ಮನೆ ಮನೆಗೆ ಗಂಗೆ ಯೋಜನೆ ಕಾರ್ಯಾರಂಭ
Team Udayavani, Jul 3, 2021, 10:20 AM IST
ಸಿರಗುಪ್ಪ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಅನುಷ್ಠಾನಗೊಳಿಸುತ್ತಿರುವ “ಜಲ್ ಜೀವನ್ ಮಿಷನ್’ ಯೋಜನೆಯಡಿಯಲ್ಲಿ ಮನೆ ಮನೆಗೆ ಗಂಗೆ ಯೋಜನೆ ತಾಲೂಕಿನಲ್ಲಿ ಜಾರಿಗೆಬಂದಿದ್ದು, ಇದರ ಅಡಿಯಲ್ಲಿ ತಾಲೂಕಿನ ಪ್ರತಿಗ್ರಾಮಗಳ ಪ್ರತಿ ಮನೆಗೂ ನಲ್ಲಿ ಸಂಪರ್ಕದ ಮೂಲಕ ಕುಡಿಯುವ ನೀರು ಪೂರೈಸಲಾಗುವುದು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೇತೃತ್ವದ ಜಿಲ್ಲಾ ಕುಡಿಯುವ ನೀರು ಮತ್ತು ನೈರ್ಮಲ್ಯ ಸಮಿತಿಯು ಯೋಜನೆಯ ಮೇಲ್ವಿಚಾರಣೆ ಹಾಗೂ ಅನುಷ್ಠಾನದ ಜವಾಬ್ದಾರಿ ಹೊತ್ತಿದೆ.
2020-21ನೇ ಸಾಲಿನ ಮೊದಲನೇ ಹಂತದಲ್ಲಿ ತಾಲೂಕಿನ ಮೈಲಾಪುರ, ಎಚ್. ಹೊಸಳ್ಳಿ, ಹಾಗಲೂರು, ನಾಡಂಗ ಕ್ಯಾಂಪ್, ಕೊತ್ತಲಚಿಂತ, ಅಗಸನೂರು, ನಾಡಂಗ, ಎ.ಕೆ.ಹಾಳು, ಬಸರಹಳ್ಳಿ, ಬಿ.ಜಿ.ದಿನ್ನೆ, ಮಾಟಸೂಗೂರು ಕ್ಯಾಂಪ್, ತೊಂಡೆಹಾಳು, ಟಿ.ರಾಂಪುರ, ಉತ್ತನೂರು, ಮುದೇನೂರು ಮುಂತಾದ ಗ್ರಾಮಗಳಲ್ಲಿ ಮನೆ ಮನೆಗೆ ಗಂಗೆ ಯೋಜನೆಯನ್ನು ಅನುಷ್ಠಾನಗೊಳಿಸಲು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.
ಊಳೂರು, ಹಳೇಕೋಟೆ, ಬಲಕುಂದಿ, ಬೂದುಗುಪ್ಪ, ಉಪ್ಪಾರಹೊಸಳ್ಳಿ, ಬೊಮ್ಮಲಾಪುರ,ಇಟಿಗಿಹಾಳು, ಬಿ.ಎಂ.ಸೂಗೂರು, ಅಗಸನೂರು, ಕೆ.ಸೂಗೂರು, ಮಾಟಸೂಗುರು, ಕರೂರು,ರಾರಾವಿ, ಕೆ.ಬೆಳಗಲ್ಲು ಮುಂತಾದ ಗ್ರಾಮಗಳಲ್ಲಿ ಈಯೋಜನೆಯನ್ನು ಜಾರಿಗೊಳಿಸಲು ಕ್ರಿಯಾಯೋಜನೆಸಿದ್ಧಪಡಿಸಲಾಗಿದ್ದು, ಅಗಸನೂರು ಮತ್ತು ಕರೂರುಗ್ರಾಮಗಳಲ್ಲಿ ಈ ಕಾಮಗಾರಿಗೆ ಶಾಸಕರು ಭೂಮಿಪೂಜೆನೆರವೇರಿಸಿದ್ದಾರೆ. ತಾಲೂಕಿನ ಟಿ. ರಾಂಪುರ ಗ್ರಾಮದಲ್ಲಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದೆ.
ತಾಲೂಕಿನಲ್ಲಿ ಈಗಾಗಲೇ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಕೆರೆಗಳನ್ನು ನಿರ್ಮಿಸಲಾಗಿದ್ದು, ಗ್ರಾಮಗಳಲ್ಲಿ ಓವರ್‌ಹೆಡ್ ಟ್ಯಾಂಕ್‌ಗಳನ್ನು ನಿರ್ಮಿಸಲಾಗಿದ್ದು, ಕೆರೆಗಳಿಂದ ಓವರ್‌ಹೆಡ್ ಟ್ಯಾಂಕ್‌ಗಳಿಗೆ ನೀರು ಪೂರೈಸಲಾಗುತ್ತಿದೆ. ಅಲ್ಲಿಂದ ಮನೆ ಮನೆಗೆ ಗಂಗೆ ಯೋಜನೆಯಡಿ ಈ ಟ್ಯಾಂಕ್‌ಗಳಿಂದ ಪೈಪ್‌ಲೈನ್ ಮೂಲಕ ಪ್ರತಿ ಮನೆಗೂ ನೀರನ್ನು ತಲುಪಿಸಲಾಗುತ್ತದೆ.
ಗ್ರಾಮೀಣ ಭಾಗದ ಪ್ರತಿಮನೆಗೂ ದಿನದ 24 ಗಂಟೆಗಳ ಕಾಲ ವಾರದಲ್ಲಿ 7 ದಿನವೂ ಕುಡಿಯುವ ನೀರು ಪೂರೈಸುವುದು ಈ ಯೋಜನೆಯ ಮುಖ್ಯಉದ್ದೇಶವಾಗಿರುತ್ತದೆ. ಈ ಯೋಜನೆಯ ವೆಚ್ಚದಲ್ಲಿ ಶೇ. 10ರಷ್ಟು ಫಲಾನುಭವಿಗಳು ಭರಿಸಬೇಕಾಗುತ್ತದೆ. ಕಾಮಗಾರಿ ಮುಕ್ತಾಯವಾದ ಬಳಿಕ ನಿರ್ವಹಣೆ ಜವಾಬ್ದಾರಿಯನ್ನು ಆಯಾ ಗ್ರಾಮ ಪಂಚಾಯಿತಿಗಳಿಗೆನೀಡಲಾಗುವುದು. ಕಾಮಗಾರಿ ಪೂರ್ಣಗೊಂಡನಂತರ ನಿವಾಸಿಗಳಿಂದ ಅವರ ಪಾಲಿನ ಮೊತ್ತವನ್ನು ಸಂಗ್ರಹಿಸಲಾಗುತ್ತದೆ. ಪ್ರತಿ ಮನೆಯಲ್ಲಿ ಸಂಪರ್ಕಕ್ಕೂ ಮೀಟರ್ ಅಳವಡಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ಗ್ರಾಮಸ್ಥರು ನೀರಿನ ಶುಲ್ಕವನ್ನುಪಾವತಿಸಬೇಕಾಗಬಹುದೆಂದು ಅ ಧಿಕಾರಿಗಳು ತಿಳಿಸಿದ್ದಾರೆ.
2024ರ ವೇಳಗೆ ಎಲ್ಲ ಗ್ರಾಮೀಣ ಕುಟುಂಬಗಳಿಗೆಕೊಳವೆ ನೀರು ಸರಬರಾಜು ಮಾಡುವುದು ಈ ಯೋಜನೆಯ ಉದ್ದೇಶವಾಗಿದ್ದು, ದೇಶಾದ್ಯಂತ ಸುಸ್ಥಿರ ನೀರು ಸರಬರಾಜು ನಿರ್ವಹಣೆಯ ಉದ್ದೇಶಗಳನ್ನು ಸಾಧಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಂದಾಗಿವೆ.
ಮಳೆಕೊಯ್ಲು, ಅಂತರ್ಜಲ ಪುನರ್‌ಭರ್ತಿ, ಕೃಷಿಯಲ್ಲಿ ಮರುಬಳಕೆಗಾಗಿ ಮನೆ ತ್ಯಾಜ್ಯ ನೀರನ್ನುನಿರ್ವಹಿಸಲು ಸ್ಥಳೀಯ ಮೂಲಸೌಕರ್ಯ ರಚಿಸುವ ಗುರಿ ಹೊಂದಿದೆ. ಜೊತೆಗೆ ಪಾಯಿಂಟ್ ರೀಚಾರ್ಜ್, ಸಣ್ಣ ನೀರಾವರಿ ಟ್ಯಾಂಕ್‌ಗಳ ನಿರ್ಜಲೀಕರಣ, ಕೃಷಿಗೆ ಗ್ರೇವಾಟರ್ ಬಳಕೆ ಮತ್ತು ಮೂಲಕ ಸುಸ್ಥಿರತೆಯಂಥ ವಿವಿಧ ನೀರಿನ ಸಂರಕ್ಷಣೆಯ ಪ್ರಯತ್ನಗಳನ್ನು ಆಧರಿಸಿದೆ.
ಅಂತರ್ಜಲ ಮಟ್ಟ ಕಡಿಮೆಯಾಗುತ್ತಿರುವುದರಿಂದ ದೇಶದಲ್ಲಿ ಇಂದು ನೀರಿನ ಸಂರಕ್ಷಣೆಯ ತುರ್ತು ಅವಶ್ಯಕತೆಯಾಗಿದೆ. ಆದ್ದರಿಂದ ಜಲಜೀವನ್ ಮಿಷನ್ ಸ್ಥಳೀಯ ಮಟ್ಟದಲ್ಲಿ ಸಮಗ್ರ ಬೇಡಿಕೆ ಮತ್ತು ನೀರಿನ ಪೂರೈಕೆ ನಿರ್ವಹಣೆಯತ್ತ ಗಮನ ಹರಿಸಲಿದೆ.
ತಾಲೂಕಿನ 45 ಗ್ರಾಮಗಳಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಮನೆ ಮನೆಗೆ ನೀರು ಪೂರೈಕೆ ಮಾಡುವ ಯೋಜನೆ ಕೈಗೆತ್ತಿಕೊಳ್ಳಲಾಗಿದ್ದು, ಒಟ್ಟು 3 ಕೋಟಿ 22 ಲಕ್ಷ ರೂ. ವೆಚ್ಚದಲ್ಲಿ ಒಟ್ಟು 8774 ಮನೆಗಳಿಗೆ ನೀರು ಪೂರೈಸುವ ಉದ್ದೇಶ ಹೊಂದಿದೆ. ಈಗಾಗಲೇಕೆಲ ಕಾಮಗಾರಿಗಳು ಪ್ರಾರಂಭವಾಗಿದ್ದು, ಇನ್ನು ಕೆಲವು ಟೆಂಡರ್ ಹಂತದಲ್ಲಿವೆ. –ರವೀಂದ್ರನಾಯ್ಕ, ಎಇಇ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ
-ಆರ್. ಬಸವರೆಡಿ ಕರೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ಐದು ವರ್ಷದ ಮಗುವಿನ ಅತ್ಯಾಚಾರ ನಡೆಸಿದ್ದ ಆರೋಪಿಗೆ ಗುಂಡೇಟು
ಮೀಟರ್ ಬಡ್ಡಿ ದಂಧೆಗೆ ಮನನೊಂದು ವಿಎಸ್‌ಕೆ ವಿವಿ ಅಟೆಂಡರ್ ಆತ್ಮಹತ್ಯೆ… ಪೊಲೀಸರಿಂದ ತನಿಖೆ
ಆಕಳುಗಳ ಕೆಚ್ಚಲು ಕೊಯ್ದ ಪ್ರಕರಣ; ಶಾಸಕ,ಉಸ್ತುವಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ
Makar Sankranti: ಹಂಪಿಗೆ ಹರಿದು ಬಂದ ಭಕ್ತ ಜನ ಸಾಗರ!
Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.