ನೆಲ್ಕುದ್ರಿ ಗ್ರಾಪಂಗೆ ಗಾಂಧಿ ಗ್ರಾಮ ಗರಿ
ದಾಖಲೆ ನಿರ್ವಹಣೆ-ಉದ್ಯೋಗ ಖಾತ್ರಿಯಲ್ಲಿ ಗ್ರಾಪಂ ಮೇಲುಗೈ
Team Udayavani, Oct 2, 2020, 7:24 PM IST
ಹಗರಿಬೊಮ್ಮನಹಳ್ಳಿ: ಸರಕಾರ ಗ್ರಾಪಂಗಳ ಅಭಿವೃದ್ಧಿ, ದಾಖಲೆಗಳ ನಿರ್ವಹಣೆ ಗುರುತಿಸಿ ಅ.2 ಗಾಂಧಿ ಜಯಂತಿ ದಿನದಂದು ನೀಡುವ ಗಾಂಧಿ ಗ್ರಾಮ ಪುರಸ್ಕಾರಕ್ಕೆ ತಾಲೂಕಿನ ನೆಲ್ಕುದ್ರಿ ಗ್ರಾಪಂ ಆಯ್ಕೆಯಾಗಿರುವುದು ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳಲ್ಲಿ ಸಂತಸ ಮನೆ ಮಾಡಿದೆ. ನೂತನ ನೆಲ್ಕುದ್ರಿ ಗ್ರಾಪಂನಲ್ಲಿ ಸ್ವತ್ಛತೆ, ನೈರ್ಮಲ್ಯ, ಕಂದಾಯ ವಸೂಲಿಯಲ್ಲಿ ವಿಶೇಷ ಸಾಧನೆ ಮಾಡಿರುವುದರಿಂದ ಪುರಸ್ಕಾರಕ್ಕೆ ಆಯ್ಕೆಯಾಗಿದೆ.
ಪಂಚಾಯತ್‌ರಾಜ್ ಇಲಾಖೆಯ ಎಲ್ಲಾ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಣೆ, ಯೋಜನೆಗೆ ಅನುಷ್ಠಾನ, ಸಾರ್ವಜನಿಕರಿಗೆ ಅನುಕೂಲಕಾರಿಯಾಗುವಂತಹ ಕಾಮಗಾರಿ, ಜಮಾಬಂ ಧಿ, ಗ್ರಾಮಸಭೆ, ವಾರ್ಡ್‌ಸಭೆ, ಸಾಮಾನ್ಯಸಭೆಗಳನ್ನು ಅತ್ಯಂತ ಯಶಸ್ವಿಯಾಗಿ ನಡೆಸಿರುವ ಹಿನ್ನಲೆಯಲ್ಲಿ ಗ್ರಾಪಂಗೆ ಈ ಗರಿ ಸಿಕ್ಕಿದೆ. ಪಂಚತಂತ್ರ ಅಳವಡಿಕೆ, ಉದ್ಯೋಗ ಖಾತ್ರಿಯೋಜನೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿಕೂಲಿ ಕಾರ್ಮಿಕರಿಗೆ ನಿರಂತರವಾಗಿ ಕೆಲಸ ನೀಡಲಾಗಿದೆ. ಸಕಾಲ ಸೇವೆ, ಗ್ರಾಪಂ ಹಣಕಾಸು ನಿರ್ವಹಣೆಯನ್ನು ಅಚ್ಚುಕಟ್ಟಾಗಿ ಮಾಡಿರುವುದರಿಂದ ಪ್ರಶಸ್ತಿ ಲಭಿಸಿದೆ.
ಗ್ರಾಪಂವ್ಯಾಪ್ತಿಯ ಕನ್ನಿಹಳ್ಳಿ, ಚಿಮ್ನಳ್ಳಿ, ಹಂಚನಾಳು, ಹಳೇ ನೆಲ್ಕುದ್ರಿ, ಮಸಾರಿ ನೆಲ್ಕುದ್ರಿ, ನೆಲ್ಕುದ್ರಿ-1 ಗ್ರಾಮಗಳಲ್ಲಿ ಚೆಕ್ ಡ್ಯಾಂ, ಬದು ನಿರ್ಮಾಣ, ನಮ್ಮ ಹೊಲ ನಮ್ಮ ದಾರಿ, ದನದ ಕೊಟ್ಟಿಗೆ, ಚರಂಡಿ, ಸಿಸಿ ರಸ್ತೆ, ಮೆಟಲಿಂಗ್ ರಸ್ತೆಗಳನ್ನು ನಿರ್ಮಾಣ ಮಾಡಿ ಗ್ರಾಪಂನ್ನು ಮುನ್ನೆಲೆಗೆ ತರಲಾಗಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ತೋಟಗಾರಿಕೆ ಇಲಾಖೆಯಲ್ಲಿ ರೈತರಿಗೆ ದಾಳಿಂಬೆ ಬೆಳೆಗೆ ಪ್ರೋತ್ಸಾಹಧನ, ಕೃಷಿಇಲಾಖೆಯಿಂದ ಕೃಷಿಹೊಂಡಗಳನ್ನು ಅಚ್ಚುಕಟ್ಟಾಗಿ ನಿರ್ಮಿಸಲಾಗಿದೆ. ಕೆರೆ ಹೂಳು ಎತ್ತುವ ಕಾಮಗಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಲಾಗಿದ್ದು, ಅಂತರ್ಜಲ ಅಭಿವೃದ್ಧಿಗೆ ಪೂರಕವಾಗುವ ಕಾಮಗಾರಿಗಳನ್ನು ಕೂಲಿ ಕಾರ್ಮಿಕರಿಂದಲೇ ಮಾಡಿಸಿ ಯಶಸ್ವಿಯಾಗಿರುವುದು ಪಂಚಾಯ್ತಿಯ ಹೆಮ್ಮೆಯಾಗಿದೆ.
ನೆಲ್ಕುದ್ರಿ ಗ್ರಾಪಂನಲ್ಲಿ ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಯಶಸ್ವಿಯಾಗಿದ್ದಾರೆ. ಬದು ನಿರ್ಮಾಣ, ಕೃಷಿ ಹೊಂಡ ನಿರ್ಮಾಣ ಸೇರಿ ವಿವಿಧ ವೈಯಕ್ತಿಕ ಕಾಮಗಾರಿಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಪಂಚಾಯ್ತಿ ಪಿಡಿಒ, ಜನಪ್ರತಿನಿ ಧಿಗಳ ಮತ್ತು ಸಿಬ್ಬಂದಿಯ ನಿರಂತರ ಶ್ರಮದಿಂದ ಗಾಂಧಿ ಗ್ರಾಮ ಪುರಸ್ಕಾರ ಲಭಿಸಿದೆ. – ಹಾಲಸಿದ್ದೇಶ್ ಪೂಜೇರಿ, ತಾಪಂ ಇಒ.
ಗಾಂಧಿ ಗ್ರಾಮ ಪುರಸ್ಕಾರ ಇನ್ನಷ್ಟು ಜವಾಬ್ದಾರಿಯನ್ನು ಹೆಚ್ಚಿಸಿದೆ. ಗ್ರಾಪಂ ವ್ಯಾಪ್ತಿಯಲ್ಲಿ ಶೌಚಾಲಯ, ಶುದ್ಧ ಕುಡಿಯುವ ನೀರು, ಉದ್ಯೋಗ ಖಾತ್ರಿ ಯೋಜನೆಯನ್ನುಸಮರ್ಪಕವಾಗಿ ಜಾರಿಗೊಳಿಸಿ, ಮಾನವ ದಿನಗಳನ್ನು ನೀಡಿ ಸೃಜಿಸಲಾಗಿದೆ. ಪಂಚಾಯ್ತಿಯಎಲ್ಲ ದಾಖಲೆಗಳನ್ನು ಸಮರ್ಪಕವಾಗಿನಿರ್ವಹಿಸುರುವುದರಿಂದ ಪ್ರಶಸ್ತಿ ಸಿಕ್ಕಿದೆ.- ಲಕ್ಷ್ಮಣ, ಪಿಡಿಒ, ನೆಲ್ಕುದ್ರಿ ಗ್ರಾಪಂ.
ನೂತನ ನೆಲ್ಕುದ್ರಿ ಗ್ರಾಪಂನಲ್ಲಿ ಉದ್ಯೋಗ ಖಾತ್ರಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದ್ದಾರೆ. ರೈತರಿಗೆ ಅನುಕೂಲಕಾರಿಯಾಗುವಂತಹ ಕಾಮಗಾರಿಗಳಿಗೆ ಕ್ರಿಯಾಯೋಜನೆ ರೂಪಿಸಿ ಜಾರಿಗೊಳಿಸಿದ್ದಾರೆ. –ಸಿದ್ದಪ್ಪ ಪೂಜಾರ, ಚಿಮ್ನಳ್ಳಿ ಗ್ರಾಮಸ್ಥರು.
-ಸುರೇಶ ಯಳಕಪ್ಪನವರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.