಸಿಟಿವ್ ಸಂಖ್ಯೆ ನಾಲ್ಕಕ್ಕೆ ಏರಿಕೆ ; 68 ಜನರು ಕ್ವಾರಂಟೈನ್ ನಲ್ಲಿ
ದೆಹಲಿ ಕಾರ್ಯಕ್ರಮದಲ್ಲಿ ಬಳ್ಳಾರಿಯ 93 ಜನರು ಭಾಗಿ
Team Udayavani, Apr 2, 2020, 8:58 PM IST
ಬಳ್ಳಾರಿ: ಈಗಾಗಲೇ ಕೋವಿಡ್ 19 ವೈರಸ್ ಮೂರು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿರುವ ಬಳ್ಳಾರಿ ಜಿಲ್ಲೆಯಲ್ಲಿ ಇದೀಗ ಮತ್ತೊಂದು ಪ್ರಕರಣ ದೃಢಪಟ್ಟಿದ್ದು, ಈ ಮೂಲಕ ಗಣಿನಾಡಿನಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.
ನಂಜನಗೂಡು ಕಾರ್ಖಾನೆಯಿಂದ ಜಿಲ್ಲೆಯ ಸಿರುಗುಪ್ಪ ತಾಲೂಕು ಎಚ್.ಹೊಸಹಳ್ಳಿ ಗ್ರಾಮಕ್ಕೆ ಬಂದಿದ್ದ ಹದಿನಾಲ್ಕು ವರ್ಷದ ಬಾಲಕನಿಗೆ ವೈರಸ್ ಸೋಂಕು ಹರಡಿದ್ದು, ನಗರದ ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಬಾಲಕನ ಗಂಟಲ ದ್ರವದ ಮಾದರಿ ಪರೀಕ್ಷಾ ವರದಿ ಲಭಿಸಿದ್ದು ಪಾಸಿಟಿವ್ ಎಂದು ಬಂದಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.
ದೆಹಲಿ ಕಾರ್ಯಕ್ರಮದಲ್ಲಿ ಬಳ್ಳಾರಿಯ 93 ಜನ :
ದೆಹಲಿಯ ನಿಜಾಮುದ್ದೀನ್ ತಬ್ಲಿಗಿ ಜಮಾತ್ ಕಾರ್ಯಕ್ರಮದಲ್ಲಿ ಬಳ್ಳಾರಿ ಜಿಲ್ಲೆಯಿಂದ ಒಟ್ಟು 93 ಜನರು ಭಾಗವಹಿಸಿದ್ದು, 68 ಜನರನ್ನು ನಗರ ಹೊರವಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ.
ಕ್ವಾರಂಟೈನ್‌ನಲ್ಲಿರುವ 68 ಜನರಲ್ಲಿ 66 ಜನರಿಗೆ ಸೋಂಕು ಹರಡಿರುವ ಬಗ್ಗೆ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಇನ್ನುಳಿದ 65 ಜನರು ಬೇರೆ ಜಿಲ್ಲೆ, ರಾಜ್ಯಗಳಲ್ಲಿ ಉಳಿದಿದ್ದು, ಅವರ ಕುರಿತಾಗಿ ಸೂಕ್ತ ಕ್ರಮಕೈಗೊಳ್ಳುವಂತೆ ಆಯಾ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲಾಗಿದೆ.
ಸಾರ್ವಜನಿಕರ ಆರೋಗ್ಯ ಹಾಗೂ ಸುರಕ್ಷತೆ ಹಿತದೃಷ್ಟಿಯಿಂದ ಮತ್ತು ತಮ್ಮ ಸ್ವಂತ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದಾಗಿ ಈ ರೀತಿಯ ಕ್ವಾರಂಟೈನ್ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸ್ಟ್ಯಾಂಡರ್ಡ್ ವಿಧಾನಕ್ಕನುಗುಣವಾಗಿ ಕ್ರಮಕೈಗೊಳ್ಳಲಾಗುವುದು ಎಂದವರು ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!
Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ
Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.