ಸರ್ಕಾರಿ ಗೌರವದೊಂದಿಗೆ ಯೋಧನ ಅಂತ್ಯಕ್ರಿಯೆ

•ಮುಗಿಲು ಮುಟ್ಟಿದ ಕುಟುಂಬದವರ ಆಕ್ರಂದನ •ಬಸವರಾಜ್‌ ಅಮರ್‌ ರಹೇ, ವಂದೇ ಮಾತರಂ ಘೋಷಣೆ

Team Udayavani, Jul 2, 2019, 9:53 AM IST

ballry-tdy-1…

ಹರಪನಹಳ್ಳಿ: ಹಲುವಾಗಲು ಗ್ರಾಮದಲ್ಲಿ ಯೋಧನ ಪಾರ್ಥಿವ ಶರೀರವನ್ನು ಮೆರವಣಿಗೆಯ ಮೂಲಕ ಅಂತ್ಯಕ್ರಿಯೆ ಸ್ಥಳಕ್ಕೆ ತರಲಾಯಿತು.

ಹರಪನಹಳ್ಳಿ: ಹರಿದ್ವಾರ ಬಳಿ ರಸ್ತೆ ಅಪಘಾತದಲ್ಲಿ ಶುಕ್ರವಾರ ಮೃತಪಟ್ಟ ಜಿಐಎಸ್‌ಎಫ್‌ ಯೋಧ ತಿಪ್ಪನಳ್ಳಿ ಬಸವರಾಜ್‌ ಅವರ ಅಂತ್ಯ ಸಂಸ್ಕಾರ ಸ್ವಗ್ರಾಮ ತಾಲೂಕಿನ ಹಲುವಾಗಲು ಗ್ರಾಮದಲ್ಲಿ ಸೋಮವಾರ ಸರ್ಕಾರಿ ಸಕಲ ಗೌರವಗಳೊಂದಿಗೆ ನೆರವೇರಿತು.

ಕೇಂದ್ರೀಯ ಕೈಗಾರಿಕಾ ಭದ್ರತಾ ದಳದಲ್ಲಿ ಕರ್ತವ್ಯನಿರ್ವಹಿಸುತ್ತಿದ್ದ ಯೋಧ ತಿಪ್ಪನಳ್ಳಿ ಬಸವರಾಜ್‌ ಪಾರ್ಥಿವ ಶರೀರ ಹೊತ್ತ ವಾಹನ ಭಾನುವಾರ ರಾತ್ರಿ 10 ಗಂಟೆಗೆ ಸ್ವಗ್ರಾಮಕ್ಕೆ ಆಗಮಿಸಿತು. ಗ್ರಾಮಕ್ಕೆ ಪಾರ್ಥಿವ ಶರೀರ ಬರುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಅಪಾರ ಬಂಧು ಬಳಗದ ಸದಸ್ಯರು, ಊರಿನವರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಯೋಧನ ದರ್ಶನ ಪಡೆಯಲು ಸಾಗರೋಪಾದಿಯಲ್ಲಿ ಆಗಮಿಸಿದ್ದರು. ಇದಕ್ಕೂ ಮೊದಲು ತಾಲೂಕಿನ ದುಗ್ಗಾವತ್ತಿ ಗ್ರಾಮದ ಬಳಿ ರಾತ್ರಿ 7.30ರ ಸಮಯದಲ್ಲಿ ತಹಶೀಲ್ದಾರ್‌ ಡಾ.ನಾಗವೇಣಿ ಅವರಿಗೆ ಜಿಐಎಸ್‌ಎಫ್‌ ಸಿಬ್ಬಂದಿ ಮೃತ ದೇಹವನ್ನು ಹಸ್ತಾಂತರಿಸಿದರು.

ಮನೆಯ ಮುಂದೆ ಕುಟುಂಬಸ್ಥರ ದರ್ಶನಕ್ಕೆಂದು ಕೆಲ ಹೊತ್ತು ಪಾರ್ಥಿವ ಶರೀರ ಇಡಲಾಯಿತು. ಬಳಿಕ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಇಟ್ಟು ಸಕಲ ಸರ್ಕಾರಿ ಗೌರವ ಸಲ್ಲಿಸಲಾಯಿತು. ಬೆಳಗ್ಗೆ 9.30 ಕ್ಕೆ ರಾಜ್ಯ ಪೊಲೀಸ್‌ ಸಿಬ್ಬಂದಿ ಗಾಳಿಯಲ್ಲಿ ಮೂರು ಸುತ್ತು ಕುಶಾಲ ತೋಪು ಹಾರಿಸಿ ಅಗಲಿದ ಯೋಧನಿಗೆ ಗೌರವ ನಮನ ಸಲ್ಲಿಸಿದರು. ಬಳಿಕ ಗ್ರಾಮದ ಪ್ರಮುಖ ಬೀದಿಯಲ್ಲಿ ಪಾರ್ಥಿವ ಶರೀರವನ್ನು ಮೆರವಣಿಗೆಯ ಮೂಲಕ ಅಂತ್ಯಕ್ರಿಯೆ ಸ್ಥಳಕ್ಕೆ ತರಲಾಯಿತು. ಈ ವೇಳೆ ಬಸವರಾಜ್‌ ಅಮರ್‌ ರಹೇ, ವಂದೇ ಮಾತರಂ ಎಂದು ಜನ ಘೋಷಣೆ ಕೂಗಿದರು.

ಗ್ರಾಮದ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್‌ ಹಿಂಭಾಗದ ಜಮೀನಿನಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ಮಾಡಲಾಯಿತು. ತಂದೆ ಹನುಮಂತಪ್ಪ, ಅಣ್ಣ ದುರುಗಪ್ಪ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಇದಕ್ಕೂ ಮೊದಲು ತಾಲೂಕು ಆಡಳಿತದವತಿಯಿಂದ ಉಪವಿಭಾಗಾದಿಕಾರಿ ಪಿ.ಎನ್‌.ಲೋಕೇಶ್‌ ಅವರು ಪುಷ್ಪ ನಮನ ಸಲ್ಲಿಸಿದರು. ಜಿಐಎಸ್‌ಎಫ್‌ ಇನ್ಸ್‌ಪೆಕ್ಟರ್‌ ನವೀನಕುಮಾರ ನೇತೃತ್ವದ ತಂಡ ಅಂತಿಮ ನಮನ ಸಲ್ಲಿಸಿತು. ಯೋಧನ ತಾಯಿ ದುರುಗಮ್ಮ ಅವರಿಗೆ ಜಿಐಎಸ್‌ಎಫ್‌ ಇನ್ಸ್‌ಪೆಕ್ಟರ್‌ ರಾಷ್ಟ್ರಧ್ವಜ ಹಸ್ತಾಂತರಿಸಿದರು.

ಶಾಸಕ ಜಿ. ಕರುಣಾಕರರೆಡ್ಡಿ ಅವರು ಗೌರವ ಸಲ್ಲಿಸಿ ಯೋಧನ ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದರು. ಉಪವಿಭಾಗಾಧಿಕಾರಿ ಪಿ.ಎನ್‌. ಲೊಕೇಶ್‌, ತಹಶೀಲ್ದಾರ್‌ ಡಾ.ನಾಗವೇಣಿ, ಸಿಪಿಐ ಡಿ.ದುರುಗಪ್ಪ, ಜಿಪಂ ಸದಸ್ಯೆ ಸುವರ್ಣ ಆರುಂಡಿ ನಾಗರಾಜ್‌, ಗ್ರಾಪಂ ಅಧ್ಯಕ್ಷೆ ರತ್ನಮ್ಮ ಸೋಮಪ್ಪ ಸೇರಿದಂತೆ ಗಣ್ಯರು, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಅಂತಿಮ ದರ್ಶನ ಪಡೆದರು.

ಟಾಪ್ ನ್ಯೂಸ್

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

13-

Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

Sanduru-BJP-Cong-Candidates

Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ

Bellary-BYV

Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.