ಗಾಂಧೀಜಿ ಸಮಾಜವಾದಿ ತತ್ವ ಎಲ್ಲರಿಗೂ ಸ್ಫೂರ್ತಿ
ವಿವಿಧ ದೃಷ್ಟಿಕೋನಗಳ ಬಗ್ಗೆ ಸಂಶೋಧನೆಗಳು ನಡೆಯುವುದು ಅನಿವಾರ್ಯವಾಗಿದೆ
Team Udayavani, Aug 16, 2022, 6:05 PM IST
ಹೊಸಪೇಟೆ: ಪ್ರಸ್ತುತ ದೇಶ ಪ್ರೇಮವನ್ನು ಭಾವನಾತ್ಮಕತೆಗಿಂತ, ಶ್ರಮ, ಸಂಸ್ಕೃತಿ, ಕಾಯಕ, ತತ್ವ ಸಿದ್ಧಾಂತಗಳ ಬೌದ್ಧಿಕತೆಯಿಂದ ಮೂಡಿಸುವುದು ನಮ್ಮೆಲ್ಲರ ಗುರಿಯಾಗಲಿ ಎಂದು ಕನ್ನಡ ವಿಶ್ವವಿದ್ಯಾಲಯದ ಚರಿತ್ರೆ ವಿಭಾಗ ಪ್ರಾಧ್ಯಾಪಕ ಡಾ| ಚಿನ್ನಸ್ವಾಮಿ ಸೋಸಲೆ ಅಭಿಪ್ರಾಯಪಟ್ಟರು.
ಕನ್ನಡ ವಿಶ್ವವಿದ್ಯಾಲಯದ ಲೋಹಿಯ ಅಧ್ಯಯನದ ಪೀಠದ ವತಿಯಿಂದ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ “ಸ್ವಾತಂತ್ರ್ಯ ಚಳವಳಿ: ಸಮಾಜವಾದಿ ದೃಷ್ಟಿಕೋನ’ ವಿಶೇಷ ಉಪನ್ಯಾಸದಲ್ಲಿ ಸೋಮವಾರ ಮಾತನಾಡಿದರು. ಸ್ವಾತಂತ್ರ್ಯ ಚಳವಳಿ ಜೊತೆ ಜೊತೆಗೆ ಸಮಾಜವಾದವು ರೂಪುಗೊಂಡಿತು ಎಂದರು.
ಸ್ಥಳೀಯ ಹೋರಾಟಗಳು, ಚಳವಳಿಗಳಾವುವು 1930ರವರೆಗೆ ದೃಷ್ಟಿಕೋನದಿಂದ ಕೂಡಿರಲಿಲ್ಲ. ಪೂನಾ ಒಪ್ಪಂದದ ನಂತರ ನಡೆದ ಎಲ್ಲ ಸ್ವಾತಂತ್ರ್ಯ ಚಳವಳಿಗಳು ಸಮಾಜವಾದದ ದೃಷ್ಟಿಕೋನದ ಹಿನ್ನೆಲೆಯಲ್ಲಿ ನಡೆಯಲಾರಂಭಿಸಿದವು. ಮಹಾತ್ಮಗಾಂಧಿಧೀಜಿಯವರು ಕೂಡ ಸಮಾಜವಾದದ ದೃಷ್ಟಿಕೋನದದಲ್ಲಿ ಹರಿಜನ ಪತ್ರಿಕೆಯಯನ್ನು ಹುಟ್ಟು ಹಾಕಿದರು. ಗಾಂಧೀಜಿಯವರು ಅಳವಡಿಸಿಕೊಂಡ ಸಮಾಜವಾದಿ ತತ್ವ ಮುಂದೆ ಯುವಜನರಿಗೆ ಸ್ಫೂರ್ತಿಯಾಯಿತು ಎಂದು ಹೇಳಿದರು.
ವಿಶ್ವವಿದ್ಯಾಲಯ ಕುಲಪತಿ ಡಾ| ಸ.ಚಿ. ರಮೇಶ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ, ಸ್ವಾತಂತ್ರ್ಯ ಹೋರಾಟದಲ್ಲಿ ಕಾರ್ಮಿಕ ದೃಷ್ಟಿಕೋನ, ಮಹಿಳಾ ದೃಷ್ಟಿಕೋನ, ಸಮಾಜವಾದಿ ದೃಷ್ಟಿಕೋನ ಹೀಗೆ ವಿವಿಧ ದೃಷ್ಟಿಕೋನಗಳು ಮಹತ್ವದ ಪಾತ್ರವಹಿಸಿವೆ. ಈ ವಿವಿಧ ದೃಷ್ಟಿಕೋನಗಳ ಬಗ್ಗೆ ಸಂಶೋಧನೆಗಳು ನಡೆಯುವುದು ಅನಿವಾರ್ಯವಾಗಿದೆ ಎಂದರು.
75ನೇ ಅಮೃತ ಮಹೋತ್ಸವದ ಸಂದರ್ಭದಲ್ಲಿ ಸದೃಢ ದೇಶ ನಿರ್ಮಾಣಕ್ಕೆ ನಾವೆಲ್ಲರೂ ಸದೃಢ ಮನಸ್ಸು ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಈ ಸಂದರ್ಭದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಗುಂಡುರಾವ್ ದೇಸಾಯಿ ಅವರನ್ನು ಸನ್ಮಾನಿಸಲಾಯಿತು. ಕನ್ನಡ ವಿಶ್ವವಿದ್ಯಾಲಯದ ಕುಲಸಚಿ ಡಾ| ಎ. ಸುಬ್ಬಣ್ಣ ರೈ ಮಾತನಾಡಿದರು.
ಉಪಕುಲಸಚಿವ ಡಾ| ಎ. ವೆಂಕಟೇಶ ಸ್ವಾತಂತ್ರ್ಯ ಹೋರಾಟಗಾರರನ್ನು ಪರಿಚಯಿಸಿದರು. ಆಜಾದಿ ಕಾ ಅಮೃತ ಮಹೋತ್ಸವದ ಸಂಯೋಜನಾಧಿಕಾರಿ ಡಾ| ಮೋಹನ್ ರಾವ್ ಪಾಂಚಾಳ ಮತ್ತು ವಿವಿಧ ವಿಭಾಗಗಳ ಅಧ್ಯಾಪಕರು, ಸಂಶೋಧನಾರ್ಥಿಗಳು ಬೋಧಕೇತರ ಸಿಬ್ಬಂದಿಗಳು ಇದ್ದರು. ಮಹಿಳಾ ಅಧ್ಯಯನ ವಿಭಾಗದ ಸಂಶೋಧನಾರ್ಥಿ ಪುಷ್ಪ ನಿರೂಪಿಸಿದರು. ಮಂಜುನಾಥ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.